ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಯುವತಿ ಮೇಲೆ ಆಸಿಡ್ ದಾಳಿ Acid Attack ನಡೆಸಿ ಪರಾರಿಯಾಗಿದ್ದ ಆರೋಪಿ ನಾಗನ ಮೇಲೆ ಕಾಮಾಕ್ಷಿಪಾಳ್ಯ ಪೊಲೀಸರು ಗುಂಡು ಹಾರಿಸಿರುವ ಘಟನೆ ಇಂದು ನಡೆದಿದೆ.
ನಗರದ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೋರ್ವಳ ಮೇಲೆ ಆಸಿಡ್ ದಾಳಿ ನಡೆಸಿ ಪರಾರಿಯಾಗಿದ್ದ ನಾಗ, ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿರುವ ಬಗ್ಗೆ ಮಾಹಿತಿಯನ್ನಾಧರಿಸಿ ಆರೋಪಿಯನ್ನು ಬಂಧಿಸಿ ಕರೆತರುವ ವೇಳೆ ಮೂತ್ರ ವಿಸರ್ಜನೆಯ ನೆಪ ಹೇಳಿ ಗಾಡಿ ನಿಲ್ಲಿಸಿ ಪರಾರಿಯಾಗಲು ಯತ್ನಿಸಿದ್ದ ಪರಿಣಾಮ ಪೊಲೀಸರು ಕಾಲಿಗೆ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ.
ಪ್ರಸ್ತುತ ಆರೋಪಿ ನಾಗೇಶ್ ಪೊಲೀಸ್ ವಶದಲ್ಲಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದುಬಂದಿದೆ.
Also read: ಚತುಷ್ಪಥ ರಸ್ತೆ ಕಾಮಗಾರಿ: 875 ಮರಗಳ ಕಟಾವು!
ಕಠಿಣ ಶಿಕ್ಷೆಗೆ ಯುವತಿ ಕುಟುಂಬಸ್ಥರು ಆಗ್ರಹ:
ಆಸಿಡ್ ದಾಳಿಗೊಳಗಾದ ಯುವತಿಗೆ ಗಂಭೀರ ಗಾಯಗಳಾಗಿದ್ದು, ಸಧ್ಯ ಚೇತರಿಕೆ ಕಂಡಿದ್ದರೂ 16 ದಿನಗಳಿಂದ ನರಳಾಡುತ್ತಿದ್ದಾಳೆ. ಆರೋಪಿ ನಾಗೇಶ್‌ಗೆ ಕಠಿಣ ಶಿಕ್ಷೆಯಾಗಬೇಕು. ಆರೋಪಿಯನ್ನು ಚಿತ್ರಹಿಂಸೆ ನೀಡಿ ಸಾಯಿಸ್ಬೇಕು ಎಂದು ಯುವತಿ ಕುಟುಂಬಸ್ಥರು ಆಗ್ರಹಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post