No Result
View All Result
Sagara Engulfed In The Ocean of Music
English Articles

Sagara Engulfed In The Ocean of Music

by ಕಲ್ಪ ನ್ಯೂಸ್
March 23, 2026
0

Kalpa Media House  |  Special Article by Rasikapriya  | An invigorating music festival held recently at Sagara, Shimoga Dist., took...

Read moreDetails
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
  • Advertise With Us
  • Grievances
  • About Us
  • Contact Us
Tuesday, March 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬಿಜೆಪಿ ಜಾಹೀರಾತುಗಳ ವಿರುದ್ಧ ಸಿದ್ಧರಾಮಯ್ಯ ಟೀಕೆ: ಏನು ಹೇಳಿದ್ದಾರೆ? ಇಲ್ಲಿದೆ ನೋಡಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 2, 2022
in ಬೆಂಗಳೂರು ನಗರ, ರಾಜಕೀಯ
0
ಬಿಎಸ್‌ವೈ ಮೊಮ್ಮಗಳು ಸೌಂದರ್ಯ ನಿಧನಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಸಂತಾಪ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊಡುಗೆ ನೀಡಿದೆ ಎಂದು ಬಿಜೆಪಿಯವರು ನೀಡುತ್ತಿರುವ ಜಾಹೀರಾತು ರಾಜ್ಯದ ಜನತೆಗೆ ಮಾಡುತ್ತಿರುವ ಅವಮಾನ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ Siddaramaiah ಅವರು ಟೀಕಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಸಿದ್ದರಾಮಯ್ಯ ಅವರು, ಕೊಡುಗೆ ಎಂಬ ಪದ ಬಳಸಿ ಜಾಹೀರಾತು ನೀಡುತ್ತಿರುವುದು ಸರಿಯಲ್ಲ. ರಾಜ್ಯ ಮತ್ತು ಕೇಂದ್ರದ ಬಿಜೆಪಿಯವರು ನಮ್ಮ ರಾಜ್ಯದ ಜನರನ್ನೇನು ದಡ್ಡರು, ಯೋಚಿಸುವ ಶಕ್ತಿ ಇಲ್ಲದವರು ಎಂದುಕೊಂಡಿದ್ದಾರಾ? ಈ ಬಿಜೆಪಿಯವರ ತಲೆ ಸರಿ ಇದೆಯಾ? 2014 ರಿಂದ ಇದುವರೆಗೆ 8 ವರ್ಷಗಳಲ್ಲಿ ರಾಜ್ಯಕ್ಕೆ 1,29 ಲಕ್ಷ ಕೋಟಿ ರೂಗಳನ್ನು ನರೇಂದ್ರ ಮೋದಿಯವರು “ಕೊಡುಗೆ” ನೀಡಿದ್ದಾರೆ ಎಂದು ಪ್ರತಿ ನಿತ್ಯ ಜಾಹಿರಾತು ನೀಡಲಾಗುತ್ತಿದೆ. ಕೊಡುಗೆ ಎಂಬ ಪದ ಬಳಸಲು ಮೋದಿಯವರೊ ಇಲ್ಲ ಬಿಜೆಪಿಯವರೊ ಅವರ ಸ್ವಂತ ಮನೆಯಿಂದ ತೆಗೆದು ಖುಷಿಗೆ ಗಿಫ್ಟು ಕೊಡುವಂತೆ ಏನಾದರೂ ರಾಜ್ಯಕ್ಕೆ ಕೊಟ್ಟಿದ್ದಾರಾ? ಎಂದು ಪ್ರಶ್ನಿಸಿದ್ದಾರೆ.

