ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ವಿನಾಯಕ ಸೇವಾ ಸಮಿತಿ ವತಿಯಿಂದ ಹೊಸಮನೆಯಲ್ಲಿ ಪ್ರತಿಷ್ಠಾಪಿಸಲಾಗಿರುವ ಶ್ರೀವಿನಾಯಕ ಮೂರ್ತಿ ವಿಸರ್ಜನೆ ಸೆ.8ರ ನಾಳೆ ನಡೆಯಲಿದ್ದು, ನಗರದಾದ್ಯಂತ ಬಿಗಿ ಭದ್ರತೆ ಕಲ್ಪಿಸಲಾಗಿದೆ.
ಗಣಪತಿ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆದಂತೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

ಇನ್ನು, ನಗರದಲ್ಲಿ ಶಾಂತಿ-ಸುವ್ಯವಸ್ಥೆ ಕುರಿತು ಜನರಲ್ಲಿ ಮೂಡಿಸುವ ಜೊತೆಗೆ ನಿಮ್ಮೊಂದಿಗೆ ನಾವಿದ್ದೇವೆ ಎಂಬ ಭರವಸೆ ಮೂಡಿಸುವ ಉದ್ದೇಶದೊಂದಿಗೆ ಪೊಲೀಸ್ ಇಲಾಖೆ ವತಿಯಿಂದ ಮಂಗಳವಾರ ಹೊಸಮನೆ ಶಿವಾಜಿ ವೃತ್ತದಿಂದ ರಂಗಪ್ಪ ವೃತ್ತದವರೆಗೂ ಪಥ ಸಂಚಲನ ನಡೆಸಲಾಯಿತು.
Also read: ನನ್ನ ಪಾಲಿಸಿ ನನ್ನ ಕೈಯಲ್ಲಿ : ಜಿಲ್ಲಾಧಿಕಾರಿಗಳಿಂದ ವಿಮಾ ಪಾಲಿಸಿ ವಿತರಣೆ
ಪಥ ಸಂಚಲನದಲ್ಲಿ ಪೊಲೀಸ್ ಇಲಾಖೆ ಹಾಗು ಆರ್‌ಎಎಫ್ ಸಿಬ್ಬಂದಿಗಳು, ಅಧಿಕಾರಿಗಳು ಪಾಲ್ಗೊಂಡಿದ್ದರು. ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ವಿಕ್ರಮ್ ಅಮಟೆ ನೇತೃತ್ವದಲ್ಲಿ ಪಥ ಸಂಚಲನ ನಡೆಯಿತು.

ಇನ್ನು, ರಾಜಬೀದಿ ಉತ್ಸವ ಮೆರವಣಿಗೆ ಹಿನ್ನೆಲೆಯಲ್ಲಿ ಪ್ರಮುಖ ವೃತ್ತ ಹಾಗು ರಸ್ತೆಗಳಲ್ಲಿ ನಗರಸಭೆ ವತಿಯಿಂದ ಬ್ಯಾರಿಗೇಡ್’ಗಳ ನಿರ್ಮಾಣ ನಡೆಯುತ್ತಿದ್ದು, ಈ ಬಾರಿ ಸಹ ಹೆಚ್ಚಿನ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಗಿದೆ.










Discussion about this post