ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನಿನ್ನೆ ಕೊಡಗಿನ ಕುಶಾಲನಗರದಲ್ಲಿ ಸಿದ್ಧರಾಮಯ್ಯ Siddaramaiah ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಘೇರಾವ್ ಹಾಕಿರುವ ಘಟನೆಗೆ ಸಂಬಂಧಪಟ್ಟಂತೆ ಸಿದ್ಧರಾಮಯ್ಯ ಅವರು ಕೆಂಡಾಮಂಡಲವಾಗಿದ್ದಾರೆ.
ರಾಜ್ಯ ಪೊಲೀಸ್ ಇಲಾಖೆ ಸಂಘಪರಿವಾರದ ಕೈಗೊಂಬೆಯಾಗಿದೆ.@BJP4Karnataka ಪಕ್ಷದ ಪುಂಡರ ಗೂಂಡಾಗಿರಿಗೆ ಅವಕಾಶ ನೀಡಿ, ಕೈಕಟ್ಟಿಕೊಂಡು ತಮಾಷೆ ನೋಡುವ ಪೊಲೀಸರ ಕರ್ತವ್ಯ ಲೋಪ ಖಂಡಿಸಿ ಈ ತಿಂಗಳ 26 ರಂದು ಕೊಡಗಿನ ಎಸ್.ಪಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ.
ಬಿಜೆಪಿಯ ಗೂಂಡಾಗಿರಿಗೆ ಹೋರಾಟದ ಮೂಲಕವೇ ತಕ್ಕ ಉತ್ತರ ಕೊಡುತ್ತೇವೆ.
— Siddaramaiah (@siddaramaiah) August 19, 2022
ಈ ಕುರಿತು ಟ್ವೀಟ್ ಮಾಡಿರುವ ಅವರು, ಇದೇ ತಿಂಗಳ ೨೬ರಂದು ಕೊಡಗಿನ ಎಸ್‌ಪಿ ಕಚೇರಿಗೆ ಮುತ್ತಿಗೆ ಹಾಕುವ ಮೂಲಕ ಪ್ರತಿಕಾರ ತೀರಿಸಿಕೊಳ್ಳುತ್ತೇವೆ ಎಂದು ಆಕ್ರೋಶದ ಮಾತುಗಳನ್ನಾಡಿರುವ ಅವರು, ರಾಜ್ಯ ಪೊಲೀಸ್ ಇಲಾಖೆ ಸಂಘಪರಿವಾರದ ಕೈಗೊಂಬೆಯಾಗಿದೆ. ಪಕ್ಷದ ಪುಂಡರ ಗೂಂಡಾಗಿರಿಗೆ ಅವಕಾಶ ನೀಡಿ, ಕೈಕಟ್ಟಿಕೊಂಡು ತಮಾಷೆ ನೋಡುವ ಪೊಲೀಸರ ಕರ್ತವ್ಯ ಲೋಪ ಖಂಡಿಸಿದ್ದಾರೆ.

ಮುಖ್ಯಮಂತ್ರಿ ಅವರೇ, ಮೊಟ್ಟೆ ಎಸೆಯುವ ಗೂಂಡಾಗಿರಿಯ ರಾಜಕೀಯ ಶುರು ಮಾಡಬೇಡಿ. ಅದನ್ನು ಅಂತ್ಯ ಮಾಡುವುದು ಹೇಗೆ ಎಂದು ನಮಗೂ ಗೊತ್ತು. ನಮ್ಮ ಕಾರ್ಯಕರ್ತರು ನಿಮ್ಮವರಂತೆಯೇ ಬೀದಿಗಿಳಿದರೆ ನೀವು ಮನೆಯಿಂದ ಹೊರಬರುವುದು ಕೂಡ ಕಷ್ಟವಾಗಬಹುದು. ಯು.ಪಿ ಮಾದರಿ ಎಂದರೆ ಇದೆನಾ? ಎಂದು ಪ್ರಶ್ನಿಸಿದ್ದಾರೆ.

