ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಹೊಸಮನೆಯಲ್ಲಿ ಪ್ರತಿಷ್ಠಾಪನೆಗೊಂಡಿರುವ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವ ನಾಳೆ ನಡೆಯಲಿದ್ದು, ಈ ಬಾರಿ 50ನೆಯ ವರ್ಷದ ಸುವರ್ಣ ಮಹೋತ್ಸವ ಆಚರಣೆಯ ಸಂಭ್ರಮ ಮನೆ ಮಾಡಿದೆ.
ಸೆ.8ರ ನಾಳೆ ವಿಸರ್ಜನೆ ನಡೆಯಲಿದ್ದು, ಈ ಸಂಬಂಧ ನಡೆಯುವ ರಾಜಬೀದಿ ಉತ್ಸವ ಮೆರವಣಿಗೆಗೆ ಸಕಲ ಸಿದ್ದತೆಗಳು ನಡೆಯುತ್ತಿವೆ. ಈ ಬಾರಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು, ಅಭಿಮಾನಿಗಳು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.

Also read: ನಾಳೆ ಭದ್ರಾವತಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ: ನಗರದಲ್ಲಿ ಬಿಗಿ ಭದ್ರತೆ, ಪೊಲೀಸ್ ಪಥಸಂಚಲನ
50ನೆಯ ವರ್ಷದ ಸುವರ್ಣ ಮಹೋತ್ಸವ ಆಚರಣೆ ಹಿನ್ನಲೆಯಲ್ಲಿ ವಿನಾಯಕ ಸೇವಾ ಸಮಿತಿ ವತಿಯಿಂದ ಈ ಬಾರಿ ಬಿಎಚ್ ರಸ್ತೆ ಅಂಬೇಡ್ಕರ್ ವೃತ್ತ, ಮಾಧವಚಾರ್ ವೃತ್ತಗಳಲ್ಲಿ ರಾಜಮಹಾರಾಜರ ಕಾಲದ ಕೋಟೆಯಂತೆ ಮಹಾದ್ವಾರಗಳನ್ನು ನಿರ್ಮಿಸಲಾಗಿದೆ. ಮಹಾದ್ವಾರಗಳು ಆಕರ್ಷಕವಾಗಿ ಕಂಡು ಬರುವ ಜೊತೆಗೆ ಎಲ್ಲರ ಗಮನ ಸೆಳೆಯುತ್ತಿವೆ.










Discussion about this post