ಕಲ್ಪ ಮೀಡಿಯಾ ಹೌಸ್ | ಬೆಳಗಾವಿ |
ಬೆಳಗಾವಿಯ ರಾಣಿ ಚೆನ್ನಮ್ಮ ವಿವಿಯ 10ನೇ ಘಟಿಕೋತ್ಸವ ಸೆಪ್ಟಂಬರ್ 14ರಂದು ನಡೆಯಲಿದ್ದು, ಚಿತ್ರನಟ ರಮೇಶ್ ಅರವಿಂದ್ Actor Ramesh ಸೇರಿ ಮೂವರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಲಾಗುವುದು ಎಂದು ರಾಣಿ ಚೆನ್ನಮ್ಮ ವಿವಿ Rani Chennamma VV ಕುಲಪತಿ ಪ್ರೊ. ರಾಮಚಂದ್ರೆಗೌಡ ಹೇಳಿದ್ದಾರೆ.
ಈ ಬಗ್ಬೆ ಮಾಹಿತಿ ನೀಡಿರುವ ಅವರು, ಕನ್ನಡ ಚಿತ್ರರಂಗಕ್ಕೆ ರಮೇಶ್ ಅರವಿಂದ್ ಸಲ್ಲಿಸಿದ ಸೇವೆ ಪರಿಗಣಿಸಿ ಗೌರವ ಡಾಕ್ಟರೇಟ್‌ಗೆ ಆಯ್ಕೆ ಮಾಡಲಾಗಿದೆ. ಸಮಾಜ ಸೇವೆ ಕ್ಷೇತ್ರದಲ್ಲಿ ವಿ. ರವಿಚಂದರ್, ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಸೇವೆಗೈದ ಮಾತೆ ಅಕ್ಕ ಅನ್ನಪೂರ್ಣ ತಾಯಿಗೆ ಸುವರ್ಣಸೌಧದಲ್ಲಿ ನಡೆಯಲಿರುವ ಘಟಿಕೋತ್ಸವದಲ್ಲಿ ಗೌಡಾ ಪ್ರಧಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಘಟಿಕೋತ್ಸವದ ಅಧ್ಯಕ್ಷ ವಹಿಸಲಿದ್ದು, ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್ ಅಶ್ವಥ್ ನಾರಾಯಣ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಆಂಧ್ರದ ಕೇಂದ್ರಿಯ ಬುಡಕಟ್ಟು ವಿವಿ ಕುಲಪತಿ ಪ್ರೊ. ಟಿ.ವಿ ಕಟ್ಟಿಮನಿ ಅವರಿಂದ ಘಟಿಕೋತ್ಸವ ಭಾಷಣ ನಡೆಯಲಿದೆ.
ಇದೇ ಸಂದರ್ಭದಲ್ಲಿ ವಿವಿಧ ವಿಭಾಗಗಳಲ್ಲಿ 48 ವಿದ್ಯಾರ್ಥಿಗಳಿಗೆ ಪಿಎಚ್‌ಡಿ ಪ್ರಧಾನ ಮಾಡಲಾಗುವುದು. ಹಾಗೂ ಸ್ನಾತಕೋತ್ತರ-ಪದವಿಯ 163 ವಿದ್ಯಾರ್ಥಿಗಳಿಗೆ ಪದಕ.ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post