No Result
View All Result
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?
English Articles

Critical Condition Turned Around with Timely Medical Intervention

by ಕಲ್ಪ ನ್ಯೂಸ್
March 27, 2026
0

Kalpa Media House  |  Bengaluru(WhiteFiled)  | A 26-year-old man from West Bengal, who had been suffering from a serious condition...

Read moreDetails
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
  • Advertise With Us
  • Grievances
  • About Us
  • Contact Us
Friday, March 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ರೈತರಲ್ಲಿ ಭರವಸೆಯ ಬೆಳಕು ಮೂಡಿಸಿದ ವಿದ್ಯಾನಿಧಿ ಯೋಜನೆ: ಸಿಎಂ ಬೊಮ್ಮಾಯಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 29, 2022
in ಬೆಂಗಳೂರು ನಗರ
0
ಡಾ ಡಿ. ವೀರೇಂದ್ರ ಹೆಗ್ಗಡೆಯವರ ಅನುಭವ ಇಡೀ ದೇಶಕ್ಕೆ ಲಾಭ ತಂದುಕೊಡಲಿದೆ : ಸಿಎಂ ಬೊಮ್ಮಾಯಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |            

ದೇಶದಲ್ಲಿಯೇ ಮೊದಲ ಬಾರಿಗೆ ಪ್ರಾರಂಭಿಸಿದ ರೈತ ವಿದ್ಯಾನಿಧಿ ಯೋಜನೆಯಡಿ ರೈತ ವಿದ್ಯಾನಿಧಿಯಿಂದ ಕಳೆದ ವರ್ಷ 8.50 ಲಕ್ಷ ಹಾಗೂ ಈ ವರ್ಷ 9.8 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  CM Basavaraja Bommai ಹೇಳಿದರು.

ಒಂದು ವರ್ಷದ ತಮ್ಮ ಅಧಿಕಾರಾವಧಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.
ಪ್ರತಿ ದಿನವೂ ಕೂಡ 15-20 ಸಾವಿರ ಮಕ್ಕಳಿಗೆ ಡಿಬಿಟಿ ಮೂಲಕ ತಲುಪಿದೆ. ರೈತರ ಕುಟುಂಬಗಳಲ್ಲಿ ಅವರ ಮಕ್ಕಳ ವಿದ್ಯಾಭ್ಯಾಸ ಮಾಡುತ್ತಿರುವುದಕ್ಕೆ ರೈತರಲ್ಲಿ ಭರವಸೆ ಮೂಡಿದೆ ಎಂದರು.
ಬಡವರಿಗೆ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳಡಿ ಮಾಶಾಸನ :
ಮೊತ್ತ ಹೆಚ್ಚಳವಾಗಿದ್ದು, ಹೆಚ್ಚಿನ ಆರ್ಥಿಕ ನೆರವು , ಆಸರೆಯನ್ನು ಬಡವರಿಗೆ, ಅಂಗವಿಕಲರಿಗೆ ನೀಡಲಾಗಿದೆ. ಎಸ್.ಸಿ/ಎಸ್.ಟಿ ಸಮುದಾಯಕ್ಕೆ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯಲ್ಲಿ ಅನುದಾನವನ್ನು ಹಚ್ಚಿಸಲಾಗಿದೆ. ಎಸ್.ಸಿ/ ಎಸ್.ಟಿ., ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರ ವಿವಿಧ ನಿಗಮಗಳಿಗೆ ಬಜೆಟ್ ನಲ್ಲಿ ನೀಡಿರುವ ಮೊತ್ತಕ್ಕೆ ಹೆಚ್ಚುವರಿಯಾಗಿ 800 ಕೋಟಿ ರೂ. ಅನುದಾನ ಒದಗಿಸಲಾಗಿದೆ.