ರಾಜ್ಯದ ಬಿಜೆಪಿ ಸರ್ಕಾರಕ್ಕೆ ಏನಾದರೂ ಬೆನ್ನು ಮೂಳೆ ಇದ್ದರೆ ಮೊದಲು ಈ ಜಾಹೀರಾತಿಗೆ ವಿರೋಧ ವ್ಯಕ್ತಪಡಿಸಬೇಕಾಗಿತ್ತು. ಯಾಕೆಂದರೆ ಕಳೆದ 8 ವರ್ಷಗಳಲ್ಲಿ ಮೋದಿಯವರ ರಾಜ್ಯ ವಿರೋಧಿ ಧೋರಣೆಯಿಂದ ನಾವು ಬಹಳಷ್ಟನ್ನು ಕಳೆದುಕೊಂಡಿದ್ದೇವೆ. ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರ ಈ 8 ವರ್ಷಗಳಲ್ಲಿ ನಮ್ಮ ರಾಜ್ಯದಿಂದ ಕನಿಷ್ಟ ಎಂದರೂ 19000000000000 [19 ಲಕ್ಷ ಕೋಟಿ] ಕೋಟಿ ರೂಪಾಯಿಗಳನ್ನು ಸಂಗ್ರಹಿಸಿದೆ. ಒಂದರ್ಥದಲ್ಲಿ ದೋಚಿಕೊಂಡಿದೆ ಎಂದರೂ ಸರಿಯೆ. ಇಷ್ಟು ದೊಡ್ಡ ಮೊತ್ತವನ್ನು ಸಂಗ್ರಹಿಸಿ ಟಿಪ್ಸು ಕೊಟ್ಟಂತೆ ಕೆಲವು ಯೋಜನೆಗಳಿಗೆ ಕೊಟ್ಟಿರುವ 1.29 ಲಕ್ಷ ಕೋಟಿ ಅನುದಾನಗಳನ್ನು ಕೊಡುಗೆ ಎಂದು ಹೇಳಿ ರಾಜ್ಯದ ಸ್ವಾಭಿಮಾನವನ್ನು ದೆಲ್ಲಿಯ ಕಾಲ ಕೆಳಗೆ ಹಾಕಿರುವ ರಾಜ್ಯ ಬಿಜೆಪಿಗರಿಗೆ ಸ್ವಾಭಿಮಾನ ಎಂಬುದು ಏನಾದರೂ ಇದೆಯೆ? ಎಂಬ ಪ್ರಶ್ನೆಯನ್ನು ಈ ನಾಡಿನ ಪ್ರಜ್ಞಾವಂತರು ಕೇಳುತ್ತಿದ್ದಾರೆ. ಇದರಲ್ಲಿ ನರೇಗ ಯೋಜನೆಯಲ್ಲಿ ಜನರು ಕೂಲಿ ಮಾಡಿದ ಹಣ 27418 ಕೋಟಿಗಳಷ್ಟಿದೆ. ಹಾಗೆಯೇ ಜನರ ವಿಮೆ ಹಣ ಮುಂತಾದವುಗಳೆಲ್ಲ ಈ ಕೊಡುಗೆಯಲ್ಲಿ ಸೇರಿವೆ. ನರೇಗಾ ಮುಂತಾದ ಯೋಜನೆಗಳಲ್ಲಿ ಜನರ ಬೆವರಿಗೆ ಕೊಡುವ ಪ್ರತಿಫಲವನ್ನು ಈ ಬಿಜೆಪಿಯವರು ಕೊಡುಗೆ ಎನ್ನುತ್ತಾರಲ್ಲ, ಇವರು ಮನುಷ್ಯರಾ ಎಂಬುದು ನನ್ನ ಅನುಮಾನ ಎಂದು ಹೇಳಿದ್ದಾರೆ.

