ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು Praveen Nettaru ಅವರ ಭೀಕರ ಹತ್ಯೆಗೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣ ಕುರಿತಂತೆ ಬೆಳ್ಳಾರೆಯ ಮಹಮದ್ ಶಫೀಕ್ ಹಾಗೂ ಸವಣೂರಿನ ಝಾಕಿರ್ ಎಂಬ ಇಬ್ಬರನ್ನು ನಿನ್ನೆ ಸಂಜೆಯೇ ವಶಕ್ಕೆ ಪಡೆದಿದ್ದ ಪೊಲೀಸರು ಇಂದು ಬಂಧಿಸಿದ್ದಾರೆ.

ಈ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಎಡಿಜಿಪಿ ಅಲೋಕ್ ಕುಮಾರ್, ಇಂದು ಬಂಧಿಸಲಾಗಿರುವ ಈ ಇಬ್ಬರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ವಿಚಾರಣೆಗಾಗಿ ಪೊಲೀಸರ ವಶಕ್ಕೆ ಕೇಳಲಾಗುವುದು. ಪೊಲೀಸ್ ಕಸ್ಟಡಿಗೆ ಪಡೆದ ನಂತರ ವಿಚಾರಣೆ ನಡೆಸಿದ ನಂತರ, ಹೆಚ್ಚಿನ ಮಾಹಿತಿ ತಿಳಿದುಬರಲಿದೆ ಎಂದಿದ್ದಾರೆ.

ಇನ್ನು ಬಂಧಿತ ಝಾಕಿರ್ ವಿರುದ್ಧ ಈಗಾಗಲೇ ಕ್ರಿಮಿನಲ್ ಪ್ರಕರಣವಿದ್ದು, ಹೆಚ್ಚಿನ ವಿವರಗಳನ್ನು ಶೀಘ್ರದಲ್ಲೇ ಪ್ರಕಟಿಸುತ್ತೇವೆ ಎಂದಿದ್ದಾರೆ.










Discussion about this post