ಕಲ್ಪ ಮೀಡಿಯಾ ಹೌಸ್ | ಬಳ್ಳಾರಿ |
ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ನಗರದ ಹೊರವಲಯದ ಮುಂಡರಗಿ ಆಶ್ರಯ ಬಡಾವಣೆ(ದಕ್ಷಿಣ ವಲಯ)ಯಲ್ಲಿ 33 ಕೋಟಿ ರೂ.ವೆಚ್ಚದಲ್ಲಿ ಕೈಗೆತ್ತಿಗೊಳ್ಳಲಾದ ನೀರು ಸರಬರಾಜು ಮತ್ತು ಒಳಚರಂಡಿ ವ್ಯವಸ್ಥೆ ಒದಗಿಸುವ ಕಾಮಗಾರಿಗೆ ಸಾರಿಗೆ,ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು Minister Shriramulu ಅವರು ಬುಧವಾರ ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರು ನೀರು ಸರಬರಾಜು ಮತ್ತು ಒಳಚರಂಡಿ ಕಾಮಗಾರಿಯನ್ನು ನಿಗದಿಪಡಿಸಿದ ಅವಧಿಯೊಳಗೆ ಯಾವುದೇ ರೀತಿಯಲ್ಲಿ ಗುಣಮಟ್ಟದಲ್ಲಿ ರಾಜಿಯಾಗದೇ ಅತ್ಯಂತ ಗುಣಮಟ್ಟದಿಂದ ನಿರ್ಮಿಸಬೇಕು ಎಂದು ಅವರು ಸೂಚನೆ ನೀಡಿದರು.

Also read: ಆ. 27ರಂದು ವಿಪ್ರ ಪ್ರಶಸ್ತಿ ಪ್ರದಾನ: ಸಾಧಕರಿಗೆ ಅಭಿನಂದನಾ ಸಮಾರಂಭ
ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಮಾತನಾಡಿ 33 ಕೋಟಿ ರೂ.ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಈ ಕಾಮಗಾರಿಯನ್ನು ಗುಣಮಟ್ಟದಿಮದ ನಿರ್ಮಿಸುವಂತೆ ಸೂಚಿಸಿದರು.











Discussion about this post