ಕಲ್ಪ ಮೀಡಿಯಾ ಹೌಸ್ | ಬೆಂಗಳೂರು/ತೀರ್ಥಹಳ್ಳಿ |
ಹಲವು ರೀತಿಯ ಅಪಘಾತಗಳಿಗೆ ಕಾರಣವಾಗಿರುವ ತೀರ್ಥಹಳ್ಳಿ-ಶಿವಮೊಗ್ಗ ನಡುವಿನ ಭಾರತೀಪುರ Bharathipura ಹೇರ್’ಪಿನ್ ತಿರುವನ್ನು ತಪ್ಪಿಸುವ ಸಲುವಾಗಿ ಅತ್ಯಾಧುನಿಕ ತಂತ್ರಜ್ಞಾನದ ಮೇಲ್ಸೇತುವೆ ಶೀಘ್ರದಲ್ಲೇ ನಿರ್ಮಾಣವಾಗಲಿದೆ.
ಈ ಕುರಿತಂತೆ ಮಾತನಾಡಿರುವ ಗೃಹ ಸಚಿವರೂ ಆಗಿರುವ ಸ್ಥಳೀಯ ಶಾಸಕ ಆರಗ ಜ್ಞಾನೇಂದ್ರ, Araga Gnanendra ಭಾರತೀಪುರ ಹೇರ್ ಪಿನ್ ತಿರುವನ್ನು ತಪ್ಪಿಸಿ, ಅತ್ಯಾಧುನಿಕ ಮೇಲ್ಸುತೇವೆ ನಿರ್ಮಾಣ ಕಾಮಗಾರಿಗೆ , ಕೇಂದ್ರ ಸರಕಾರದ ಹೆದ್ದಾರಿ ಮಂತ್ರಾಲಯ ಅನುಮತಿ ನೀಡಿದ್ದು, ೫೮ ಕೋಟಿ ರೂಪಾಯಿಗಳ ವೆಚ್ಚದ ಈ ಕಾಮಗಾರಿಯನ್ನು ಸದ್ಯದಲ್ಲಿಯೇ, ಎತ್ತಿಕೊಳ್ಳಲಾಗುವುದು ಎಂದಿದ್ದಾರೆ.
ಹೆದ್ದಾರಿ ಅಭಿವೃದ್ಧಿ ದ್ವಿಪಥ ರಸ್ತೆ ನಿರ್ಮಾಣ:
ಇನ್ನು, ಭಾರತೀಪುರ ಮೇಲ್ಸೇತುವೆ ನಿರ್ಮಾಣ ಕಾಮಗಾರಿಯಲ್ಲದೆ, ತೀರ್ಥಹಳ್ಳಿ ತಾಲೂಕು ಮೇಗರವಳ್ಳಿಯಿಂದ, ಆಗುಂಬೆವರೆಗೆ, 14.77 ಕಿಲೊಮೀಟರ್ ರಾಷ್ಟ್ರೀಯ ಹೆದ್ದಾರಿ 169-ಎಗೆ 10 ಮೀಟರ್ ಅಗಲದ ದ್ವಿಪಥ ರಸ್ತೆಯನ್ನಾಗಿ ಅಭಿವೃದ್ಧಿ ಪಡಿಸಲಾಗುತ್ತದೆ. ಇದಕ್ಕಾಗಿ 96.20 ಕೋಟಿ ರೂ.ಗೆ ಕೇಂದ್ರ ಹೆದ್ದಾರಿ ಸಚಿವಾಲಯ ಅನುಮೋದನೆ ಸಹ ನೀಡಿದ್ದು, ಕಾಮಗಾರಿ ಚುರುಕಿಗೆ ಸಹಾಯವಾಗಲಿದೆ ಎಂದು ಸಚಿವರು ಹೇಳಿದ್ದಾರೆ.
ಮೇಲ್ಸೇತುವೆ ನಿರ್ಮಾಣದ ಅಗತ್ಯದ ಕುರಿತು, ಈ ಹಿಂದೆ ಸಲ್ಲಿಸಿದ ಮನವಿಗೆ ಸ್ಪಂದಿಸಿ ಅನುದಾನ ಬಿಡುಗಡೆಯಾಗಿದ್ದು, ಸಂಸದ ಬಿ.ವೈ. ರಾಘವೇಂದ್ರ ಅವರೂ ಸಹ ಮೇಲ್ಸೇತುವೆ ಅಗತ್ಯದ ಬಗ್ಗೆ ಕೇಂದ್ರ ಸಚಿವರ ಜತೆ ಸಮಾಲೋಚಿಸಿ, ಯೋಜನೆಯನ್ನು ಕಾರ್ಯಗತಗೊಳಿಸಲು ಕೋರಿದ್ದರು.
Also read: ಪ್ರಥಮ ಪಿಯುಸಿ ಪರೀಕ್ಷೆ ಆರಂಭ: ಉಡುಪಿಯ ಇಬ್ಬರು ವಿದ್ಯಾರ್ಥಿನಿಯರ ಗೈರು
ಅನುದಾನ ಬಿಡುಗಡೆ ಮಾಡಿರುವ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹಾಗೂ ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಧನ್ಯವಾದ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post