ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಹೆಚ್ಚಿನ ಮಳೆ ಸುರಿದ ಪರಿಣಾಮ ಕಳೆದ 2 ದಿನಗಳ ಹಿಂದೆ ತಾಲೂಕಿನ ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿರಿಯೂರು ಗ್ರಾಮದ ಸರ್ಕಾರಿ ಶಾಲೆಯೊಂದರ ಗೋಡೆ ಕುಸಿದು ಬಿದ್ದಿದ್ದು, ತುರ್ತು ಕ್ರಮ ಕೈಗೊಳ್ಳುವ ಮೂಲಕ ಹೊಸ ಶಾಲೆಯನ್ನು ಮಂಜೂರು ಮಾಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಶಾಲೆ ವಿದ್ಯಾರ್ಥಿಗಳೊಂದಿಗೆ ಪ್ರತಿಭಟನೆ ನಡೆಸಿದ ಗ್ರಾಮದ ನಿವಾಸಿ, ತಾಲೂಕು ಬಂಜಾರ ಯುವಕರ ಸಂಘದ ಅಧ್ಯಕ್ಷ ಕೃಷ್ಣನಾಯ್ಕ ಹಾಗು ಪೋಷಕರು ಮಾತನಾಡಿ, ಸರ್ಕಾರ ಬಜೆಟ್ ಮಂಡನೆಯಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಾವಿರಾರು ಕೋಟಿ ರು. ಅನುದಾನ ಮೀಸಲಿಡುತ್ತಿದೆ. ಅಲ್ಲದೆ ಸರ್ಕಾರ ಮುನ್ನಡೆಸುವವರು, ಜನಪ್ರತಿನಿಧಿಗಳು ಸರ್ಕಾರಿ ಶಾಲೆಗಳನ್ನು ಉಳಿಸಬೇಕು. ಅದರಲ್ಲೂ ಕನ್ನಡ ಶಾಲೆ ಉಳಿಸಬೇಕೆಂಬ ಮಾತುಗಳನ್ನಾಡುತ್ತಾರೆ. ಆದರೆ ರಾಜ್ಯದೆಲ್ಲೆಡೆ ಸರ್ಕಾರಿ ಶಾಲೆಗಳು ಅಭಿವೃದ್ಧಿಯಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

Also read: ವೀರಶೈವ ಲಿಂಗಾಯತ ಮಹಿಳಾ ಸಮಾಜದಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಂಪನ್ನ











Discussion about this post