ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ವಿಶ್ವಕಂಡ ಶ್ರೇಷ್ಠ ಇಂಜಿನೀಯರ್ ಸರ್.ಎಂ. ವಿಶ್ವೇಶ್ವರಯ್ಯನವರ ಜೀವನದ ಆದರ್ಶಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು ಎಂದು ವಿಶ್ವೇಶ್ವರಯ್ಯ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಡಾ.ಎಸ್.ಪಿ. ರಾಕೇಶ್ ಕರೆ ನೀಡಿದ್ದಾರೆ.
ಸರ್.ಎಂ. ವಿಶ್ವೇಶ್ವರಯ್ಯನವರ ಜನ್ಮದಿನದ ಅಂಗವಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಭದ್ರಾವತಿ ತಾಲೂಕು ಆಶ್ರಿತ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

Also read: ಬೂಸ್ಟರ್ ಡೋಸ್ ಪಡೆಯಲು 18 ವರ್ಷ ಮೇಲ್ಪಟ್ಟವರಿಗೆ ಕೊನೆಯ ದಿನ ಎಂದು ಗೊತ್ತಾ?
ರಾಕೇಶ್ ಅವರು ವಿಶ್ವೇಶ್ವರಯ್ಯನವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಭಾವಚಿತ್ರಕ್ಕೆ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ವಿಭಾಗದ ಮುಖ್ಯಸ್ಥರು, ಉಪನ್ಯಾಸಕರು, ಶಿಕ್ಷಕರು, ಬೋಧಕೇತರ ಸಿಬ್ಬಂದಿಗಳು ಭಾಗಿಯಾಗಿದ್ದರು. ಪ್ರೌಢಶಾಲಾ ವಿದ್ಯಾರ್ಥಿಗಳು ವಿಶ್ವೇಶ್ವರಯ್ಯನವರ ಬಗ್ಗೆ ಉಪಯುಕ್ತ ಮಾಹಿತಿಗಳನ್ನು ಪ್ರಸ್ತುತಪಡಿಸಿದರು.

 
	    	




 Loading ...
 Loading ... 
							



 
                
Discussion about this post