ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನೇಪಾಳದ ಪೊಖಾರದಲ್ಲಿ ಜರುಗಿದ 2ನೇ ಇಂಡೋ-ನೇಪಾಳ್ ಚಾಂಪಿಯನ್‌ಶಿಪ್ ಪಂದ್ಯಾವಳಿಯಲ್ಲಿ ತಾಲೂಕಿನ ಕಾರೇಹಳ್ಳಿ ಬಾಲಗಂಗಾಧರನಾಥ ಸ್ವಾಮೀಜಿ ಕೇಂದ್ರೀಯ ವಿದ್ಯಾಲಯ (ಬಿಜಿಎಸ್ ಶಾಲೆ)ದ ವಿದ್ಯಾರ್ಥಿಗಳು ಭಾಗವಹಿಸಿ ಪ್ರಶಸ್ತಿ ಗಳಿಸಿ, ನಗರಕ್ಕೆ ಆಗಮಿಸಿದ ವಿಜೇತ ತಂಡಕ್ಕೆ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಬಳಿ ಅದ್ದೂರಿಯಾಗಿ ಸ್ವಾಗತ ಕೋರಲಾಯಿತು.
ನಗರದ ಪ್ರಮುಖರು, ಪೋಷಕರು, ಕ್ರೀಡಾಭಿಮಾನಿಗಳು ವಿಜೇತ ತಂಡ ಆಗಮಿಸುತ್ತಿದ್ದಂತೆ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿ ಸಿಹಿ ಹಂಚಿದರು. ಅಲ್ಲದೆ ವಿಜೇತ ತಂಡದ ಎಲ್ಲರನ್ನು ಸನ್ಮಾನಿಸಿ ಅಭಿನಂದಿಸಿದರು. ನಂತರ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದಲ್ಲಿರುವ ಸರ್ ಎಂ. ವಿಶ್ವೇಶ್ವರಾಯನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಪಿಸಿಎ ಸ್ಪೋರ್ಟ್ಸ್ ಮ್ಯಾನೇಜ್‌ಮೆಂಟ್ ನೇಪಾಳ್ ಮತ್ತು ನ್ಯಾಷನಲ್ ಸ್ಪೋರ್ಟ್ಸ್ & ಎಜ್ಯುಕೇಷನ್ ಡೆವಲಪ್‌ಮೆಂಟ್ ಫೆಡರೇಷನ್ ಇಂಡಿಯಾ ವತಿಯಿಂದ ಆಯೋಜಿಸಲಾಗಿದ್ದ ಪಂದ್ಯಾವಳಿಯಲ್ಲಿ 14 ವರ್ಷದೊಳಗಿನ ವಿಭಾಗದಲ್ಲಿ ಕೇಂದ್ರೀಯದ ವಿದ್ಯಾರ್ಥಿಗಳಾದ ಬಿ.ಎಂ ವೇದಾಂತ್ ಡಿಸ್ಕಸ್ ಥ್ರೋ, ಕೆ. ಸಮಥ ಗುಂಡು ಎಸೆತ, ಶರಥ್ವಿ ಬಾಗ್ಸಲೆ 200 ಮೀ. ಓಟ, ಕೆ,ಎಸ್ ಮೊಹಮದ್ ರಯಾನ್ 400 ಮೀ. ಓಟ, ಕೆ. ಸುಪ್ರಿತ ಯೋಗಾಸನ ಮತ್ತು ಡಿ. ಚಿನ್ಮಯ ಪ್ರಸಾದ್ ಚೆಸ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಹಾಗು ಕೆ.ಸಿ ಸಮರ್ಥ್ ಪುರಾಣಿಕ್ ಚೆಸ್ ಮತ್ತು ಪಿ. ಜಸ್ವಂತ್ ರೆಡ್ಡಿ 200 ಮೀ. ಓಟದಲ್ಲಿ ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ.
Also read: ಸಾಗರ ತಾಲೂಕಿನಲ್ಲಿ 30 ಸಾವಿರ ರಾಷ್ಟ್ರಧ್ವಜಗಳ ಹಾರಾಟ: ಶಾಸಕ ಹಾಲಪ್ಪ
ವಿಐಎಸ್‌ಎಲ್ ಕಾರ್ಮಿಕ ಸಂಘದ ಉಪಾಧ್ಯಕ್ಷ ಕುಮಾರ್, ಎಎಲ್‌ಡಬ್ಲ್ಯೂ ತರಬೇತಿದಾರರು, ಎಲ್. ವೆಂಕಟೇಶ್ ನಾಯಕ್, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಬಿಜೆಪಿ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಛಲವಾದಿ ಸಮಾಜದ ಪ್ರಮುಖರಾದ ಎಸ್.ಎಸ್ ಭೈರಪ್ಪ, ಡಿ. ನರಸಿಂಹಮೂರ್ತಿ, ಮಂಜುನಾಥ್, ಎ. ತಿಪ್ಪೇಸ್ವಾಮಿ, ತಾಲೂಕು ಒಕ್ಕಲಿಗ ಸಂಘದ ಅಧ್ಯಕ್ಷ ಎ.ಟಿ ರವಿ, ನಗರಸಭಾ ಸದಸ್ಯ ಕೋಟೇಶ್ವರರಾವ್, ದಿಲೀಪ್, ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಟಿ. ಚಂದ್ರೇಗೌಡ, ಬಿ.ಎಂ ರವಿಕುಮಾರ್, ಧನುಷ್ ಬೋಸ್ಲೆ, ನಕುಲ್, ಮಂಜುನಾಥ್ ಕೊಯ್ಲಿ, ಗಿರೀಶ್ ಸೇರಿದಂತೆ ಪೋಷಕರು, ಕ್ರೀಡಾಭಿಮಾನಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















