ಕಲ್ಪ ಮೀಡಿಯಾ ಹೌಸ್ | ಬೀದರ್ |
ಮುಂಬರುವ 2023ರ ಚುನಾವಣೆಯ ಚುನಾವಣಾ ಪೂರ್ವ ಸಿದ್ದತೆ ಮತ್ತು ಸಮಾಲೋಚನೆ ಸಭೆಯನ್ನು ಇದೇ ಜುಲೈ 29ರಂದು ಬೀದರ್ ನ ನವದಗೆರೆಯ ಚಿಕ್ಕಪೇಟೆ ರಸ್ತೆಯಲ್ಲಿರುವ ಹೊಟೇಲ್ ವೈಬ್ ನಲ್ಲಿ ಹಮ್ಮಿಕೊಳ್ಳಲಾಗಿದ್ದು, ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳು ಮತ್ತು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಹೆಚ್.ಡಿ. ಕುಮಾರಸ್ವಾಮಿರವರು, H D Kumaraswamy ರಾಜ್ಯಾಧ್ಯಕ್ಷ ಸಿ.ಎಂ. ಹಿಬ್ರಾಹಿಂ, C.M. Ibrahim ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ MLA Bandeppa Khashempur ಮುಖಂಡತ್ವದಲ್ಲಿ ಸಭೆ ನಡೆಯುತ್ತದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ರಮೇಶ್ ಪಾಟೀಲ್ ಸೋಲಪೂರ್ ಹೇಳಿದರು.
ನಗರದಲ್ಲಿ ಸುದ್ಧಿಗೋಷ್ಠಿಯನ್ನುದ್ದೇಶಿಸಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಜನತಾದಳ ಪಕ್ಷದ ಸಂಘಟನೆ ಮತ್ತು ಬಲವರ್ಧನೆ, ಪಂಚರತ್ನ ದರ್ಶನ ರಥ ಯಾತ್ರೆ ಹಾಗೂ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಸಿದ್ದತೆಗೆ ಸಂಬಂಧಿಸಿದಂತೆ ಚರ್ಚಿಸುವ ಸಲುವಾಗಿ ಜು.29ರ ಶುಕ್ರವಾರ ಹೋಟೆಲ್ ವೈಬ್ ನಲ್ಲಿ ಸಭೆ ಕರೆಯಲಾಗಿದೆ ಎಂದರು.

ಏಪ್ರಿಲ್ ನಲ್ಲಿ ಯಶಸ್ವಿಯಾಗಿ ನಡೆದ ಜನತಾ ಜಲಧಾರೆ ರಥಯಾತ್ರೆ:
ಇದೇ ವರ್ಷ ಏಪ್ರಿಲ್ ತಿಂಗಳಲ್ಲಿ ಜೆಡಿಎಸ್ ಪಕ್ಷದಿಂದ ಹಮ್ಮಿಕೊಳ್ಳಲಾಗಿದ್ದ, ಜನತಾ ಜಲಧಾರೆ ರಥ ಯಾತ್ರೆ ಕಾರ್ಯಕ್ರಮವನ್ನು ರಾಜ್ಯಾದ್ಯಂತ ಯಶಸ್ವಿಯಾಗಿ ನಡೆಸಲಾಗಿದೆ. ಅದರಂತೆಯೇ ಮುಂಬರುವ ದಿನಗಳಲ್ಲಿ ಪಕ್ಷದ ಹಿರಿಯ ನಾಯಕರಾದ ದೇವೇಗೌಡರ ಮಾರ್ಗದರ್ಶನದಲ್ಲಿ ಪಂಚರತ್ನ ಎಂಬ ಕಾರ್ಯಕ್ರಮವನ್ನು ತರಲಾಗುತ್ತದೆ.

ನಾವು ಶಿಸ್ತಿನ ಸಿಪಾಯಿಗಳು ಇದ್ದಿವಿ. ಪಕ್ಷ ಕೈಗೊಳ್ಳುವ ನಿರ್ಧಾರವನ್ನು ಸ್ವೀಕರಿಸಿ, ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಪ್ರಯತ್ನ ನಡೆಸುತ್ತೇವೆ. ಪಕ್ಷದ ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ಎಲ್ಲರೂ ಸಾಗುತ್ತೇವೆ. ಪಕ್ಷ ಯಾರಿಗೆ ಅವಕಾಶ ನೀಡುತ್ತದೆಯೋ ಅವರನ್ನು ಗೆಲ್ಲಿಸುವ ಕೆಲಸವನ್ನು ನಾವೆಲ್ಲರೂ ಸೇರಿ ಮಾಡುತ್ತೇವೆ. ಅದೇ ನಿಟ್ಟಿನಲ್ಲಿ ಜುಲೈ 29ರಂದು ಸಭೆ ನಡೆಸಲಾಗುತ್ತಿದೆ ಎಂದು ರಮೇಶ್ ಪಾಟೀಲ್ ಸೋಲಪೂರ್ ರವರು ಹೇಳಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಮುಖಂಡರಾದ ಬಸವರಾಜ ಪಾಟೀಲ್ ಹಾರೋಗೇರಿ, ಅಶೋಕಕುಮಾರ್ ಕರಂಜೆ, ರಾಜಶೇಖರ ಜವಳೆ, ನಬೀ ಖುರೇಷಿ, ಅಸಾದುದ್ದೀನ್, ಅಶೋಕ ಕೊಡ್ಗೆ, ಸಂಗು ಚಿದ್ರಿ, ರಾಜು ಚಿಂತಾಮಣಿ, ನವಾಜ್ ಖಾನ್ ಸೇರಿದಂತೆ ಅನೇಕರಿದ್ದರು.










Discussion about this post