ಕರ್ನಾಟಕವು ದೇಶದ ಆರ್ಥಿಕತೆಗೆ ಅತಿದೊಡ್ಡ ಕೊಡುಗೆ ನೀಡುತ್ತಿರುವ ಎರಡನೆ ರಾಜ್ಯ. ಮಹಾರಾಷ್ಟ್ರದ ನಂತರ ಅತಿ ಹೆಚ್ಚು ಜಿಎಸ್‍ಟಿ ಪಾವತಿಸುತ್ತಿರುವ ರಾಜ್ಯ ನಮ್ಮದು. ಆದಾಯ ತೆರಿಗೆ, ಕಾರ್ಪೊರೇಟ್ ತೆರಿಗೆಯ ಪಾವತಿಯಲ್ಲೂ ಸಹ ನಮ್ಮ ರಾಜ್ಯವು ನಿರಂತರವಾಗಿ ಎರಡು ಅಥವಾ ಮೂರನೆ ಸ್ಥಾನದಲ್ಲಿದೆ. ನನ್ನ ಬಳಿ ಆದಾಯ ತೆರಿಗೆ ಇಲಾಖೆಯ 2018-19 ರ ಅಧಿಕೃತ ದಾಖಲೆ ಇದೆ. ಅದರ ಪ್ರಕಾರ ಮಹಾರಾಷ್ಟ್ರ ರಾಜ್ಯವು 4.25 ಲಕ್ಷ ಕೋಟಿ ರೂಗಳಷ್ಟನ್ನು ನೇರ ತೆರಿಗೆಯ ರೂಪದಲ್ಲಿ ಪಾವತಿಸುತ್ತಿದೆ. ದೆಹಲಿಯು 1.66 ಲಕ್ಷ ಕೋಟಿಗಳನ್ನು ಪಾವತಿಸಿತ್ತು. ನಮ್ಮ ರಾಜ್ಯದಿಂದ 1.20 ಲಕ್ಷ ಕೋಟಿಗಳನ್ನು ಕೇಂದ್ರವು ನೇರ ತೆರಿಗೆಯ ಮೂಲಕ ಸಂಗ್ರಹಿಸಿತ್ತು. ಪ್ರಸ್ತುತ ಕರ್ನಾಟಕವು 1.40 ಲಕ್ಷ ಕೋಟಿಗಳಷ್ಟು ನೇರ ತೆರಿಗೆಯನ್ನು [ಆದಾಯ ಮತ್ತು ಕಾರ್ಪೊರೇಟ್ ತೆರಿಗೆ] ಯನ್ನು ಪಾವತಿಸುತ್ತಿದೆ. ಉಳಿದಂತೆ ಗುಜರಾತ್ ಮಾಡೆಲ್ ಎಂದು ಸುಳ್ಳು ಹೇಳಿಕೊಂಡು ಅಧಿಕಾರಕ್ಕೆ ಬಂದ ಮೋದಿಯವರ ರಾಜ್ಯವಾದ ಗುಜರಾತು 2018-19 ರಲ್ಲಿ ಪಾವತಿಸಿದ್ದು ಕೇವಲ 49 ಸಾವಿರ ಕೋಟಿ ಮಾತ್ರ. ಆಂಧ್ರ ಪ್ರದೇಶ 46 ಸಾವಿರ ಕೋಟಿ, ಮಧ್ಯಪ್ರದೇಶ 19.7 ಸಾವಿರ ಕೋಟಿ, ಬಿಹಾರ 6.2 ಸಾವಿರ ಕೋಟಿ, ರಾಜಸ್ತಾನ 21 ಸಾವಿರ ಕೋಟಿ, ಉತ್ತರ ಪ್ರದೇಶ 27 ಸಾವಿರ ಕೋಟಿ ಮಾತ್ರ. ತಮಿಳುನಾಡು 74.3 ಸಾವಿರ ಕೋಟಿ ಪಾವತಿಸಿತ್ತು.

