ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ತಮಿಳುನಾಡಿಗೆ ಕಾವೇರಿ ಒಂದು ರಾಜಕೀಯ ದಾಳ. ಸ್ವಾತಂತ್ರ್ಯ ದೊರೆತಾಗಿನಿಂದ ಕಾವೇರಿ ಹೆಸರಿನಲ್ಲಿಯೇ ಅವರು ರಾಜಕಾರಣ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ತಿಳಿಸಿದರು.
ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಕಾವೇರಿ ಜಲವಿವಾದ ನ್ಯಾಯಮಂಡಲಿ ತೀರ್ಪು ನೀಡಿ ನೀರಿನ ಹಂಚಿಕೆಯಾಗಿದೆ. ನೀರನ್ನು ನೀಡಲು ಕಾವೇರಿ ನೀರು Kaveri Water ನಿರ್ವಹಣಾ ಪ್ರಾಧಿಕಾರ ಇದೆ. ನಮ್ಮ ರಾಜ್ಯದಲ್ಲಿ ಹುಟ್ಟಿರುವ ಕಾವೇರಿ, ಇಲ್ಲಿ ಬಿದ್ದ ಮಳೆಯ ಆಧಾರದ ಮೇಲೆ ನಾವು ಕುಡಿಯುವ ನೀರಿಗಾಗಿ ಮೇಕೆದಾಟು ಯೋಜನೆಯನ್ನು ರೂಪಿಸಲಾಗಿದೆ. ಇಷ್ಟೆಲ್ಲಾ ಇದ್ದರೂ ತಮಿಳುನಾಡು ತಕರಾರು ಮಾಡುತ್ತಿದ್ದಾರೆ. ವಿವಿಧ ಅರ್ಜಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
ರಾಷ್ಟ್ರೀಯ ಹಸಿರು ನ್ಯಾಯಮಂಡಲಿ ನಮ್ಮ ಪರವಾಗಿ ಆದೇಶ ನೀಡಿದ್ದಾರೆ, ಅದರ ತಮಿಳುನಾಡು ವಿರುದ್ಧ ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿ ಹಾಕಿದ್ದಾರೆ. ಸರ್ವ ಪಕ್ಷ ಸಭೆ ನಡೆಸಿ ಒಗ್ಗಟ್ಟಿನಿಂದ ಇದನ್ನು ಎದುರಿಸಲು ತೀರ್ಮಾನ ಮಾಡಿದ ಹಿನ್ನೆಲೆಯಲ್ಲಿ ಈ ನಿರ್ಣಯ ಮಾಡಿದ್ದಾರೆ. ಇದಕ್ಕೆ ಯಾವುದೇ ಬೆಲೆ ಇಲ್ಲ ಹಾಗೂ ಕಾನೂನಿನ ಪ್ರಕಾರವೂ ಇಲ್ಲ. ರಾಜಕೀಯ ತಂತ್ರವಷ್ಟೇ ಎಂದರು. ಈ ರೀತಿಯ ಹತ್ತು ಹಲವಾರು ನಿರ್ಣಯಗಳಾಗಿವೆ. ಅದಕ್ಕೆ ಬೆಲೆ ಇಲ್ಲ ಎಂದರು.
Also read: ರಾಜ್ಯದ 75 ಕಡೆ ಎಸಿಬಿ ದಾಳಿ: ಪತ್ತೆಯಾದ ಆಸ್ತಿ ಕಂಡು ಅಧಿಕಾರಿಗಳೇ ಶಾಕ್
ಸರ್ವ ಪಕ್ಷ ಸಭೆಯಲ್ಲಿ ನಿರ್ಣಯಿಸಿದಂತೆ ಡಿಪಿಆರ್ ಪಡೆದು ಪರಿಸರ ಮತ್ತು ಅರಣ್ಯ ಇಲಾಖೆಯ ಅನುಮತಿ ಪಡೆದು ಯೋಜನೆ ಅನುಷ್ಠಾನಕ್ಕೆ ಎಲ್ಲ ಕ್ರಮವನ್ನು ಸರ್ಕಾರ ತೆಗೆದುಗೊಳ್ಳಲಿದೆ ಎಂದರು.
ಬೆಳಗಾವಿ ಸಮಸ್ಯೆಗಳ ದಿಕ್ಕು ಬದಲಾಯಿಸಲು ಹೇಳಿಕೆ:
ಶಿವಸೇನೆ ನಾಯಕ ಸಂಜಯ ರಾವತ್ ಅವರು ಬೆಳಗಾವಿ ಫೈಲ್ಸ್ ಬರಬೇಕು ಅಲ್ಲಿಯೂ ಅನೇಕ ಘಟನೆಗಳು ನಡೆದಿವೆ ಎಂದು ಆರೋಪಿಸಿರುವ ಬಗ್ಗೆ ಸುದ್ದಿಗಾರ ಪ್ರಶ್ನೆಗೆ ಉತ್ತರಿಸಿ ಬೆಳಗಾವಿ ವಿಷಯದ ಬಗ್ಗೆ ಈಗಾಗಲೇ ತೀರ್ಪು ನೀಡಲಾಗಿದೆ. 1956 ನಲ್ಲಿ ರಾಜ್ಯ ಪುನರ್ ವಿಂಗಡಣೆ ಆಯೋಗದ ಅನುಗುಣವಾಗಿ ಆಗಿದೆ. ಕನ್ನಡ ಮಾತನಾಡುವ ಸೊಲ್ಲಾಪುರ, ಅಕ್ಕಲ್ ಕೋಟೆ ಭಾಗಗಳು ಮಹಾರಾಷ್ಟ್ರದಲ್ಲಿ ಉಳಿದಿವೆ. ಈ ರೀತಿ ಮಾತನಾಡುವುದರಲ್ಲಿ ಯಾವುದೇ ಅರ್ಥವಿಲ್ಲ. ಬೆಳಗಾವಿ ಹೆಸರಿನಲ್ಲಿ ಅಲ್ಲಿರುವ ಸಮಸ್ಯೆಗಳ ದಿಕ್ಕು ಬದಲಾಯಿಸಲು ಈ ಕೆಲಸವನ್ನು ಮಾತನಾಡುತ್ತಾರೆ ಎಂದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post