No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Saturday, July 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮಾನವ ಸಂಪನ್ಮೂಲ ದೇಶದ ಶಕ್ತಿ ಎಂದು ತೋರಿಸಿದವರು ಪ್ರಧಾನಿ ಮೋದಿ

ಕೇಂದ್ರ ಪುರಸ್ಕೃತ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಚಾಲನೆ

kalpa News by kalpa News
May 31, 2022
in ಬೆಂಗಳೂರು ನಗರ
0
ಏ.20, 21ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿವಮೊಗ್ಗಕ್ಕೆ ಭೇಟಿ…

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಸಮಾಜದ ಕಟ್ಟಕಡೆಯ ಜನರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮೇಲೆತ್ತುವ ಕೆಲಸವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು PM Narendra Modi ಕಳೆದ ಎಂಟು ವರ್ಷಗಳಲ್ಲಿ ಮಾಡಿದ್ದಾರೆ. ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಮಿಡಿಯುವ ಹೃದಯ ಶ್ರೀಮಂತಿಕೆ ಮೋದಿಯವರದ್ದು. ಹಿಂದೆಂದೂ ಈ ಪ್ರಮಾಣದಲ್ಲಿ ಇಂತಹ ಕೆಲಸ ಆಗಿರಲಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಅಭಿಪ್ರಾಯಪಟ್ಟರು.

ಅವರು ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಏರ್ಪಡಿಸಲಾಗಿದ್ದ ಕೇಂದ್ರ ಪುರಸ್ಕೃತ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ದುಡಿಯುವ ವರ್ಗ ದೇಶ ಕಟ್ಟುತ್ತಿದೆ. ಇಂತಹ ರೈತರು, ವಿವಿಧ ಕೈಗಾರಿಕೆ, ನಿರ್ಮಾಣ ಕಾರ್ಮಿಕರು, ದುಡಿಯುವ ಮಹಿಳೆಯರು ದೇಶ ನಿರ್ಮಾಣದ ಕಾಯಕದಲ್ಲಿ ತೊಡಗಿದ್ದಾರೆ. ಇಂತಹ ಸಮಾಜದ ಕಟ್ಟ ಕಡೆಯ ಜನರಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ, ಅವರು ಸ್ವಾವಲಂಬಿ, ಸ್ವಾಭಿಮಾನಿ ಬದುಕು ಕಟ್ಟಿಕೊಳ್ಳಲು ನೆರವಾಗುವ ಜನಧನ, ಸ್ವಚ್ಛ ಭಾರತ್, ಪಿಎಂ ಸ್ವನಿಧಿ, ಪಿಎಂ ಕಿಸಾನ್ ಸಮ್ಮಾನ್ ಯೋಜನೆ, ಆಯುಷ್ಮಾನ್ ಭಾರತ್ ಮುಂತಾದ ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೆ ತಂದಿದ್ದಾರೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಯೋಜನೆಗಳನ್ನು ತಳದಿಂದ ಮೇಲಕ್ಕೆ ರೂಪಿಸಬೇಕು. ಅಂತೆಯೇ ಇದರ ಯೋಜನೆ, ಹಣಕಾಸು ನೆರವು ಮೇಲಿನಿಂದ ತಳಕ್ಕೆ ಹರಿದುಬರಬೇಕು. ಹಿಂದೆ ಯೋಜನೆಗಳನ್ನು ರೂಪಿಸಿದರೂ ಅನುದಾನ ತಳಹಂತದ ವರೆಗೆ ತಲುಪುತ್ತಿರಲಿಲ್ಲ. ಆದರೆ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ನೆರವು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾವಣೆಯಾಗುತ್ತಿದೆ. ಪ್ರಧಾನಿಯವರು ಕೆಂಪುಕೋಟೆಯಲ್ಲಿ ಭಾಷಣ ಮಾಡುವಾಗ ದೇಶವನ್ನು ಸ್ವಚ್ಛ ಭಾರತವನ್ನಾಗಿಸುವುದಾಗಿ ಘೋಷಿಸಿದರು. ಆ ಮೂಲಕ ತಳ ಹಂತದ ಜನರೂ, ಸ್ವಚ್ಛತೆಯಿಂದ ಆರೋಗ್ಯವಂತರಾಗಿ, ಸದೃಢ ಸಮಾಜ ಹಾಗೂ ಆ ಮೂಲಕ ಸದೃಢ ದೇಶ ನಿರ್ಮಾಣ ಮಾಡುವ ವಾತಾವರಣ ನಿರ್ಮಿಸಿದರು. ಹಿಂದಿನ ಯಾವ ಪ್ರಧಾನಿಗಳೂ ಮನೆ ಮನೆಗೆ ನೀರು ಕೊಡುವ ಘೋಷಣೆ ಮಾಡುವ ಧೈರ್ಯ ಮಾಡಿರಲಿಲ್ಲ. ಆದರೆ ನರೇಂದ್ರ ಮೋದಿಯವರು ಪ್ರತಿ ಗ್ರಾಮೀಣ ಮನೆಗೆ ನೀರು ಒದಗಿಸುವ ಘೋಷಣೆ ಮಾಡಿರುವುದಲ್ಲದೆ, ರಾಜ್ಯಗಳನ್ನು ಹುರಿದುಂಬಿಸುತ್ತ, ಮನೆ ಮನೆಗೆ ನೀರು ಒದಗಿಸಲು ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದ್ದಾರೆ. 2024 ರ ವೇಳೆಗೆ ಪ್ರತಿಯೊಬ್ಬರಿಗೂ ಸೂರು ಒದಗಿಸುವ ದೃಷ್ಟಿಯಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಜಾರಿಗೊಳಿಸುತ್ತಿದ್ದಾರೆ. ಈ ಯೋಜನೆಯಡಿ ರಾಜ್ಯದಲ್ಲಿ 18 ಲಕ್ಷ ಮನೆಗಳನ್ನು ಮುಂದಿನ ಮೂರು ವರ್ಷಗಳಲ್ಲಿ ನಿರ್ಮಿಸಲು ಅವಕಾಶ ನೀಡಿ, ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

