ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಶಿವಮೊಗ್ಗದಲ್ಲಿ ನಿನ್ನೆ ಉಂಟಾದ ಗಲಭೆ ಹಿನ್ನೆಲೆಯಲ್ಲಿ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ ನಡುವೆಯೂ ಬಜರಂಗದಳ ಕಾರ್ಯಕರ್ತ ಸುನೀಲ್ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ.
ನೆಹರೂ ನಗರದಲ್ಲಿ ಡಿಚ್ಚಿ ಮುಬಾರತ್ ಎಂಬಾತನಿಗೂ ಸುನೀಲ್’ಗೂ ಗಲಾಟೆ ನಡೆದಿದ್ದು, ಈ ವೇಳೆ ಸುನೀಲ್ ಮೇಲೆ ಹಲ್ಲೆ ನಡೆಸಲಾಗಿದೆ. ಎಡ ಗೈ, ಭುಜ ಮತ್ತು ತಲೆಗೆ ಕೈ ಯಿಂದ ಹಲ್ಲೆ ಮಾಡಿದ್ದಾನೆ. ಚಾಕುವಿನಿಂದ ಇರಿಯಲು ಯತ್ನಿಸಲಾಗಿದೆ. ಆದರೆ, ಸುನೀಲ್ ಕೂದಲೆಳೆ ಅಂತರದಲ್ಲಿ ಪಾರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಘಟನೆ ಇಬ್ಬರ ನಡುವಿನ ಹಳೆಯ ವೈಮನಸ್ಯಕ್ಕೆ ನಡೆದಿದ್ದು ಎಂದು ಹೇಳಲಾಗಿದ್ದರೂ, ಸೂಕ್ಷ್ಮ ಸಮಯದ ವೇಳೆ ಇಂತಹ ಘಟನೆ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ.
Also read: ಮುಸ್ಲಿಂ ಯುವಕರು ಬದಲಾಗದಿದ್ದಲ್ಲಿ ಸರ್ಕಾರ ಬುದ್ಧಿ ಕಲಿಸಲಿದೆ: ಶಾಸಕ ಈಶ್ವರಪ್ಪ ಎಚ್ಚರಿಕೆ
ಕಲಂ 341, 323 ಐಪಿಸಿ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತದೆ. ಹಳೇನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಶಿವಮೊಗ್ಗದ ಘಟನೆ ಹಿನ್ನೆಲೆಯಲ್ಲಿ ನಗರದಲ್ಲೂ ಸಹ ನಿನ್ನೆಯಿಂದಲೇ ಸೆಕ್ಷನ್ ಜಾರಿಗೊಳಿಸಲಾಗಿದ್ದು, ನಗರದಲ್ಲಿ ಹೆಜ್ಜೆ ಹೆಜ್ಜೆಗೂ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ನಿನ್ನೆ ಸಂಜೆಯಿಂದಲೇ ವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆ ಅವರೇ ಖುದ್ಧು ಭದ್ರತಾ ವ್ಯವಸ್ಥೆಯನ್ನು ಕೈಗೊಂಡಿದ್ದು, ಯಾವುದೇ ರೀತಿಯ ಅಹಿತಕರ ಘಟನೆಗೆ ಆಸ್ಪದ ಆಗದಂತೆ ಕ್ರಮ ವಹಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post