ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಭದ್ರಾವತಿ ಪಟ್ಟಣದ ಬೈಪಾಸ್ ರಸ್ತೆಯಲ್ಲಿ ಮಂಗಳವಾರ ಕುಡಿಯುವ ನೀರು ಪೂರೈಕೆಯ ಪೈಪ್ ಒಡೆದು, ಅಪಾರ ಪ್ರಮಾಣದ ನೀರು ಪೋಲಾಗಿದೆ.
ಸದರಿ ಸ್ಥಳದಲ್ಲಿ ರಸ್ತೆ ದುರಸ್ತಿ ನಡೆಸುತ್ತಿದ್ದ ಸಂದರ್ಭದಲ್ಲಿ ಪೈಪ್ ಡ್ಯಾಮೇಜ್ ಆದ ಪರಿಣಾಮ ಸುಮಾರು 25 ಅಡಿ ಎತ್ತರದವರೆಗೆ ನೀರು ಕಾರಂಜಿಯಂತೆ ಚಿಮ್ಮುತ್ತಿತ್ತು. ತಕ್ಷಣವೇ ಪೈಪ್ ದುರಸ್ತಿಗೊಳಿಸಿ, ನೀರು ಪೋಲಾಗುತ್ತಿರುದಕ್ಕೆ ಕಡಿವಾಣ ಹಾಕಬೇಕೆಂದು ನಾಗರೀಕರು ಆಗ್ರಹಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post