Also read: ದಾರ್ಶನಿಕ ವ್ಯಕ್ತಿಗಳ ಜೀವನ ಮೌಲ್ಯವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಿ: ಸಿದ್ದಲಿಂಗಯ್ಯ ಸಲಹೆ

ನರೇಂದ್ರ ಮೋದಿಯವರು ಸರಿಯಾದ ವ್ಯಕ್ತಿಗೆ ಜನಸೇವೆಯ ಅವಕಾಶ ಕೊಟ್ಟರೆ ಏನನ್ನು ಸಾಧಿಸಬಹುದು ಎಂದು ತೋರಿಸಿದ್ದಾರೆ. ಒಬ್ಬ ದಕ್ಷ ಆಡಳಿತಗಾರನಾಗಿ ಜನರಿಗೆ ನ್ಯಾಯಸಮ್ಮತ ಹಕ್ಕುಗಳನ್ನು ಒದಗಿಸಿದ್ದಾರೆ. ಒಬ್ಬ ದಿಟ್ಟನಾಯಕನಾಗಿ ದೇಶದ ಗಡಿ ರಕ್ಷಣೆ ಮಾಡಿದ್ದಾರೆ. ದೂರ ದೃಷ್ಟಿಯ ನಾಯಕನಾಗಿ ಇತರ ರಾಷ್ಟ್ರಗಳು ಭಾರತವನ್ನು ಗೌರವದಿಂದ ಕಾಣುವಂತೆ ಮಾಡಿದ್ದಾರೆ. ಆಡಳಿತದಲ್ಲಿ ತಂತ್ರಜ್ಞಾನದ ಬಳಕೆಯ ಮೂಲಕ ಸುಶಾಸನವನ್ನು ಸಾಧ್ಯವಾಗಿಸಿದ್ದಾರೆ. ಜನಸಂಖ್ಯೆ ದೇಶಕ್ಕೆ ಮಾರಕ ಎಂಬ ಅಭಿಪ್ರಾಯವನ್ನು ಬದಲಿಸಿ, ಮಾನವ ಸಂಪನ್ಮೂಲ ದೇಶದ ಶಕ್ತಿ ಎಂದು ತೋರಿಸಿದ್ದಾರೆ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.


