ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸಂತೋಷ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಆರೋಪಿತರಾಗಿರುವ ಕೆ.ಎಸ್. ಈಶ್ವರಪ್ಪ K S Eshwarappa ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರವೂ ತಮ್ಮ ದೈನಂದಿನ ಹಾಗೂ ರಾಜಕೀಯ ಚಟುವಟಿಕೆಗಳಲ್ಲಿ ಎಂದಿನಂತೆ ಉತ್ಸಾಹದಿಂದ ತೊಡಗಿಕೊಂಡಿದ್ದು, ಹುಟ್ಟು ಹೋರಾಟದ ಗುಣಕ್ಕೆ ತಕ್ಕಂತೆ ನಡೆದುಕೊಳ್ಳುತ್ತಿದ್ದಾರೆ.
ನಿನ್ನೆ ಸಂಜೆ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ನಂತರ ಇಂದು ಎಂದಿನಂತೆ ತಮ್ಮ ದಿನಚರಿಯಲ್ಲಿ ಹಾಗೂ ರಾಜಕೀಯ ಚಟುವಟಿಕೆಗಳಲ್ಲಿ ಈಶ್ವರಪ್ಪ ತೊಡಗಿಕೊಂಡಿದ್ದರು.
ಇನ್ನು, ರಾಜೀನಾಮೆ ನೀಡಿದ ಬೆನ್ನಲ್ಲೇ ಈಶ್ವರಪ್ಪ ಅವರ ಬೆಂಬಲಕ್ಕೆ ವಿವಿಧ ಮಠಾಧೀಶರು ಬೆಂಬಲ ಸೂಚಿಸಿದ್ದಾರೆ.
Also read: ಶಿಕಾರಿಪುರ: ಶ್ರೀ ಹುಚ್ಚರಾಯ ಸ್ವಾಮಿ ಬ್ರಹ್ಮರಥೋತ್ಸವಕ್ಕೆ ಅದ್ಧೂರಿ ಚಾಲನೆ
ಇಂದು ಮುಂಜಾನೆ, ಕಾಗಿನೆಲೆ ಕನಕಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ, ಚಿತ್ರದುರ್ಗ ಭೋವಿ ಪೀಠದ ಶ್ರೀ ಇಮ್ಮಡಿ ಸಿದ್ದರಾಮ ಸ್ವಾಮೀಜಿ, ಚನ್ನಯ್ಯ ಪೀಠದ ಶ್ರೀಮಾದಾರ ಚನ್ನಯ್ಯ ಸ್ವಾಮೀಜಿ, ಹೊಸದುರ್ಗ ಕುಂಚಟಿಗ ಮಹಾಸಂಸ್ಥಾನದ ಶ್ರೀಪುರುಷೋತ್ತಮಾನಂದ ಪುರಿ ಸ್ವಾಮೀಜಿ, ಹೊಸನಗರ ಕನಕಗುರು ಶಾಖಾಪೀಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಚಿತ್ರದುರ್ಗ ಮಡಿವಾಳ ಗುರುಪೀಠದ ಶ್ರೀ ಮಡಿವಾಳ ಮಾಚೀದೇವ ಸ್ವಾಮೀಜಿ, ಶಿವಮೊಗ್ಗದ ರೇಣುಕಾನಂದ ಸ್ವಾಮೀಜಿ ಹಾಗೂ ಚಿತ್ರದುರ್ಗ ಮೇದಾರ ಗುರುಪೀಠದ ಇಮ್ಮಡಿ ಕೇತೇಶ್ವರ ಸ್ವಾಮೀಜಿ ಅವರುಗಳು ಈಶ್ವರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು.
ಈಶ್ವರಪ್ಪ ಅವರೊಂದಿಗೆ ಮಾತನಾಡಿದ ಸ್ವಾಮೀಜಿಗಳು ರಾಜಕೀಯದಾಟದಲ್ಲಿ ಇಂತಹ ಪರೀಕ್ಷೆ ತಮಗೆ ಎದುರಾಗಿದೆ. ಈ ಅಗ್ನಿಪರೀಕ್ಷೆಯಲ್ಲಿ ತಾವು ನಿರ್ದೋಷಿಯಾಗಿ ಹೊರಬರುತ್ತೀರಿ. ನಿಮ್ಮೊಂದಿಗೆ ನಾವಿದ್ದೇವೆ ಎಂದು ಧೈರ್ಯ ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post