ಕಲ್ಪ ಮೀಡಿಯಾ ಹೌಸ್ | ಬೈಂದೂರು |
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಹಿರಿಯ ರಾಜಕೀಯ ಮುತ್ಸದ್ದಿ ಅಮಾಸೆಬೈಲು ಗೋಪಾಲಕೃಷ್ಣ ಕೊಡ್ಗಿ (ಎ.ಜಿ. ಕೊಡ್ಗಿ) ಸೋಮವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 93 ವರ್ಷ ವಯಸ್ಸಾಗಿತ್ತು.
ಕೊಡ್ಗಿ ಅವರು 1972 ಮತ್ತು 1978ರಲ್ಲಿ ಬೈಂದೂರು ಕ್ಷೇತ್ರದ ಶಾಸಕರಾಗಿದ್ದರು. ಅಂದಿನ ಕಾಂಗ್ರೆಸ್ ಪಕ್ಷದ ಪ್ರಭಾವಿ ಮುಖಂಡರಾಗಿದ್ದ ಅವರು, ಪಕ್ಷ ಇಬ್ಬಾಗವಾದಾಗ ಅರಸು ಕಾಂಗ್ರೆಸ್‍ನಲ್ಲಿ ಗುರುತಿಸಿಕೊಂಡಿದ್ದರು. ಆ ಬಳಿಕ ಅವರು 1993ರಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು. ಬಿಜೆಪಿ ರಾಜ್ಯ ಉಪಾಧ್ಯಕ್ಷ ಸಹಿತ ಅನೇಕ ಹುದ್ದೆಗಳನ್ನು ನಿಭಾಯಿಸಿದ್ದ ಅವರು, ಮೂರನೇ ಹಣಕಾಸು ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
Also read: ತಹಶೀಲ್ದಾರ್ ರಘುಮೂರ್ತಿ ಅವರಿಗೆ ಮಾಧ್ಯಮ ಸಂಸ್ಥೆ ರಾಜ್ಯಪ್ರಶಸ್ತಿ ಲಭಿಸಿರುವುದು ಶ್ಲಾಘನೀಯ
ಅವರು ಕ್ಯಾಂಪ್ಕೊ ಅಧ್ಯಕ್ಷ ಎ.ಜಿ. ಕೊಡ್ಗಿ, ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಕಿರಣ್ ಕುಮಾರ್ ಕೊಡ್ಗಿ ಸಹಿತ ಐವರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post