ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಭದ್ರಾವತಿಯ ನಾಲ್ವರು ಶಿಕ್ಷಕರಿಗೆ ಪ್ರಸಕ್ತ ವರ್ಷದ ಜಿಲ್ಲಾಮಟ್ಟದ ಶಿಕ್ಷಕ ಪ್ರಶಸ್ತಿ ಲಭಿಸಿದ್ದು, ಅತ್ತಿಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಎ.ಎಂ. ಪ್ರಸನ್ನ ಜಿಲ್ಲಾಮಟ್ಟದ ಉತ್ತಮ ಶಿಕ್ಷಕರ ವಿಶೇಷ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ತಾಲೂಕಿನ ಹಡ್ಲಘಟ್ಟ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಜಿ.ಪಿ ಇಬ್ರಾಹಿಂ, ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಹಳೇನಗರದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಕೆ. ಕೋಕಿಲಾ ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ಅರಹತೊಳಲು ಸರ್ಕಾರಿ ಪ್ರೌಢಶಾಲೆ ಸಹ ಶಿಕ್ಷಕ ಎನ್. ಅಣ್ಣಪ್ಪ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.
ಪ್ರಶಸ್ತಿಗೆ ಭಾಜನರಾಗಿರುವ ಶಿಕ್ಷಕರಿಗೆ ಶಾಸಕ ಬಿ.ಕೆ. ಸಂಗಮೇಶ್ವರ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ. ನಾಗೇಂದ್ರಪ್ಪ ಸೇರಿದಂತೆ ತಾಲೂಕು ಶಿಕ್ಷಕ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
Also read: ಗುತ್ತಿಗೆದಾರರ ಹಾವಳಿ ತಪ್ಪಿಸಿ, ವಿಶೇಷ ಸಂದರ್ಭದಲ್ಲಿ ಸ್ಥಳ ಗುರುತಿಸಿ ವ್ಯಾಪಾರಕ್ಕೆ ಅವಕಾಶ ನೀಡಲು ಮನವಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post