ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ವಿಧಾನ ಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ರಾವ್ ಮಲ್ಕಾಪುರೆ Raghunath Rao Malkapure ಅವರನ್ನು ರಾಜ್ಯಪಾಲರು ನೇಮಕ ಮಾಡಿದ್ದು, ಅವರು ಇಂದು ಮಧ್ಯಾಹ್ನ ಅಧಿಕಾರ ಸ್ವೀಕರಿಸಿದ್ದಾರೆ.
ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾದ ಸಭಾಪತಿ ಸ್ಥಾನಕ್ಕೆ ರಘುನಾಥ್ ಅವರನ್ನು ಹಂಗಾಮಿಯಾಗಿ ರಾಜ್ಯಪಾಲರು ನಿಯೋಜಿಸಿದ್ದಾರೆ.
ಇಂದು ಮಧ್ಯಾಹ್ನ 3 ಗಂಟೆಗೆ ವಿಧಾನಸೌಧದಲ್ಲಿ ನೂತನ ಹಂಗಾಮಿ ಸಭಾಪತಿಯಾಗಿ ಅವರು ಅಧಿಕಾರ ಸ್ವೀಕರಿಸಿದ್ದಾರೆ.
ರಘುನಾಥ್ ಅವರು, ಬೀದರ್ ಜಿಲ್ಲಾ ಬಿಜೆಪಿಯಲ್ಲಿ ಹಲವು ಅಧಿಕಾರಗಳನ್ನು ನಿರ್ವಹಿಸಿ, ಪಕ್ಷದಲ್ಲಿ ಹಲವು ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ. ಅಲ್ಲದೇ, ಎರಡು ಬಾರಿ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.
Also read: ಶಾಲೆಗೆ ಹೋಗಿದ್ದ ಬಾಲಕಿ ಶವವಾಗಿ ಪತ್ತೆ!
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post