ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಗರದ ಹೊಸ ಸೇತುವೆ ರಸ್ತೆಯಲ್ಲಿರುವ ವಿಶ್ವೇಶ್ವರಯ್ಯ ವಿದ್ಯಾಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರು ಹಾಗೂ ನಿವೃತ್ತ ದೈಹಿಕ ಶಿಕ್ಷಕರು ಕೆ. ಶ್ಯಾಮಣ್ಣ (82) ಶನಿವಾರ ಬೆಳಗ್ಗೆ ನಿಧನರಾದರು.
ಕೆಲವು ವರ್ಷಗಳಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಇತ್ತೀಚೆಗೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Also read: ತಂಬಾಕು ಉತ್ಪನ್ನ ಮಾರಾಟ ಹಿನ್ನೆಲೆ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ
ಇವರ ನಿಧನಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಪ್ಪ ಹಾಗೂ ಪದಾಧಿಕಾರಿಗಳು, ಮಾಜಿ ಅಧ್ಯಕ್ಷ ಎನ್. ಕೃಷ್ಣಪ್ಪ, ವಿಶ್ವೇಶ್ವರಯ್ಯ ವಿದ್ಯಾಸಂಸ್ಥೆ ಸಂಸ್ಥಾಪಕರಾದ ಡಾ. ಜಿ.ಎಂ. ನಟರಾಜ್, ಬಿ. ಎಲ್. ರಂಗಸ್ವಾಮಿ, ಸರ್ಕಾರಿ ನಿವೃತ್ತ ನೌಕರರ ಸಂಘದ ಪದಾಧಿಕಾರಿಗಳು, ಶಾಸಕ ಬಿ.ಕೆ ಸಂಗಮೇಶ್ವರ್ ಸೇರಿದಂತೆ ಇನ್ನಿತರ ಗಣ್ಯರು, ವಿವಿಧ ಸಂಘ ಸಂಸ್ಥೆಗಳು ಸಂತಾಪ ಸೂಚಿಸಿವೆ.










Discussion about this post