2018-19 ರ ಮಾಹಿತಿಯ ಪ್ರಕಾರ ದೇಶದ ಬೊಕ್ಕಸಕ್ಕೆ ನೇರ ತೆರಿಗೆಯ ಮೂಲಕ 11.37 ಲಕ್ಷ ಕೋಟಿ ರೂ ತೆರಿಗೆ ಸಂದಾಯವಾಗಿದ್ದರೆ ಮಹಾರಾಷ್ಟ್ರವೂ ಸೇರಿದಂತೆ ದಕ್ಷಿಣದ 6 ರಾಜ್ಯಗಳು ದೇಶದ ಬೊಕ್ಕಸಕ್ಕೆ 6.96 ಲಕ್ಷ ಕೋಟಿ ರೂಗಳನ್ನು ಪಾವತಿಸಿದ್ದವು. ಇದು ಒಟ್ಟು ನೇರ ತೆರಿಗೆಯಲ್ಲಿ ಶೇ.62 ರಷ್ಟಾಗುತ್ತದೆ. ಜಿ.ಎಸ್.ಟಿ ಯಲ್ಲಿ 2022 ರ ಏಪ್ರಿಲ್ ತಿಂಗಳ ಉದಾಹರಣೆಯೊಂದನ್ನೆ ತೆಗೆದುಕೊಂಡರೆ ಮಹಾರಾಷ್ಟ್ರ ರೂ.27.5 ಸಾವಿರ ಕೋಟಿ, ಕರ್ನಾಟಕ ರೂ.11.82 ಸಾವಿರ ಕೋಟಿ, ಉತ್ತರ ಪ್ರದೇಶ ರೂ.8.5 ಸಾವಿರ ಕೋಟಿ, ರಾಜಸ್ತಾನ ರೂ.4.5 ಸಾವಿರ ಕೋಟಿ, ಮಧ್ಯಪ್ರದೇಶ ರೂ.3.3 ಸಾವಿರ ಕೋಟಿ, ಬಿಹಾರ ರೂ.1.4 ಸಾವಿರ ಕೋಟಿ, ಆಂಧ್ರ ಮತ್ತು ತೆಲಂಗಾಣ ಗಳೆರಡು ರೂ.9.00 ಸಾವಿರ ಕೋಟಿ ಮಾತ್ರ ಪಾವತಿಸಿವೆ. ಈ ವಿಚಾರದಲ್ಲೂ ಸರಿಸುಮಾರು ಶೇ.50 ರಷ್ಟು ತೆರಿಗೆಯನ್ನು ದಕ್ಷಿಣದ ರಾಜ್ಯಗಳು 6 ರಾಜ್ಯಗಳು ಪಾವತಿಸುತ್ತಿವೆ.

ಕಳೆದ 8 ವರ್ಷಗಳಿಂದ ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರವು ಕರ್ನಾಟಕ ರಾಜ್ಯವೊಂದರಿಂದಲೆ ಸುಮಾರು ರೂ.19 ಲಕ್ಷ ಕೋಟಿಗಳನ್ನು ನೇರ ಮತ್ತು ಪರೋಕ್ಷ ತೆರಿಗೆಗಳ ರೂಪದಲ್ಲಿ ಕೇಂದ್ರ ಸರ್ಕಾರವು ಸಂಗ್ರಹಿಸಿದೆ. ಕಳೆದ ವರ್ಷ ಕೋವಿಡ್ ಸಂದರ್ಭದಲ್ಲೂ ಕೂಡಾ ಸುಮಾರು ರೂ.3 ಲಕ್ಷ ಕೋಟಿಗಳನ್ನು ಕೇಂದ್ರ ಸರ್ಕಾರ ನಮ್ಮ ರಾಜ್ಯದಿಂದ ಸಂಗ್ರಹಿಸಿದೆ. ಮನಮೋಹನಸಿಂಗ್ ಅವರು ಪ್ರಧಾನಿಗಳಾಗಿದ್ದಾಗ ನಮ್ಮ ರಾಜ್ಯದಿಂದ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯಿಂದ 2012 ಮತ್ತು 2013 ರ ಸಾಲಿನಲ್ಲಿ ಮೂರೂವರೆ ಸಾವಿರ ಕೋಟಿಗಳನ್ನು ಮಾತ್ರ ಸಂಗ್ರಹಿಸಿದ್ದರು. ಮೋದಿಯವರು ಪ್ರಧಾನಿಗಳಾದ ಮೇಲೆ ನಮ್ಮ ರಾಜ್ಯದಿಂದ ವರ್ಷಕ್ಕೆ 35000 ಗಳಿಂದ 40000 ಕೋಟಿಗಳನ್ನು ಸಂಗ್ರಹಿಸುತ್ತಿದ್ದಾರೆ. ಪೆಟ್ರೋಲ್, ಡೀಸೆಲ್ ಬಾಬತ್ತಿನಿಂದಲೆ ಮೋದಿಯವರ ಸರ್ಕಾರ ಕರ್ನಾಟಕ ರಾಜ್ಯದಿಂದ ಕನಿಷ್ಟ ಎಂದರೂ 150000 ಕೋಟಿ ರೂಗಳನ್ನು ದೋಚಿಕೊಂಡಿದೆ.