ನಾವು ಈಗ ಸ್ವಾತಂತ್ರ್ಯದ ಅಮೃತ ಮಹೋತ್ಸವ ವರ್ಷಾಚರಣೆಯ ಸಂಭ್ರಮದಲ್ಲಿದ್ದೇವೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ನಡೆಸುತ್ತಿರುವ ಜನಪರ ಆಡಳಿತಕ್ಕೆ ಎಂಟು ವರ್ಷಗಳು ತುಂಬಿದೆ. ಆತ್ಮಾವಲೋಕನ ಹಾಗೂ ಸಿಂಹಾವಲೋಕನ ಮಾಡಲು ಇದು ಒಂದು ಸುಸಂದರ್ಭ. ಕಳೆದ 75 ವರ್ಷಗಳಲ್ಲಿ ಪ್ರಜಾಪ್ರಭುತ್ವವನ್ನು ಉಳಿಸಿ, ಬೆಳೆಸಿರುವುದೇ ನಮ್ಮ ದೇಶದ ದೊಡ್ಡ ಸಾಧನೆ. ಆದರೆ ತುರ್ತು ಪರಿಸ್ಥಿತಿ ಘೋಷಣೆ ನಮ್ಮ ಇತಿಹಾಸದಲ್ಲಿ ಒಂದು ಕಪ್ಪುಚುಕ್ಕೆಯಾಗಿ ಉಳಿದಿದೆ. ತುರ್ತುಪರಿಸ್ಥಿತಿಯ ವಿರುದ್ಧ ಜನಾಂದೋಲನ ನಡೆಸಿ, ಪ್ರಜಾಪ್ರಭುತ್ವವನ್ನು ಮರುಸ್ಥಾಪನೆ ಮಾಡಿರುವುದು, ನಮ್ಮ ಪ್ರಜಾಪ್ರಭುತ್ವದ ಅಂತಃಶಕ್ತಿಗೆ ಸಾಕ್ಷಿ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಇದಕ್ಕೂ ಮುನ್ನ ಮುಖ್ಯಮಂತ್ರಿಗಳು ಕೇಂದ್ರ ಪುರಸ್ಕೃತ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಸಚಿವರಾದ ಗೋವಿಂದ ಎಂ. ಕಾರಜೋಳ, ಎಸ್.ಟಿ. ಸೋಮಶೇಖರ್, ಆರಗ ಜ್ಞಾನೇಂದ್ರ, ಶಶಿಕಲಾ ಜೊಲ್ಲೆ, ವಿ. ಸೋಮಣ್ಣ, ಬಿ.ಸಿ.ನಾಗೇಶ್, ಸಂಸದ ಪಿ.ಸಿ. ಮೋಹನ್ ಮತ್ತಿತರ ಗಣ್ಯರು ಭಾಗವಹಿಸಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCM Basavaraja BommaiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaPM Narendra ModiState Newsಪ್ರಧಾನಮಂತ್ರಿ ನರೇಂದ್ರ ಮೋದಿಬೆಂಗಳೂರುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದಾರ್ಶನಿಕ ವ್ಯಕ್ತಿಗಳ ಜೀವನ ಮೌಲ್ಯವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಿ: ಸಿದ್ದಲಿಂಗಯ್ಯ ಸಲಹೆ

Next Post

ಕುವೆಂಪು ವಿವಿ: ಅಧ್ಯಾಪಕೇತರ ಸಿಬ್ಬಂದಿಗೆ  ಬೀಳ್ಕೊಡುಗೆ

kalpa News

kalpa News

Next Post
ಕುವೆಂಪು ವಿವಿ: ಅಧ್ಯಾಪಕೇತರ ಸಿಬ್ಬಂದಿಗೆ  ಬೀಳ್ಕೊಡುಗೆ

ಕುವೆಂಪು ವಿವಿ: ಅಧ್ಯಾಪಕೇತರ ಸಿಬ್ಬಂದಿಗೆ  ಬೀಳ್ಕೊಡುಗೆ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL