ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕೋವಿಡ್ Covid ಸಾಂಕ್ರಾಮಿಕದ ಹಿನ್ನಲೆಯಲ್ಲಿ ಸುಮಾರು ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ “ಉಚಿತ ಸಾಮೂಹಿಕ ವಿವಾಹ – ಸಪ್ತಪದಿ” ಕಾರ್ಯಕ್ರಮವನ್ನು ಮರುಚಾಲನೆಗೊಳಿಸಲು ಸಚಿವೆ ಶಶಿಕಲಾ ಜೊಲ್ಲೆ Minister Shashikala Jolle ಆದೇಶ ಹೊರಡಿಸಿದ್ದಾರೆ.
ಮದುವೆಗೆ ದುಂದು ವೆಚ್ಚ ಮಾಡಿ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಒಳಗಾಗುವುದನ್ನು ತಪ್ಪಿಸಲು ಕರ್ನಾಟಕ ಸರ್ಕಾರ ಉಚಿತ “ಸಪ್ತಪದಿ ಸಾಮೂಹಿಕ ವಿವಾಹ” ಯೋಜನೆಯನ್ನು ಪ್ರಾರಂಭಿಸಿತ್ತು. ವಧು ಮತ್ತು ವರನಿಗೆ ಉಡುಗೆ, ಬಂಗಾರದ ಉಡುಗೊರೆ ನೀಡುವ ಜೊತೆಗೆ, ಎರಡೂ ಕಡೆಯ ಬಂಧುಗಳಿಗೆ ಊಟೋಪಚಾರದ ವ್ಯವಸ್ಥೆಯನ್ನು ದೇವಾಲಯ ಆಡಳಿತ ಮಂಡಳಿಗಳೇ ಮಾಡುವುದು ಈ ಯೋಜನೆಯ ವಿಶೇಷ.
ಕೋವಿಡ್ ಕಾರಣವಾಗಿ ಸ್ಥಗಿತಗೊಳಿಸಲಾಗಿದ್ದ ಸಪ್ತಪದಿ ಕಾರ್ಯಕ್ರಮಗಳಿಗೆ ಮರುಚಾಲನೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು. ಈ ಹಿನ್ನಲೆಯಲ್ಲಿ ಏಪ್ರಿಲ್ 28, 2022 ಮತ್ತು ಮೇ 11 ಮತ್ತು 25, 2022 ರಂದು ಆಯ್ದ ದೇವಸ್ಥಾನಗಳಲ್ಲಿ ಉಚಿತ ಸಾಮೂಹಿಕ ವಿವಾಹವನ್ನು ಆಯೋಜಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಈ ಯೋಜನೆಯ ಲಾಭ ಪಡೆದುಕೊಳ್ಳಲಿ ಎನ್ನುವುದು ನಮ್ಮ ಆಶಯವಾಗಿದೆ.
-ಸಚಿವೆ ಶಶಿಕಲಾ ಜೊಲ್ಲೆ

Also read: ಕಳ್ಳನ ಬಂಧನ: 1.77ಲಕ್ಷ ರೂ. ಮೌಲ್ಯದ ಐದು ದ್ವಿಚಕ್ರ ವಾಹನ ವಶ
ಈ ಹಿನ್ನಲೆಯಲ್ಲಿ ಏಪ್ರಿಲ್ ಮತ್ತು ಮೇ, 2022 ರ ಆಯ್ದ ಏ ದರ್ಜೆಯ ದೇವಸ್ಥಾನಗಳಲ್ಲಿ, ಕೋವಿಡ್ ನಿಯಮಾವಳಿಗಳನ್ನು ಪಾಲಿಸುವ ಮೂಲಕ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ – ಸಪ್ತಪದಿ ನಡೆಸಲು ಅದೇಶಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post