ಕಲ್ಪ ಮೀಡಿಯಾ ಹೌಸ್ | ಚಳ್ಳಕೆರೆ |
ರಾಜ್ಯದಲ್ಲಿ ಪ್ರಥಮ ಬಾರಿಗೆ ಚಳ್ಳಕೆರೆ ತಾಲೂಕಿನಲ್ಲಿ ತಾಲೂಕು ಆಡಳಿತದ ನಡೆ ಹಳ್ಳಿಯ ಕಡೆ ಸಮಸ್ಯೆ ಮುಕ್ತ ಗ್ರಾಮ ಎಂಬ ಪರಿಕಲ್ಪನೆಯಲ್ಲಿ 40 ಗ್ರಾಮಗಳನ್ನು ಸಮಸ್ಯೆ ಮುಕ್ತ ಗ್ರಾಮಗಳನ್ನಾಗಿ ಮಾಡಿ ರೈತರ ಬದುಕಿಗೆ ದಾರಿದೀಪವಾದ ತಹಶೀಲ್ದಾರ್ ಎನ್. ರಘುಮೂರ್ತಿ ಅವರಿಗೆ ಒಂದು ಮಾಧ್ಯಮ ಸಂಸ್ಥೆಯಿಂದ ರಾಜ್ಯಪ್ರಶಸ್ತಿ ನೀಡಿರುವುದು ಶಾಘ್ಲನೀಯ ಎಂದು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಟಿ.ಜೆ. ತಿಪ್ಪೇಸ್ವಾಮಿ ಅಭಿಪ್ರಾಯಪಟ್ಟರು.
ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್ ಎನ್. ರಘುಮೂರ್ತಿಗೆ ಸನ್ಮಾನಿಸಿ, ನಂತರ ಮಾತನಾಡಿದ ಅವರು ಗ್ರಾಮಗಳಲ್ಲಿ ಪೌತಿ ಖಾತೆ, ಫೋಡಿ, ಪಿಂಚಣಿ, ಹಾಗೂ ದಾರಿ ಸಮಸ್ಯೆ ಪಹಣಿಗಳಲ್ಲಿ ಲೋಪದೋಷ ಇನ್ನೂ ಹತ್ತು ಹಲವು ಸಮಸ್ಯೆಗಳನ್ನು ಗ್ರಾಮದಲ್ಲಿ ಬಗೆಹರಿಸಿ ಅತೀ ಹಿಂದುಳಿದ ತಾಲೂಕುಗಳಲ್ಲಿ ಒಂದಾದ ಚಳ್ಳಕೆರೆ ತಾಲ್ಲೂಕಿಗೆ ತಹಶೀಲ್ದಾರ್ ಆಗಿ ಅಧಿಕಾರ ಸ್ವೀಕರಿಸಿದ ಸಮಯದಿಂದ ಹಲವು ಕಾರ್ಯಕ್ರಮ ಮಾಡುವ ಮೂಲಕ ಜನರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲಿ ಪರಿಹಾರ ದೊರಕಿಸಿಕೊಟ್ಟಿದ್ದಾರೆ ಎಂದರು.
Also read: ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ: ಶಾಸಕ ಬಂಡೆಪ್ಪ ಖಾಶೆಂಪುರ್
ಜಿಲ್ಲಾ ಉಪಾಧ್ಯಕ್ಷ ಈಶ್ವರಪ್ಪ ಮಾತನಾಡಿ, ಸಮಸ್ಯೆ ಮುಕ್ತ ಗ್ರಾಮ ಎಂಬ ವಿನೂತನ ಕಾರ್ಯಕ್ರಮ ಮೂಲಕ ಈಡಿ ತಾಲೂಕಿನ ಸಮಸ್ಯೆಗಳನ್ನು ಪರಿಹರಿಸಲು ಶ್ರಮಿಸುತ್ತಿದ್ದಾರೆ, ಜನರ ಹಲವು ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಮುಂಬರುವ ಜೂನ್ 18 ರಂದು ಘಟಪರ್ತಿ ಗ್ರಾಮದಲ್ಲಿ ಕಂದಾಯ ಇಲಾಖೆ ಸಚಿವರು ಸಮಸ್ಯೆ ಮುಕ್ತ ಗ್ರಾಮಗಳನ್ನಾಗಿ ಘೋಷಣೆ ಮಾಡಲು ಆಗಮಿಸುತ್ತಿರುವುದು ಶ್ಲಾಘನೀಯ ಎಂದಿದ್ದಾರೆ.
ಈದೇ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ತಾಲೂಕು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕರಾದ ನಾವೆಲ್ಲ ಮಹೇಶ್, ಕಾರ್ಯದರ್ಶಿ ಕೆ. ರಾಮಾಂಜನೇಯ, ಖಜಾಂಚಿ ಸುರೇಶ್ ಬೆಳಗೆರೆ, ಲೋಕೇಶ್, ಕಂದಾಯ ನೀರಿಕ್ಷ ಲಿಂಗೆಗೌಡ, ಉಮೇಶ್ ಇತರರು ಇದ್ದರು.
ವರದಿ: ಸುರೇಶ್ ಬೆಳಗೆರೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post