ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದ ಯಾವುದೇ ಸರ್ಕಾರಿ ಕಚೇರಿಗಳಲ್ಲಿ ಇನ್ನು ಮುಂದೆ ಅನುಮತಿಯಿಲ್ಲದೇ ಖಾಸಗಿ ವ್ಯಕ್ತಿಗಳು ಫೋಟೋ ಹಾಗೂ ವೀಡಿಯೋ ಚಿತ್ರೀಕರಣ ಮಾಡುವಂತಿಲ್ಲ.
ಹೌದು… ಈ ಕುರಿತಂತೆ ರಾಜ್ಯ ಸರ್ಕಾರದ ಪರವಾಗಿ ಅಧೀನ ಕಾರ್ಯದರ್ಶಿ ಕೆ. ವೆಂಕಟೇಶ್ ಅವರು ಆದೇಶ ಹೊರಡಿಸಿದ್ದು, ರಾಜ್ಯದ ಎಲ್ಲ ಜಿಲ್ಲೆ ಹಾಗೂ ತಾಲೂಕುಗಳಿಗೆ ಇದು ಅನ್ವಯಿಸುತ್ತದೆ ಎಂದು ತಿಳಿಸಲಾಗಿದೆ.
ವಿವಿಧ ಕಾರ್ಯಗಳ ನಿಮಿತ್ತ ಸರ್ಕಾರಿ ಕಚೇರಿಗಳಿಗೆ ಬರುವ ಕೆಲವು ಖಾಸಗಿ ವ್ಯಕ್ತಿಗಳು ಕರ್ತವ್ಯದ ವೇಳೆಯಲ್ಲಿ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದಾರೆ. ಇದರಿಂದಾಗಿ ಸರ್ಕಾರ ಹಾಗೂ ಇಲಾಖೆಗಳ ಘನತೆಗೆ ಧಕ್ಕೆ ಉಂಟಾಗುತ್ತಿದ್ದು, ಮಹಿಳಾ ಉದ್ಯೋಗಿಗಳಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ, ಯಾವುದೇ ಖಾಸಗಿ ವ್ಯಕ್ತಿಗಳು ಸರ್ಕಾರಿ ಕಚೇರಿ ಕರ್ತವ್ಯದ ವೇಳೆಯಲ್ಲಿ ಫೋಟೋ ಹಾಗೂ ವೀಡಿಯೋ ಚಿತ್ರೀಕರಣ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಉಲ್ಲೇಖಿಸಲಾಗಿದೆ.
Also read: ಈ ಜಿಲ್ಲೆ ಮದ್ಯ ಮಾರಾಟದಲ್ಲಿ ಅಗ್ರಸ್ಥಾನದಲ್ಲಿದೆ! ಯಾವುದು ಗೊತ್ತಾ?
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post