Also read: ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಹಿಂದೂ ಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ

ವಿಶೇಷವಾಗಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದಸುಮಾರು 25 ಲಕ್ಷ ಕ್ಕಿಂತ ಹೆಚ್ಚು ಬಡ ಕುಟುಂಬಗಳಿಗೆ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಇದಕ್ಕೆ ವಾರ್ಷಿಕ 700 ಕೋಟಿ ರೂ. ಹೆಚ್ಚುವರಿ ಅನುದಾನ ಒದಗಿಸಲಾಗುತ್ತಿದೆ ಎಂದು ತಿಳಿಸಿದರು.
ವಸತಿನಿಲಯಗಳ ಭೋಜನ ವೆಚ್ಚ ಹಾಗೂ ವಿದ್ಯಾರ್ಥಿವೇತನದ ಮೊತ್ತ ಹೆಚ್ಚಿಸಲಾಗಿದೆ. 100 ಎಸ್.ಸಿ/ಎಸ್.ಟಿ ವಿದ್ಯಾರ್ಥಿನಿಲಯಗಳನ್ನು ನಿರ್ಮಿಸಲಾಗುತ್ತಿದೆ. 50 ಒಬಿಸಿ ಹಾಸ್ಟೆಲ್ಗಳು ಹಾಗೂ ಐದು ನಗರಗಳಲ್ಲಿ 1000 ವಿದ್ಯಾರ್ಥಿಗಳಿಗೆ ವಸತಿ ಕಲ್ಪಿಸುವ ಬೃಹತ್ ಹಾಸ್ಟಲ್ ಗಳನ್ನು ಹುಬ್ಬಳ್ಳಿ- ಧಾರವಾಡ, ಬೆಂಗಳೂರು, ಗುಲ್ಬರ್ಗಾ, ಮೈಸೂರು, ಮಂಗಳೂರಿನಲ್ಲಿ ನಿರ್ಮಿಸಲಾಗುತ್ತಿದೆ ಎಂದು ನುಡಿದರು.

ಇದರೊಂದಿಗೆ ಮನೆ ನಿರ್ಮಾಣಕ್ಕೆ ನೀಡುವ ಅನುದಾನವನ್ನು 75 ಸಾವಿರದಿಂದ 1 ಲಕ್ಷ ರೂ. ಗಳಿಗೆ ಹೆಚ್ಚಿಸಲಾಗಿದೆ. ಭೂಚೇತನ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಸುಮಾರು 3500 ಹೆಕ್ಟೇರ್ ಜಮೀನು ಖರೀದಿ ಮಾಡಲಾಗಿದೆ. ಮನೆ ಖರೀದಿ ಮಾಡುವ ದರವನ್ನೂ ಸಹ ಹೆಚ್ಚಿಸಲಾಗಿದೆ. ರೂ. 1.75 ಲಕ್ಷ ಇದ್ದ ಮೊತ್ತವನ್ನು ರೂ. 2 ಲಕ್ಷಕ್ಕೆ ಏರಿಸಲಾಗಿದೆ ಎಂದು ತಿಳಿಸಿದರು.
ಸ್ತ್ರೀ ಶಕ್ತಿ ಸಂಘಗಳ ಬಲವರ್ಧನೆಗೆ ವಿಶೇಷವಾದ ಯೋಜನೆಯನ್ನು ಪ್ರಥಮಬಾರಿ ರಾಜ್ಯದಲ್ಲಿ ರೂಪಿಸಲಾಗಿದೆ. ಉದ್ಯೋಗ ದೊರಕಿಸಲು, 1.50 ಲಕ್ಷ ಬೀಜ ಧನವನ್ನ ನೀಡಿ, ಆಂಕರ್ ಬ್ಯಾಂಕುಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಅವರಿಗೆ ಸಾಲ ಖಾತ್ರಿಯಾಗಿ ಸಿಗುವ ವ್ಯವಸ್ಥೆ ಮಾಡಿ, ವಿವಿಧ ಕಸುಬುಗಳಲ್ಲಿ ತರಬೇತಿ ನೀಡಿ ಅವರು ಉತ್ಪಾದಿಸುವ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ ಕಲ್ಪಿಸಲು ವಿವಿಧ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ. ಪ್ರಥಮ ಬಾರಿಗೆ ಸ್ತ್ರೀ ಶಕ್ತಿ ಸಂಘಗಳಿಗೆ ಉತ್ಪಾದನೆಗೆ ಸಹಾಯ ಮಾಡುವುದಲ್ಲದೆ ಮಾರುಕಟ್ಟೆ ಒದಗಿಸುವ ಎಂಡ್ -ಟು-ಎಂಡ್ ಅಪ್ರೋಚ್ ಮೂಲಕ 5 ಲಕ್ಷ ಸ್ತ್ರೀಯರಿಗೆ ಸ್ವಯಂ ಉದ್ಯೋಗ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ನುಡಿದರು.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಒಪ್ಪಿ, ಅನುಷ್ಠಾನ ಮಾಡುತ್ತಿರುವ ರಾಜ್ಯ ನಮ್ಮದು. ಕೋವಿಡ್ ಸಂದರ್ಭದಲ್ಲಿ ಆರೋಗ್ಯ ವಲಯದಲ್ಲಿ ಮೂಲಸೌಕರ್ಯಗಳನ್ನು ಹೆಚ್ಚಿಸಲಾಗಿದೆ. ನಮ್ಮ ಸರ್ಕಾರ 750 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಅಭಿವೃದ್ಧಿಪಡಿಸಲು ತಲಾ 20 ಲಕ್ಷ ರೂ.ಗಳನ್ನು ಒದಗಿಸಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: 2008 Mumbai attack mastermindBangaloreCM Basavaraja BommaiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರುಮಲೆನಾಡು_ಸುದ್ಧಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಶಿವಮೊಗ್ಗ_ನ್ಯೂಸ್
Share197Tweet123Send
Previous Post

ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಹಿಂದೂ ಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ

Next Post

ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ ಹಿನ್ನೆಲೆ ಪವಿತ್ರಾ ರಾಮಯ್ಯ ಸ್ಥಳ ಪರಿಶೀಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ ಹಿನ್ನೆಲೆ ಪವಿತ್ರಾ ರಾಮಯ್ಯ ಸ್ಥಳ ಪರಿಶೀಲನೆ

ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ ಹಿನ್ನೆಲೆ ಪವಿತ್ರಾ ರಾಮಯ್ಯ ಸ್ಥಳ ಪರಿಶೀಲನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಶೋಚನೀಯ ಸ್ಥಿತಿಯಲ್ಲಿ ಪಶ್ಚಿಮಘಟ್ಟದ ಪ್ರವಾಸಿತಾಣಗಳು: ಡಿ.ಎಸ್. ಅರುಣ್ ಆಕ್ರೋಶ

ಮರಳು ಮಾಫಿಯಾ ದಬ್ಬಾಳಿಕೆ, ಜನರಿಗೆ ಸಂಕಷ್ಟ: ತಕ್ಷಣ ಕ್ರಮಕ್ಕೆ ಡಿ.ಎಸ್. ಅರುಣ್ ಒತ್ತಾಯ

March 27, 2026
ಮುಸ್ಲಿಂರ ಪರವಾಗಿ ಮಾತನಾಡಿದರೆ ಕೋಮುವಾದವಲ್ಲವೇ? ಮಾಜಿ ಡಿಸಿಎಂ ಈಶ್ವರಪ್ಪ ಪ್ರಶ್ನೆ

ಮುಸ್ಲಿಂರ ಪರವಾಗಿ ಮಾತನಾಡಿದರೆ ಕೋಮುವಾದವಲ್ಲವೇ? ಮಾಜಿ ಡಿಸಿಎಂ ಈಶ್ವರಪ್ಪ ಪ್ರಶ್ನೆ

March 27, 2026
2025-26 ನೇಯ ಸಾಲಿನ ಹವ್ಯಕ ವಿಶೇಷ ಪ್ರಶಸ್ತಿ ಪ್ರಕಟ | ಯಾರಿಗೆಲ್ಲಾ ಒಲಿಯಿತು ಗೌರವ?

2025-26 ನೇಯ ಸಾಲಿನ ಹವ್ಯಕ ವಿಶೇಷ ಪ್ರಶಸ್ತಿ ಪ್ರಕಟ | ಯಾರಿಗೆಲ್ಲಾ ಒಲಿಯಿತು ಗೌರವ?

March 27, 2026
ಮಾರ್ಚ್ 28 – ಎಪ್ರಿಲ್ 3 | ಬೆಂಗಳೂರಿನ ಕೆಂಗೇರಿ ಮಠದಲ್ಲಿ ಭಾಗವತ ಪ್ರವಚನ

ಮಾರ್ಚ್ 28 – ಎಪ್ರಿಲ್ 3 | ಬೆಂಗಳೂರಿನ ಕೆಂಗೇರಿ ಮಠದಲ್ಲಿ ಭಾಗವತ ಪ್ರವಚನ

March 27, 2026
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL