ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಈ ಬಾರಿ ಎಲ್ಲೆಡೆ ಗಣೇಶೋತ್ಸವ ಅದ್ದೂರಿಯಾಗಿ ಆಚರಿಸಲು ಸಿದ್ದತೆಗಳು ನಡೆಯುತ್ತಿದ್ದು, ನಗರಸಭೆ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ವಿನಾಯಕ ಮೂರ್ತಿಗಳನ್ನು ಪ್ರತಿಷ್ಠಾಪಿಸುವವರು ಅನುಸರಿಸಬೇಕಾದ ಸೂಕ್ತ ಕ್ರಮಗಳ ಕುರಿತು ಚರ್ಚಿಸಲು ಆ.24ರಂದು ಬೆಳಿಗ್ಗೆ 11 ಗಂಟೆಗೆ ನಗರಸಭೆ ಸಭಾಂಗಣದಲ್ಲಿ ಸಭೆ ಕರೆಯಲಾಗಿದೆ.
ಗಣೇಶೋತ್ಸವ ಆಚರಿಸುವ ಸಮಿತಿಯವರು ಸಾರ್ವಜನಿಕರಿಗೆ ಯಾವುದೇ ರೀತಿ ತೊಂದರೆಯಾಗದಂತೆ ಅನುಸರಿಸಬೇಕಾದ ಕ್ರಮಗಳ ಕುರಿತು ನಗರಸಭೆ ಅಧ್ಯಕ್ಷೆ ಗೀತಾ ರಾಜಕುಮಾರ್ ಅಧ್ಯಕ್ಷತೆಯಲ್ಲಿ ಚರ್ಚಿಸಲಾಗುವುದು. ಈ ಹಿನ್ನಲೆಯಲ್ಲಿ ಸಭೆಯಲ್ಲಿ ಪಾಲ್ಗೊಂಡು ಸಲಹೆ, ಸೂಚನೆಗಳನ್ನು ನೀಡುವಂತೆ ಪೌರಾಯುಕ್ತ ಮನುಕುಮಾರ್ ಕೋರಿದ್ದಾರೆ.
Also read: ಶಿವಮೊಗ್ಗ: ವಿಶ್ವ ಯುವ ಕೌಶಲ್ಯ ದಿನಾಚರಣೆ ಪ್ರಬಂಧ ಸ್ಪರ್ಧೆ ವಿಜೇತರಿಗೆ ಅಭಿನಂದನೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post