ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಪಿಲೀಯೇಶನ್ ಅನ್ನು ಬ್ಯಾಡ್ಮಿಂಟನ್ ಅಸೋಸಿಯೇಷನ್ ಆಪ್ ಇಂಡಿಯಾ ರದ್ದುಪಡಿಸಿದೆ ಇದು ತಮ್ಮ ಹೋರಾಟಕ್ಕೆ ಸಂದ ಜಯ ಎಂದು ಕರ್ನಾಟಕ ಸ್ಡೇಟ್ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ಉಡುಪಿ ಶಾಸಕ ರಘಪತಿ ಭಟ್ MLA Raghupathi Bhat ತಿಳಿಸಿದರು
ಬೆಂಗಳೂರಿನಲ್ಲಿಂದು ನಡೆದ ಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಲಿ ಬೆಂಗಳೂರು ಬ್ಯಾಡ್ಮಿಂಟನ್ ಕ್ಲಬ್ ಸದಸ್ಯರಿಗೆ ಮಾತ್ರ ಕ್ರೀಡಾ ಚಟುವಟಿಕೆಗೆ ಸಂಬಂಧಿಸಿದ ಲಾಭ ದೊರೆತಿದ್ದು. ಜಿಲ್ಲಾ ಬ್ಯಾಡ್ಮಿಂಟನ್ ಸಂಘಕ್ಕೆ ಯಾವುದೇ ಲಾಭ ದೊರೆಯುತ್ತಿರಲಿಲ್ಲ. ಜತೆಗೆ ಈಗಿರುವ ಬ್ಯಾಡ್ಮಿಂಟನ್ ಆಪ್ ಇಂಡಿಯಾದ ಬೈಲಾ ಹಾಗೂ ಕೇಂದ್ರ ಸರ್ಕಾರದ ನೀತಿಗೆ ವಿರುದ್ಧವಾಗಿರುವುದರಿಂದ ಈ ಅಫಿಲಿಯೇಶನ್ ರದ್ದು ಪಡಿಸಿದೆ ಎಂದು ತಿಳಿಸಿದರು.

Also read: ಸೊರಬದಲ್ಲಿ ಭಾರೀ ಮಳೆಯಿಂದ ಅಪಾರ ಹಾನಿ: ಪರಿಹಾರಕ್ಕೆ ಜೆಡಿಎಸ್ ಆಗ್ರಹ
ಶಾಸಕ ರಘಪತಿ ಭಟ್ ನೇತೃತ್ವದ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಷನ್ ಗಳ ತಂಡ ಬ್ಯಾಡ್ಮಿಂಟನ್ ಅಸೋಸಿಯೇಷನ್ ಆಪ್ ಇಂಡಿಯಾ ರಾಷ್ಟ್ರಾಧ್ಯಕ್ಷ ರಾದ ಅಸ್ಸಾಂ ರಾಜ್ಯದ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರನ್ನು ಬೇಟಿಯಾಗಿ ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ನ ನ್ಯೂ ನತೆಗಳ ಬಗ್ಗೆ ಮನವರಿಕೆ ಮಾಡಿದ್ದು. ಇವರ ದಾಖಲೆಯನ್ನು ಪರಿಶೀಲಿಸಿ ಅಫಿಲೀಯೇಶನ್ ರದ್ದು ಪಡಿಸಿದೆ ಎಂದರು.

ಬೈಲಾ ನಿಯಮಗಳಿಗೆ ವಿರುದ್ದವಾಗಿ ನಡೆದುಕೊಳ್ಳುತ್ತಿರುವ ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಫಿಲೀಯೇಶನ್ ರದ್ದು ಆಗಿದ್ದು. ಈ ಹಿನ್ನಲೆಯಲ್ಲಿ ಶಾಸಕ ರಘಪತಿ ಭಟ್ ನೇತೃತ್ವದ ಕರ್ನಾಟಕ ಸ್ಟೇಟ್ ಬ್ಯಾಡ್ಮಿಂಟನ್ ಅಸೋಸಿಯೇಷನ್ ಗೆ ಮಾನ್ಯತೆ ನೀಡುವಂತೆ ಬಿಎಐ ಗೆ ಮನವಿ ಮಾಡುವ ಕುರಿತು ಇಂದು ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post