ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಕ್ರಿಕೆಟ್ ಆಡುತ್ತಿದ್ದ ವೇಳೆ ನಗರಸಭೆ ಗುತ್ತಿಗೆ ನೌಕರನೋರ್ವ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದೆ.
ನ್ಯೂಟೌನ್ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ನಗರಸಭೆ ವತಿಯಿಂದ ಆಯೋಜಿಸಲಾಗಿದ್ದ ಕ್ರೀಡಾ ಕೂಟದಲ್ಲಿ ಆಟವಾಡುತ್ತಿದ್ದಾಗ ಹೊರ ಗುತ್ತಿಗೆ ಪೌರಕಾರ್ಮಿಕ ಹಳೇನಗರದ ಭೂತನಗುಡಿ ನಿವಾಸಿ ದಿನೇಶ್‌ರಾವ್(38) ಮೃತಪಟ್ಟಿದ್ದಾರೆ.
ಕಳೆದ 4 ವರ್ಷಗಳಿಂದ ನಗರದ ಬೈಪಾಸ್ ರಸ್ತೆ ಆನೇಕೊಪ್ಪದಲ್ಲಿರುವ ನಗರಸಭೆ ಜಲ ಸಂಗ್ರಹಗಾರದಲ್ಲಿ (ಪಂಪ್ ಹೌಸ್) ಹೊರ ಗುತ್ತಿಗೆ ಪೌರಕಾರ್ಮಿಕರಾಗಿ ಕರ್ತವ್ಯ ನಿರ್ವಹಿಸಿದ್ದ ಅವರು ಕ್ರಿಕೆಟ್ ಆಟವಾಡುತ್ತಿದ್ದಾಗ ಏಕಾಏಕಿ ಕುಸಿದು ಕೆಳಗೆ ಬಿದ್ದಿದ್ದಾರೆ. ತಕ್ಷಣ ಸ್ಥಳದಲ್ಲಿಯೇ ಹಾಜರಿದ್ದ ಆರೋಗ್ಯ ಸಿಬ್ಬದಿ ತಪಾಸಣೆ ನಡೆಸಿದ್ದು ಮೃತಪಟ್ಟಿರುವುದನ್ನು ಖಚಿತ ಪಡಿಸಿದ್ದಾರೆ.
ದಿನೇಶ್‌ರಾವ್ ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದು, ಅವರ ನಿಧನಕ್ಕೆ ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪೌರಾಯುಕ್ತರು, ಪೌರಕಾರ್ಮಿಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಪೌರಕಾರ್ಮಿಕರು ಸಂತಾಪ ಸೂಚಿಸಿದ್ದಾರೆ.
Also read: ಅನಾರೋಗ್ಯದಿಂದ ಪಾರಾಗಲು ಯೋಗಾಭ್ಯಾಸ ಅನಿವಾರ್ಯ: ಜಿಪಂ ಸಿಇಒ ವೈಶಾಲಿ ಅಭಿಪ್ರಾಯ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
 
	    	




 Loading ...
 Loading ... 
							



 
                
Discussion about this post