Also read: ಸಚಿವ ಬಿ.ಸಿ. ನಾಗೇಶ್ ಮನೆಗೆ ಎನ್‌ಎಸ್‌ಯುಐ ಕಾರ್ಯಕರ್ತರ ಮುತ್ತಿಗೆ: ಡಿ.ಎಸ್. ಅರುಣ್ ಖಂಡನೆ

ಇಷ್ಟಾದರೂ ರಾಜ್ಯ , ಕೇಂದ್ರ ಬಿಜೆಪಿ ಸರ್ಕಾರಗಳು ಬಿಡುಗಡೆ ಮಾಡಿರುವ ಜಾಹಿರಾತಿನಲ್ಲಿ 2014 ರಿಂದ 2022 ರವರೆಗೆ ರೂ.1,29,776/- ಕೋಟಿ ರೂಗಳನ್ನು ಕೇಂದ್ರದ ವಿವಿಧ ಯೋಜನೆಗಳಿಗಾಗಿ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಇದು ರಾಜ್ಯವು ಪಾವತಿಸಿದ ಒಟ್ಟು ತೆರಿಗೆಯಲ್ಲಿ ಶೇ.6.8 ರಷ್ಟು ಮಾತ್ರ ನಮ್ಮ ರಾಜ್ಯದಲ್ಲಿ ಖರ್ಚು ಮಾಡಿದ್ದಾರೆ ಎಂದು ಅರ್ಥ. ಇದರ ನಂತರ ರೂ.2,14,603/- ಕೋಟಿಗಳನ್ನು ತೆರಿಗೆ ಪಾಲಿನ ರೂಪದಲ್ಲಿ ಹಂಚಿಕೆ ಮಾಡಿದ್ದಾರೆ. ಇದು ರಾಜ್ಯದಿಂದ ಸಂಗ್ರಹಿಸಿದ ತೆರಿಗೆಯಲ್ಲಿ ಶೇ.11.29 ರಷ್ಟು ಮಾತ್ರ. ಈ ರೂ.19 ಲಕ್ಷ ಕೋಟಿಗಳಲ್ಲಿ ತೆರಿಗೆ ಹಂಚಿಕೆ, ಕೇಂದ್ರ ಪುರಸ್ಕøತ ಯೋಜನೆಗಳ ಅನುದಾನ ಹಾಗೂ ಇತರೆ ಯೋಜನಾ ಆಯೋಗದ ಅನುದಾನಗಳ ರೂಪದಲ್ಲಿ (ಕೇಂದ್ರ ಇಲಾಖೆಗಳು ತೆಗೆದುಕೊಳ್ಳುವ ಕಾಮಗಾರಿಗಳು, ಕಾರ್ಯಕ್ರಮಗಳನ್ನು ಹೊರತುಪಡಿಸಿ) ನಮಗೆ ಬರಬೇಕಾಗಿದ್ದ ಅನುದಾನ ಶೇ.42 ರ ಅನುಪಾತದಲ್ಲಿ ರೂ.8 ಲಕ್ಷ ಕÉೂೀಟಿ ರೂಗಳಷ್ಟಾಗಬೇಕು.

