ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಗರದ ಅಂತರಾಷ್ಟ್ರೀಯ ಖೋ ಖೋ ಕ್ರೀಡಾಪಟು ಎ. ಮುನಿರ್ ಬಾಷ ಅವರ ಕ್ರೀಡಾ ಸಾಧನೆಗೆ ಈ ಬಾರಿ ಏಕಲವ್ಯ ಪ್ರಶಸ್ತಿ ಲಭಿಸಿದೆ.
ಕಳೆದ ವರ್ಷ ಖೋ ಖೋ ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ದೆಹಲಿಯಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಖೋ ಖೋ ತರಬೇತಿ ಶಿಬಿರಕ್ಕೆ ಮುನಿರ್ ಬಾಷ ಆಯ್ಕೆಯಾಗಿದ್ದರು.
ಮುನಿರ್ ಬಾಷಾರವರು ಈ ಹಿಂದೆ 2016ರಲ್ಲಿ ನಡೆದ 12ನೇ ಸೌತ್ ಇಂಡಿಯನ್ ಗೇಮ್ಸ್ ಖೋ ಖೋ ಪಂದ್ಯಾವಳಿಯಲ್ಲಿ ಭಾರತ ತಂಡದ ಉಪನಾಯಕರಾಗಿ ತಂಡವನ್ನು ಮುನ್ನಡೆಸಿದ್ದರು. ಅಲ್ಲದೆ 2019ರಲ್ಲಿ ನಡೆದ 13ನೇ ಸೌತ್ ಇಂಡಿಯನ್ ಗೇಮ್ಸ್ ಖೋ ಖೋ ಪಂದ್ಯಾವಳಿಯಲ್ಲಿ ರಾಜ್ಯವನ್ನು ಪ್ರತಿನಿಧಿಸಿ ಶ್ರೀಲಂಕ ವಿರುದ್ಧ ಭಾರತ ತಂಡದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post