ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ರಾಷ್ಟಮಟ್ಟದ ಹಲವು ಪ್ರವೇಶ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಡಿ.ಎಸ್. ಸಂಜನಾ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಇವರು ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಹಿರಿಯ ಶಸ್ತ್ರ ಚಿಕಿತ್ಸಕ ಡಾ. ಡಿ.ಎಸ್ ಶಿವಪ್ರಕಾಶ್ ಮತ್ತು ಡಿ.ಎಸ್ ಅಶ್ವಿನಿ ದಂಪತಿಯ ಪುತ್ರಿ.
ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ರಾಷ್ಟ್ರೀಯ ವೈದ್ಯಕೀಯ ಮಂಡಳಿ ನಡೆಸುವ ರಾಷ್ಟ್ರಮಟ್ಟದ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್)ಯಲ್ಲಿ 686 ಅಂಕಗಳೊಂದಿಗೆ ರಾಷ್ಟ್ರಮಟ್ಟದಲ್ಲಿ 431ನೇ ರ‍್ಯಾಂಕ್ ಹಾಗು ಸಾಮಾನ್ಯ ವರ್ಗದಲ್ಲಿ 297ನೇ ರ‍್ಯಾಂಕ್ ಪಡೆದುಕೊಂಡು ತಮ್ಮ ಮುಂದಿನ ಶೈಕ್ಷಣಿಕ ಸಾಧನೆಗೆ ಮುನ್ನುಡಿ ಬರೆದಿದ್ದಾರೆ.

ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯಲ್ಲಿ ರಾಜ್ಯಕ್ಕೆ 163ನೇ ರ‍್ಯಾಂಕ್ ಪಡೆದುಕೊಂಡಿದ್ದು, ಪಶು ವೈದ್ಯಕೀಯದಲ್ಲಿ 15ನೇ ರ‍್ಯಾಂಕ್, ಬಿಎಸ್‌ಸಿ ಕೃಷಿಯಲ್ಲಿ 46ನೇ ರ‍್ಯಾಂಕ್ ಮತ್ತು ಬಿ.ಫಾರ್ಮ 19ನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ.
ಸಂಜನಾ ಪ್ರಾಥಮಿಕ ಶಿಕ್ಷಣವನ್ನು ತೀರ್ಥಹಳ್ಳಿಯಲ್ಲಿ ಪೂರೈಸಿದ್ದು, ಪ್ರಸ್ತುತ ಮಂಗಳೂರಿನ ಬಿಜೈ ಕಾಪಿಕಾಡ್ ಸಮೀಪದ ಸಿಎಫ್‌ಎಎಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಸಂಜನಾ ಅವರ ಸಾಧನೆಗೆ ನಗರದ ಅನೇಕ ಗಣ್ಯರು ಪ್ರಶಂಸೆ ವ್ಯಕ್ತಪಡಿಸಿ ಮುಂದಿನ ಸಾಧನೆಗೆ ಶುಭ ಹಾರೈಸಿದ್ದಾರೆ.











Discussion about this post