ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕೋವಿಡ್ ಪ್ರಕರಣಗಳು ಉಲ್ಬಣಗೊಳ್ಳುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಕೊರೋನಾ ಮಾರ್ಗಸೂಚಿಯನ್ನು ಜಾರಿಗೆ ತರಲಾಗಿದೆ.
ಈ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಕೋವಿಡ್ ಪ್ರಕರಣಗಳು ಕಡಿಮೆಯಾಗಿದ್ದ ಹಿನ್ನೆಲೆಯಲ್ಲಿ ಫೆ.28ರಿಂದ ರಾಜ್ಯದಲ್ಲಿ ಕೊರೋನಾ ನಿರ್ಬಂಧಗಳನ್ನು ತೆಗೆದುಹಾಕಲಾಗಿತ್ತು. ಹಾಗೂ ದೈನಂದಿನ ಚಟುವಟಿಕೆಗಳಿಗೆ ಸಾರ್ವಜನಿಕರಿಗೆ ಮುಕ್ತ ಅವಕಾಶ ನೀಡಲಾಗಿತ್ತು. ಆದರೆ, ಪ್ರಸ್ತುತ, ದೆಹಲಿ, ಹರಿಯಾಣ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳವಾಗುತ್ತಿರುವುದನ್ನು ಮನಗಂಡು, ಸಲಹಾ ಸಮಿತಿ ಶಿಫಾರಸ್ಸಿನ ಮೇರೆಗೆ ರಾಜ್ಯದ ಜನರ ಹಿತದೃಷ್ಟಿಯಿಂದ ಪೂರ್ವಬಾವಿ ಕ್ರಮವಾಗಿ ಕೊರೋನಾ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.
Also read: ಬೆಂಗಳೂರು ಪ್ರೆಸ್ ಕ್ಲಬ್ ಗೆ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಭೇಟಿ
ನೂತನ ಕೊರೋನಾ ಮಾರ್ಗಸೂಚಿಯಲ್ಲಿನ ನಿಯಮಗಳೇನು?
ಸಾರ್ವಜನಿಕ ಸ್ಥಳಗಳು, ಕೆಲಸದ ಸ್ಥಳಗಳಲ್ಲಿ ಮತ್ತು ಸಾರಿಗೆ ಸಮಯದಲ್ಲಿ ಮುಖ ಕವಚ/ಮಾಸ್ಕ್ ಧರಿಸುವುದು ಕಡ್ಡಾಯ
ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು ದಂಡದೊಂದಿಗೆ ಶಿಕ್ಷಾರ್ಹವಾಗಿರುತ್ತದೆ
ಸಾರ್ವಜನಿಕ ಸ್ಥಳಗಳಲ್ಲಿ ವ್ಯಕ್ತಿಗಳು ಕನಿಷ್ಠ 2 ಅಡಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು
ಸ್ಥಳೀಯ ಅಧಿಕಾರಿಗಳು ಇದರ ಕಾನೂನುಗಳು, ನಿಯಮಗಳು ಅಥವಾ ನಿಬಂಧನೆಗಳಿಗೆ ಅನುಗುಣವಾಗಿ ಶಿಕ್ಷೆ ನೀಡಬಲ್ಲ ಅಧಿಕಾರ ಹೊಂದಿರುತ್ತಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post