Also read: ಹೋದಲ್ಲೆಲ್ಲಾ ಪ್ರತಿಭಟನೆ ಬಿಸಿ: ಚಿಕ್ಕಮಗಳೂರಿನಲ್ಲಿ ಸಿದ್ಧರಾಮಯ್ಯಗೆ ಶ್ವಾನದಳ ಸೇರಿ ಭಾರೀ ಪೊಲೀಸ್ ಭದ್ರತೆ
ಸಾಧನೆಯ ಬಲದಿಂದ ಚುನಾವಣೆಯನ್ನು ಎದುರಿಸಲಿಕ್ಕಾಗದ ಬಿಜೆಪಿ ನಾಯಕರಿಗೆ ಸುಳ್ಳು ಸುದ್ದಿ ಮತ್ತು ಆಧಾರರಹಿತ ಆರೋಪಗಳೇ ಬಂಡವಾಳ. ಹಳೆಯ ಆಟವನ್ನು ಬಿಜೆಪಿ ರಾಜ್ಯದಲ್ಲಿ ಮತ್ತೆ ಶುರುಮಾಡಿದೆ. ಈ ಸುಳ್ಳಿನ ಸರದಾರರಿಗೆ ಸತ್ಯವನ್ನು ಎದುರಿಸುವ ನೈತಿಕತೆ ಇಲ್ಲ. ವಿ.ಡಿ.ಸಾವರ್ಕರ್ ಬಗ್ಗೆ ಅಭಿಮಾನ ಇದ್ದರೆ ಅವರ ಬಗ್ಗೆ ಪುಸ್ತಕ ಬರೆದು, ಕಾರ್ಯಕ್ರಮಗಳನ್ನು ಆಯೋಜಿಸಿ ಅವರ ವಿರುದ್ಧದ ಆರೋಪಗಳಿಗೆ ಉತ್ತರ ಕೊಡಿ. ಕೋಮುಗಲಭೆ ಹುಟ್ಟುಹಾಕಲು ಅವರ ಪೋಟೊವನ್ನು ಅಸ್ತ್ರವನ್ನಾಗಿ ಯಾಕೆ ಮಾಡುತ್ತಿದ್ದೀರಿ? ಇದನ್ನೇ ನಾನು ಪ್ರಶ್ನಿಸಿದ್ದು ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಬಾಬಾಸಾಹೇಬ್ ಅಂಬೇಡ್ಕರ್ ಅವರ ಪೋಟೊವನ್ನು ಪಕ್ಷದ ಕಚೇರಿಯಲ್ಲಿಯೇ ಕಸದ ಬುಟ್ಟಿಗೆ ಎಸೆದಿರುವ ಬಿಜೆಪಿ ನಾಯಕರ ಹೃದಯದೊಳಗೆ ಗಾಂಧೀಜಿಯೂ ಇಲ್ಲ, ಅಂಬೇಡ್ಕರ್ ಅವರೂ ಇಲ್ಲ ಅವರೊಳಗೆ ಇರುವುದು ನಾಥುರಾಮ್ ಗೋಡ್ಸೆ ಮಾತ್ರ. ಈ ಸತ್ಯವನ್ನು ಮೊದಲು ಒಪ್ಪಿಕೊಳ್ಳಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿ.ಎಸ್ ಯಡಿಯೂರಪ್ಪ ಅವರಿಗೆ 75 ವರ್ಷ ಆಯ್ತು ಎಂದು ಮುಖ್ಯಮಂತ್ರಿ ಸ್ಥಾನದಿಂದ ನಿಧಯವಾಗಿ ಕೆಳಗಿಳಿಸಿದರು. ಅವರು ಕಣ್ಣೀರು ಹಾಕುತ್ತಾ ರಾಜೀನಾಮೆ ನೀಡಿದ್ದರು. ಈಗ ಮತ್ತೆ ಸಂಸದೀಯ ಮಂಡಳಿಗೆ ಆಯ್ಕೆ ಮಾಡಿದ್ದಾರೆ, ಈಗ ಅವರ ವಯಸ್ಸು ಕಡಿಮೆ ಆಯ್ತಾ? ಇದಕ್ಕೆ ಕಾರಣ ಅವರ ಮೇಲಿನ ಪ್ರೀತಿ ಅಲ್ಲ, ಸೋಲಿನ ಭಯ ಎಂದು ಹೀಯಾಳಿಸಿದ್ದಾರೆ.










Discussion about this post