ಜನರ ಅವಶ್ಯಕತೆಗೆ ಸ್ಪಂದಿಸಿದಾಗ ಮಾತ್ರ ನಮ್ಮ ಸೇವೆ ಸಾಫಲ್ಯ ಹೊಂದಲು ಸಾಧ್ಯ ಎಂದು ರಾಜ್ಯ ಪೋಲಿಸ್ ಮಹಾನಿರ್ದೇಶಕ (ಮಾಜಿ) ಐಪಿಎಸ್ ತಿಮ್ಮಪ್ಪಯ್ಯ ಮಡಿಯಾಲ್ IPS Thimmappaiah Madiyal ಹೇಳಿದರು.
ಹವ್ಯಕ ಮಹಾಸಭೆಯಲ್ಲಿ ನಡೆದ “ವಿಜಯೀ ಭವ” -3 ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ, ಸ್ಪೂರ್ತಿಯ ನುಡಿಗಳನ್ನಾಡಿದ ಶ್ರೀರಾಮಚಂದ್ರಾಪುರಮಠದ ಸಮ್ಮುಖ ಸರ್ವಾಧಿಕಾರಿ, ಐಪಿಎಸ್ ತಿಮ್ಮಪ್ಪಯ್ಯ ಮಡಿಯಾಲ್, ನಾನು ಸಾಧನೆ ಮಾಡಿದೆ ಎಂಬುದು ಸರಿಯಲ್ಲ, ಜೀವನದಲ್ಲಿ ಅವಕಾಶಗಳು ಬಂದಾಗ ಅವುಗಳ ಸದುಪಯೋಗ ಮಾಡಿಕೊಳ್ಳುವುದು ಮುಖ್ಯ. ಅವಕಾಶಗಳು ಬಂದಾಗ ಅದನ್ನು ಸಮರ್ಥವಾಗಿ ಬಳಸಿಕೊಂಡಿದ್ದರಿಂದ ವಿವಿಧ ರೀತಿಯಲ್ಲಿ ಸಮಾಜಕ್ಕೆ ಸೇವೆ ಸಲ್ಲಿಸಲು ಸಾಧ್ಯವಾಯಿತು ಎಂದು ಸೈನ್ಯದಲ್ಲಿ 7 ವರ್ಷ, ಆನಂತರ 33 ವರ್ಷ ಪೋಲಿಸ್ ಇಲಾಖೆಯಲ್ಲಿ ಸಲ್ಲಿಸಿದ ಸೇವೆಯ ಬಗ್ಗೆ ವಿವರಿಸಿದರು.
ಹಿರಿಯ ಪತ್ರಕರ್ತರು ಹಾಗೂ ವಿಶ್ವವಾಣಿ ಪತ್ರಿಕೆಯ ಸಂಪಾದಕ ವಿಶ್ವೇಶ್ವರ ಭಟ್ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಗೂ ಸಾಧನೆ ಮಾಡಲು ಅವಕಾಶ ಸಿಗುತ್ತದೆ. ಆದರೆ ಬಹುತೇಕ ಸಮಯಗಳಲ್ಲಿ ನಾವು ಆ ಅವಕಾಶವನ್ನು ಎದುರಿಸಲು ಸಿದ್ಧರಿರುವುದಿಲ್ಲ. ಹರಿಯುವ ನದಿ ಹರಿಯಲು ಆರಂಭಿಸುವಾಗ ಸಣ್ಣ ಸೆಲೆಯಾಗಿ ಮಾತ್ರ ಇರುತ್ತದೆ. ಆನಂತರ ಉಪನದಿಗಳು ಸೇರಿಕೊಂಡು, ಅದು ದೊಡ್ಡ ನದಿಯಾಗಿ ಹರಿಯುತ್ತದೆ. ಹಾಗೆಯೇ ನಮ್ಮ ಜೀವನವೂ ಬೇರೆಬೇರೆ ರೀತಿಯ ಮಜಲನ್ನು ಪಡೆದುಕೊಳ್ಳುತ್ತದೆ. ಆ ಸಂದರ್ಭಗಳಲ್ಲಿ ನಾವು ಹೇಗೆ ಎದುರಿಸುತ್ತೇವೆ, ಹೇಗೆ ಸ್ಪಂದಿಸುತ್ತೇವೆ ಎಂಬುದು ನಮ್ಮ ಸಾಧನೆಯನ್ನು ನಿರ್ಧರಿಸುತ್ತದೆ ಎಂದರು.
ಮಲ್ಲೇಶ್ವರದ ಹವ್ಯಕ ಭವನದಲ್ಲಿ 78ನೇ ವರ್ಷದ ವಾರ್ಷಿಕ ಮಹಾಸಭೆ ನಡೆಯಿತು. ಉತ್ತರ ಕನ್ನಡ, ಶಿವಮೊಗ್ಗ, ದಕ್ಷಿಣ ಕನ್ನಡ, ಬೆಂಗಳೂರು, ಹಾಸನ, ಕರ್ನಾಟಕ ಇತರೆ ಹಾಗೂ ಸಂಘ ಸಂಸ್ಥೆಗಳಿಗೆ ಸಂಬಂಧಿಸಿ ಚುನಾವಣಾ ಪ್ರಕ್ರಿಯೆ ನಡೆಯಿತು. ಎಲ್ಲಾ ಕ್ಷೇತ್ರಗಳಿಗೂ ಅವಿರೋಧವಾಗಿ ನಿರ್ದೇಶಕರು ಆಯ್ಕೆಯಾಗಿರುವುದಾಗಿ ಚುನಾವಣಾಧಿಕಾರಿ ರಾಮ ಭಟ್ ಘೋಷಿಸಿದರು. ಆನಂತರ ನಡೆದ ಆಡಳಿತ ಮಂಡಳಿಯ ಸಭೆಯಲ್ಲಿ ಡಾ. ಗಿರಿಧರ ಕಜೆ 7ನೇ ಬಾರಿಗೆ ಸರ್ವಾನುಮತದಿಂದ ಪುನರಾಯ್ಕೆಯಾದರು.
ಶ್ರೀಧರ ಜೆ ಭಟ್ಟ ಕೆಕ್ಕಾರು – ಉಪಾಧ್ಯಕ್ಷರು
ಪ್ರಶಾಂತ ಕುಮಾರ ಜಿ ಭಟ್ಟ ಮಲವಳ್ಳಿ – ಕಾರ್ಯದರ್ಶಿ
ಆದಿತ್ಯ ಹೆಗಡೆ ಕಲಗಾರು – ಕಾರ್ಯದರ್ಶಿ
ಕೃಷ್ಣಮೂರ್ತಿ ಎಸ್ ಭಟ್ ಯಲಹಂಕ – ಕೋಶಾಧಿಕಾರಿ
ಅವಿರೋಧವಾಗಿ ಆಯ್ಕೆಯಾದ ನಿರ್ದೇಶಕರು.
ಬೆಂಗಳೂರು: ಪ್ರಶಾಂತ ಕುಮಾರ್ ಭಟ್, ಕೃಷ್ಣಮೂರ್ತಿ ಭಟ್, ಮಹಾಬಲೇಶ್ವರ ಭಟ್, ಮಹಾಬಲೇಶ್ವರ ಹೆಗಡೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post