ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಪ್ರಸಕ್ತ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮರು ಮೌಲ್ಯಮಾಪನದಲ್ಲಿ SSLC Exam revaluation ಹೊಳೆಹೊನ್ನೂರು ಸೇಂಟ್ ಮೇರಿಸ್ ಶಾಲೆಯ ವಿದ್ಯಾರ್ಥಿನಿ ಕೆ.ಎಂ. ಪೂರ್ವಿಕಗೆ 625 ಅಂಕಗಳನ್ನು ಪಡೆದುಕೊಳ್ಳುವ ಮೂಲಕ ತಾಲೂಕಿಗೆ ಕೀರ್ತಿ ತಂದಿದ್ದಾರೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 624 ಅಂಕ ಪಡೆದುಕೊಂಡಿದ್ದರು. ದ್ವಿತೀಯ ಭಾಷೆಯಲ್ಲಿ 100ಕ್ಕೆ 99 ಅಂಕ ಲಭಿಸಿತ್ತು. ಮರು ಮೌಲ್ಯಮಾಪನದ ನಂತರ ದ್ವಿತೀಯ ಭಾಷೆಯಲ್ಲೂ ಸಹ 100ಕ್ಕೆ 100 ಅಂಕ ಪಡೆದುಕೊಂಡಿದ್ದಾರೆ.
ಒಟ್ಟಾರೆ ತಾಲೂಕಿನಲ್ಲಿ ಈ ಬಾರಿ 3 ವಿದ್ಯಾರ್ಥಿನಿಯರು 625ಕ್ಕೆ 625 ಅಂಕ ಪಡೆದುಕೊಂಡಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲಾ ಉಪನಿರ್ದೇಶಕ ಪರಮೇಶ್ವರಪ್ಪ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
Also read: ಬೆಂಗಳೂರು: ಸರಣಿ ಅಪಘಾತದಿಂದ ಟ್ರಾಫಿಕ್ ಜಾಮ್! ಪರದಾಡಿದ ಸಾರ್ವಜನಿಕರು
ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ. ನಾಗೇಂದ್ರಪ್ಪ, ಇ.ಓ. ರಾಮಪ್ಪ, ಡಯಟ್ ಉಪನ್ಯಾಸಕಿ ರೇಣುಕಾ, ಸಂಪನ್ಮೂಲ ಸಮನ್ವಯಾಧಿಕಾರಿ ಪಂಚಾಕ್ಷರಿ, ಇಸಿಓ ರವಿಕುಮಾರ್, ಸಂಪನ್ಮೂಲ ವ್ಯಕ್ತಿ ನವೀದ್ ಅಹಮದ್ ಪರ್ವೀಜ್ ಸೇರಿದಂತೆ ಇನ್ನಿತರರು ಅಭಿನಂದಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post