ಇದಲ್ಲದೆ ರಾಜ್ಯಗಳಿಗೆ ಹಂಚಿಕೆ ಮಾಡಿದ ನಂತರ ಕೇಂದ್ರವೆ ತನ್ನ ಬಳಿ ಉಳಿಸಿಕೊಳ್ಳುವ ಶೇ. 58 ಕ್ಕೂ ಹೆಚ್ಚಿನ ಅನುದಾನವಿದೆಯಲ್ಲ, ಅದರಲ್ಲಿ ಅದರ ಇಲಾಖೆಗಳ ಮೂಲಕ ರಾಜ್ಯಕ್ಕೆ ಬೇರೆ ಬೇರೆ ಯೋಜನೆಗಳಿಗಳಿಗಾಗಿ ಬಿಡುಗಡೆ ಮಾಡಿದ್ದೆ ಈ 1.29 ಲಕ್ಷ ಕೋಟಿ. ಇದನ್ನೆ ಅವರು ಜಾಹಿರಾತಿನಲ್ಲಿ ಹೇಳಿಕೊಳ್ಳುತ್ತಿರುವುದು. ರಾಜ್ಯದ ಮೇಲಿನ ಬಿಜೆಪಿಯವರ ಕ್ರೌರ್ಯವನ್ನು ಯಾವ ಮಾತುಗಳಲ್ಲಿ ವಿವರಿಸಬೇಕು ಹೇಳಿ.

ಜಿಎಸ್‍ಟಿಯಂಥ ಅಪಕ್ವ ಯೋಜನೆಯನ್ನು ಅನುಷ್ಠಾನ ಮಾಡುವುದಕ್ಕೆ ಮೊದಲು ನಮ್ಮ ರಾಜ್ಯದ ತೆರಿಗೆ ಸಂಗ್ರಹದ ಪ್ರಮಾಣ ಶೇ.14 ರಿಂದ ಶೇ.15 ರಷ್ಟಿತ್ತು.  2015-16 ರಲ್ಲಿ ನಮ್ಮ ಒಟ್ಟು ತೆರಿಗೆ ಸಂಗ್ರಹ ರೂ.1,18,817 ಕೋಟಿಗಳಷ್ಟಿತ್ತು. ಇದು ಶೇ.14 ರ ಪ್ರಮಾಣದಲ್ಲಿ ಬೆಳವಣಿಗೆಯಾಗಿದ್ದರೆ ಈ ವರ್ಷ ನಮ್ಮ ತೆರಿಗೆ ಸಂಗ್ರಹದ ಪ್ರಮಾಣ ರೂ.297,315 ಕೋಟಿಗಳಷ್ಟಿರಬೇಕಿತ್ತು. ಆದರೆ ಈ ವರ್ಷ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳು ರೂ.1,89,887 ಕೋಟಿಗಳಷ್ಟು ತೆರಿಗೆ ಸಂಗ್ರಹವಾಗಬಹುದು ಎಂದು ಅಂದಾಜಿಸಿದ್ದಾರೆ. ಹಾಗಾಗಿ ಕೇಂದ್ರ ಸರ್ಕಾರದ ಅಡ್ಡ ಕಸುಬಿ ಆರ್ಥಿಕ ನೀತಿಗಳಿಂದಾಗಿ ರಾಜ್ಯವು ಈ 8 ವರ್ಷಗಳಲ್ಲಿ ಕಳೆದುಕೊಂಡದ್ದು ರೂ.2,96,000/- ಕೋಟಿಗಳಷ್ಟು. ಕಳೆದ 8 ವರ್ಷಗಳ ಸರಾಸರಿ ತೆರಿಗೆ ಸಂಗ್ರಹ ಪ್ರಮಾಣ ಶೇ.6 ರಷ್ಟು ಮಾತ್ರ ಇದೆ. ಇದರಿಂದಾಗಿ ರಾಜ್ಯದ ಆರ್ಥಿಕತೆ ಸಂಕಷ್ಟದ ಸುಳಿಗೆ ಸಿಲುಕಿ ಸಾಲಗಾರ ರಾಜ್ಯವಾಗುತ್ತಿದೆ. ಇದರ ಜೊತೆಗೆ ಬಿಜೆಪಿಯವರ 40 ಪರ್ಸೆಂಟ್ ಕಮಿಷನ್‍ನಿಂದಾಗಿ ರಾಜ್ಯ ದಿವಾಳಿಯಾಗುತ್ತಿದೆ ಎಂದಿದ್ದಾರೆ.
ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaPolitical NewsSiddaramaiahಬೆಂಗಳೂರುಸಿದ್ದರಾಮಯ್ಯ
Share197Tweet123Send
Previous Post

