ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಇಂದಿನಿಂದ ಎಸ್ ಎಸ್ ಎಲ್‌ಸಿ ಪರೀಕ್ಷೆ SSLC Exam ಬರೆಯುವ ಮಹಾಲಕ್ಷ್ಮಿ ಲೇ ಔಟ್ ವಿಧಾನಸಭಾ ಕ್ಷೇತ್ರದ ಶಾಲೆಗಳ ವಿದ್ಯಾರ್ಥಿಗಳಿಗೆ ಸ್ಥಳೀಯ ಶಾಸಕರೂ ಆದ ಅಬಕಾರಿ ಸಚಿವ ಕೆ.ಗೋಪಾಲಯ್ಯ Minister Gopalaiah ಅವರು ಸ್ಯಾನಿಟೈಸರ್, ಮಾಸ್ಕ್ ಮತ್ತು ಪೆನ್ನುಗಳನ್ನು ವಿತರಿಸಿ ಶುಭ ಹಾರೈಸಿದರು.
ಮಹಾಲಕ್ಷ್ಮಿ ಲೇ ಔಟ್ ಕ್ಷೇತ್ರ ವ್ಯಾಪ್ತಿಯ ವಿದ್ಯಾವರ್ಧಕ ಶಾಲೆ ಮತ್ತು ಪಾಂಚಜನ್ಯ ಶಾಲೆಯಲ್ಲಿ ಆರಂಭಿಸಿರುವ ಕೇಂದ್ರಗಳಿಗೆ ಭೇಟಿ ನೀಡಿ ಆತ್ಮಸ್ಥೈರ್ಯ ತುಂಬಿದರು.
ಕ್ಷೇತ್ರ ವ್ಯಾಪ್ತಿಯಲ್ಲಿ 15 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, 3451 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಈ ಎಲ್ಲ ಮಕ್ಕಳಿಗೂ ಸಚಿವರು ಮಾಸ್ಕ್, ಸ್ಯಾನಿಟೈಸರ್ ಮತ್ತು ಪರೀಕ್ಷೆ ಬರೆಯಲು ಪೆನ್ನುಗಳನ್ನು ವಿತರಿಸಿದರು.
Also read: ಮುಸ್ಲಿಂ ಉದ್ಯಮಿ ಜೊತೆ ಕೈಜೋಡಿಸಿದ ಬಿಜೆಪಿಯದು ನಕಲಿ ಹಿಂದುತ್ವದ ಡೋಂಗಿತನ: ಯಮುನಾ ರಂಗೇಗೌಡ
ಈ ಸಂದರ್ಭದಲ್ಲಿ ಬಿಬಿಎಂಪಿ ಮಾಜಿ ಉಪಮೇಯರ್ ಎಸ್.ಹರೀಶ್, ವೆಂಕಟೇಶ್ ಮೂರ್ತಿ, ವೆಂಕಟೇಶ್ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post