ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಎಸ್. ವರದರಾಜ ಅವರಿಗೆ ದಾವಣಗೆರೆ ವಿಶ್ವವಿದ್ಯಾನಿಲಯ ಪಿಎಚ್‌ಡಿ ಪದವಿ ನೀಡಿದೆ.
‘ಅರ್ಬನ್ ಹೌಸಿಂಗ್ ಸ್ಕೀಮ್ ಇನ್ ಕರ್ನಾಟಕ ವಿತ್ ಸ್ಪೆಷಲ್ ರೆಫರನ್ಸ್ ಟು ಶಿವಮೊಗ್ಗ ಡಿಸ್ಟ್ರಿಕ್ಟ್’ ಮಹಾ ಪ್ರಬಂಧಕ್ಕೆ ಪಿಎಚ್‌ಡಿ ಪದವಿ ಲಭಿಸಿದ್ದು, ದಾವಣಗೆರೆ ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ವಿಭಾಗದ ಮಾರ್ಗದರ್ಶಕರು ಮತ್ತು ಅಧ್ಯಕ್ಷರಾದ ಪ್ರೊ. ಎನ್.ಕೆ ಗೌಡ(ನಿವೃತ್ತ)ರವರ ಮಾರ್ಗದರ್ಶನದಲ್ಲಿ ಮಹಾ ಪ್ರಬಂಧ ಮಂಡಿಸಿದ್ದರು.
ವರದರಾಜರವರು ವಿಐಎಸ್‌ಎಲ್ ಕಾರ್ಖಾನೆ VISL Factory ನಿವೃತ್ತ ಕಾರ್ಮಿಕ ದಿ. ಶಿವಲಿಂಗಯ್ಯ, ಲಕ್ಷ್ಮಮ್ಮ ದಂಪತಿ ಪುತ್ರರಾಗಿದ್ದು, ಇವರಿಗೆ ಕಾಲೇಜಿನ ಆಡಳಿತ ಮಂಡಳಿ, ವಿವಿಧ ಸಂಘ-ಸಂಸ್ಥೆಗಳು ಅಭಿನಂದನೆ ಸಲ್ಲಿಸಿವೆ.
Also read: ಬೆಳಗಾವಿಯಲ್ಲಿರುವ 700 ಎಕರೆ ಜಮೀನು ಹಸ್ತಾಂತರ: ಕೇಂದ್ರ ರಕ್ಷಣಾ ಸಚಿವ ರಾಜನಾಥಸಿಂಗ್ ಆಶ್ವಾಸನೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post