ಸಚಿವ ಬಿ.ಸಿ. ನಾಗೇಶ್ ಮನೆಗೆ ಎನ್‌ಎಸ್‌ಯುಐ ಕಾರ್ಯಕರ್ತರ ಮುತ್ತಿಗೆ: ಡಿ.ಎಸ್. ಅರುಣ್ ಖಂಡನೆ

Next Post

ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗದಗ: ಕಾರುಗಳ ಮುಖಾಮುಖಿ ಅಪಘಾತಕ್ಕೆ 6 ಜನ ಸಾವು

ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಸ್ವಾರ್ಥ ರಹಿತ ತ್ಯಾಗದಿಂದ ಭಗತ್ ಸಿಂಗ್ ಅಮರತ್ವ | ಸುರೇಶ್ ಋಗ್ವೇದಿ ಅಭಿಮತ

ಸ್ವಾರ್ಥ ರಹಿತ ತ್ಯಾಗದಿಂದ ಭಗತ್ ಸಿಂಗ್ ಅಮರತ್ವ | ಸುರೇಶ್ ಋಗ್ವೇದಿ ಅಭಿಮತ

March 24, 2026
ಏ.11-26 | ಇಸ್ಕಾನ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ

ಏ.11-26 | ಇಸ್ಕಾನ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ

March 24, 2026
ಶಿವಮೊಗ್ಗದಲ್ಲಿ ಅರಳಿದ ಮೊಗ್ಗುಗಳು-5 | 80 ವಸಂತಗಳನ್ನು ಸಾರ್ಥಕವಾಗಿ ಕಳೆದ ಸಜ್ಜನಿಕೆಯ ಸೀತಾರಾಮ

ಶಿವಮೊಗ್ಗದಲ್ಲಿ ಅರಳಿದ ಮೊಗ್ಗುಗಳು-5 | 80 ವಸಂತಗಳನ್ನು ಸಾರ್ಥಕವಾಗಿ ಕಳೆದ ಸಜ್ಜನಿಕೆಯ ಸೀತಾರಾಮ

March 24, 2026
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

ಸ್ವಾಭಿಮಾನದ ಬದುಕಿಗೆ ವಿಶ್ವಕರ್ಮ ಯೋಜನೆ ಶಕ್ತಿ ತುಂಬಿದೆ: ಸಂಸದ ರಾಘವೇಂದ್ರ

March 24, 2026
ಗಮನಿಸಿ! ಈ ಎರಡು ದಿನ ಮೈಸೂರು-ಶಿವಮೊಗ್ಗ ರೈಲು ಸಂಚಾರದಲ್ಲಿ ಬದಲಾವಣೆ

ಗುಡ್ ನ್ಯೂಸ್ | ಹುಬ್ಬಳ್ಳಿ – ರಾಮೇಶ್ವರಂ ನಡುವೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

March 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL