ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸಿಎಂ ಮಾಧ್ಯಮ ಕಾರ್ಯದರ್ಶಿ ಗುರುಲಿಂಗಸ್ವಾಮಿ ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಜಿಮ್ನಲ್ಲಿ ವರ್ಕೌಟ್ ಮಾಡುತ್ತಿದ್ದ ಸಂದರ್ಭದಲ್ಲಿ ಎದೆ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಮೂಲತಃ ರಾಮದುರ್ಗದವರಾದ ಗುರುಲಿಂಗಸ್ವಾಮಿ ಸಿಎಂ ಮಾಧ್ಯಮ ಕಾರ್ಯದರ್ಶಿಯಾಗಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು. ಬಸವರಾಜ ಬೊಮ್ಮಾಯಿ Basavaraja Bommai ಗೃಹ ಸಚಿವರಾದಾಗಿನಿಂದ ಮಾಧ್ಯಮ ವರ್ಗ ನೋಡಿಕೊಳ್ಳುತ್ತಿದ್ದ ಅವರು, ಹಲವು ಪತ್ರಿಕೆಗಳಲ್ಲಿ ಮತ್ತು ಸುದ್ದಿವಾಹಿನಿಗಳಲ್ಲಿ ಹಾಗೂ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಹಿರಿಯ ವರದಿಗಾರರಾಗಿ ಸೇವೆ ಸಲ್ಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post