Read - < 1 minute
- ಧರ್ಮ ಅಧರ್ಮಗಳಲ್ಲಿನ ನಂಬುಗೆಗಿಂತ, ಅವರವರ ಭಕುತಿಗೆ ತಕ್ಕಂತೆ ಅವರವರ ಭಾವಕ್ಕೆ ತಕ್ಕಂತೆ ಅವರವರ ಭಾವಕ್ಕೆ ತಕ್ಕಂತೆ ನಡೆದುಕೊಳ್ಳುವುದನ್ನೇ ಧರ್ಮವಾಗಿಸಿಕೊಂಡಿದ್ದೇವೆ.
- ಸಾಲಕ್ಕೆ ಬಡ್ಡಿ ಎನ್ನುವುದು ಕೃತಜ್ಞತೆಗಾಗಿ ಕೊಡುವ ಧನವಾಗಿರಬೇಕೇ ಹೊರತು, ಬಡವರ ರಕ್ತ ಹೀರುವ ಜಿಗಣೆಯಾಗಬಾರದು.
- ಒಂದು ಅಗುಳು ಅನ್ನದ ಹಿಂದೆ ಸಾವಿರಾರು ಜನರ ಪರಿಶ್ರಮವಿದೆ, ಆದರಿಂದ ಪ್ರಸಾದ ಸೇವಿಸುವಾಗ ವ್ಯರ್ಥ ಮಾಡುವುದು ಶ್ರೇಯಸ್ಕರವಲ್ಲ.
- ದೇಹಕ್ಕೆ ಹಸಿವಾದರೆ ಪ್ರಸಾದದ ಅಗತ್ಯವುಂಟು, ಹಾಗೆಯೇ ಮನಸ್ಸಿನ ಹಸಿವಿಗೆ ಪ್ರಾಾರ್ಥನೆಯ ಅಗತ್ಯವುಂಟು. ಪ್ರಸಾದ ಸೇವನೆಯಲ್ಲೂ, ಪ್ರಾಾರ್ಥನೆಯಲ್ಲೂ ಏಕಾಗ್ರತೆ ಅತ್ಯವಶ್ಯಕ.
- ಪ್ರಪಂಚದಲ್ಲಿ ಧರ್ಮ ಯಾವುದು ಎಂದರೆ ಒಂದೇ ಧರ್ಮ, ಅದು ಮನುಷ್ಯ ಧರ್ಮ. ಕತ್ತಲಲ್ಲಿ ಇರುವವನನ್ನು ಬೆಳಕಿಗೆ ಕರೆಯುವುದು ಧರ್ಮ, ಅನ್ನವಿಲ್ಲದವನಿಗೆ ಅನ್ನವಿಕ್ಕುವುದು ಧರ್ಮ, ಬಾಯಾರಿದವನಿಗೆ ನೀರುಣಿಸುವುದು ಧರ್ಮ, ಮತ್ತೊಬ್ಬರ ಕಷ್ಟಕ್ಕೆ ನೆರವಾಗುವುದು ಧರ್ಮವೇ ಪರಂತು ಧರ್ಮ ಗುಡಿ ಗುಂಡಾರಗಳಲ್ಲಿ ನೆಲೆಸಿಲ್ಲ.
- ಜೀವನದಲ್ಲಿ ಒಳ್ಳೆಯ ಭವಿಷ್ಯ ಉಂಟಾಗಬೇಕಾದರೆ, ಗೌರವವಾದ ಬಾಳ್ವಿಕೆ ಉಂಟಾಗಬೇಕಾದರೆ ಕಾಲವನ್ನು ವ್ಯರ್ಥ ಮಾಡದೆ ಜ್ಞಾನ ಸಂಪಾದನೆ ಮಾಡಬೇಕು.
Discussion about this post