ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲೂಕು ಶಾಖೆಯ ಕಾರ್ಯಕಾರಿ ಸಮಿತಿ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದಿದ್ದು, 14 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕಾರ್ಯಕಾರಿ ಸಮಿತಿಯಲ್ಲಿ ಒಟ್ಟು 14 ನಿರ್ದೇಶಕ ಸ್ಥಾನಗಳಿದ್ದು, ಹಳೇನಗರದ ಸಂಚಿಹೊನ್ನಮ್ಮ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಬಿ. ಸಿದ್ದಬಸಪ್ಪ, ಎಂ. ದಿವಾಕರ್, ಶಿವಾನಾಯ್ಕ, ಹೊಳೆಹೊನ್ನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ (ಪ್ರೌಢ ಶಾಲೆ ವಿಭಾಗ) ನಾಗರಾಜಪ್ಪ, ಹುಣಸೇಕಟ್ಟೆ ಸರ್ಕಾರಿ ಪ್ರೌಢಶಾಲೆಯ ಆರ್. ಓಂಕಾರಪ್ಪ, ಅರಳಿಹಳ್ಳಿ ಸರ್ಕಾರಿ ಪ್ರೌಢಶಾಲೆಯ ಶೇಖರನಾಯ್ಕ, ತರೀಕೆರೆ ರಸ್ತೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ(ಪ್ರೌಢಶಾಲೆ ವಿಭಾಗ) ಅಶ್ವಥ್, ಅಂತರಗಂಗೆಯ ಕರ್ನಾಟಕ ಪಬ್ಲಿಕ್ ಶಾಲೆಯ ನವೀನ್‌ಕುಮಾರ್, ಅರಹತೊಳಲು ಸರ್ಕಾರಿ ಪ್ರೌಢಶಾಲೆಯ ಎಚ್.ಬಿ ಶಿವರಾಜ, ಕೂಡ್ಲಿಗೆರೆ ಹರಿಹರೇಶ್ವರ ಪ್ರೌಢಶಾಲೆಯ ಎಚ್. ಉಮೇಶ್, ಹಳೇನಗರದ ಕನಕ ಪ್ರೌಢಶಾಲೆಯ ಸಿ.ಡಿ ಮಂಜುನಾಥ್, ಹೊಸಮನೆ ಅಕ್ಕಮಹಾದೇವಿ ಪ್ರೌಢಶಾಲೆಯ ವೈ.ಕೆ ರಾಜು, ಹುತ್ತಾ ಕಾಲೋನಿ ಸಹ್ಯಾದ್ರಿ ಪ್ರೌಢಶಾಲೆಯ ಡಿ. ಮಂಜಪ್ಪ ಮತ್ತು ಕಾಗದನಗರ ಪೇಪರ್ ಟೌನ್ ಪ್ರೌಢಶಾಲೆಯ ಕೆ. ಬಸವರಾಜಪ್ಪ ಆಯ್ಕೆಯಾಗಿದ್ದಾರೆ.

Also read: ಕಬ್ಬಿನ ಹಾಲು ತೆಗೆಯುವ ಯಂತ್ರಕ್ಕೆ ಬುರ್ಖಾ ಸಿಲುಕಿ ಮಹಿಳೆ ಸಾವು!










Discussion about this post