ಕಲ್ಪ ಮೀಡಿಯಾ ಹೌಸ್ | ಚಳ್ಳಕೆರೆ |
ಪ್ರಸ್ತುತ 2023ರ ಚುನಾವಣೆಯಲ್ಲಿ ಈಡೀ ಜಿಲ್ಲೆಯಲ್ಲಿ ಎರಡರಿಂದ ಮೂರು ಕ್ಷೇತ್ರಗಳಲ್ಲಿ ಖಾತೆ ತೆರೆಯುತ್ತೇವೆ ಎಂದು ಜೆಡಿಎಸ್ ಮುಖಂಡ ಕೆ.ಸಿ. ವೀರೇಂದ್ರ (ಪಪ್ಪಿ) ಭವಿಷ್ಯ ನುಡಿದಿದ್ದಾರೆ.
ನಗರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮುಂಬರುವ ಚುನಾವಣೆಗೆ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದರಂತೆ ಚಳ್ಳಕೆರೆ ಕ್ಷೇತ್ರದಲ್ಲಿ ಕಳೆದ ಬಾರಿ ಕಡಿಮೆ ಅಂತರದಲ್ಲಿ ಹಿನ್ನಡೆಯಾಗಿರುವುದರಿಂದ ಈ ಬಾರಿ ಅಧಿಕಾರಕ್ಕೆ ಬರುವುದು ಶತ ಸಿದ್ಧ. ಅದರಂತೆ ಹಿರಿಯೂರು ಹಾಗೂ ಚಿತ್ರದುರ್ಗ ಕ್ಷೇತ್ರದಲ್ಲಿ ಪಕ್ಷದ ವರಿಷ್ಠರ ತೀರ್ಮಾನದಂತೆ ಕ್ಷೇತ್ರದಲ್ಲಿ ಇರುವೆ. ಎರಡು ಕ್ಷೇತ್ರದ ಜನರ ಪ್ರೀತಿ ವಿಶ್ವಾಸ ನಮ್ಮ ಮೇಲೆ ಇದೆ ಎಂದು ಹೇಳಿದರು.
ನಮ್ಮ ಪಕ್ಷದ ವರಿಷ್ಠರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವಧಿಯಲ್ಲಿ ಚಳ್ಳಕೆರೆ ಕ್ಷೇತ್ರಕ್ಕೆ ಅಪಾರವಾದ ಕೊಡುಗೆ ನೀಡಿm ಭದ್ರಾ ನೀರಿನಿಂದ ಹಿಡಿದು ವೇದಾವತಿ ನದಿಗೆ ನೀರು ಬಿಡುವ ವಿಚಾರದಲ್ಲಿ ಕೂಡ ಚಳ್ಳಕೆರೆ ಕ್ಷೇತ್ರದ ಜನರ ವಿಶ್ವಾಸ ಗಳಿಸಿದ್ದಾರೆ ಎಂದರು.
Also read: ಕಾರು ಡಿಕ್ಕಿ: 7 ಎಮ್ಮೆಗಳು ಸ್ಥಳದಲ್ಲೇ ಸಾವು
ತಾಲೂಕು ಅಧ್ಯಕ್ಷ ಪಿ. ತಿಪ್ಪೇಸ್ವಾಮಿ ಮಾತನಾಡಿ, ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಎರಡು ಪಕ್ಷಗಳನ್ನು ಕಟ್ಟಿ ಹಾಕುವ ಕೆಲಸವಾಗುತ್ತದೆ. ಅವರು ನಮ್ಮ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವಧಿಯಲ್ಲಿ ಕೆಲವು ವೇದಾವತಿ ಬ್ಯಾರೆಜ್‌ಗಳನ್ನು ನಾವೇ ಮಾಡಿಸಿದ್ದು ಎಂದು ಕೆಲವರು ಹೇಳಿ ಮತ ಗಿಟ್ಟಿಸಿಕೊಳ್ಳುತ್ತಾರೆ. ಆದರೆ ಕ್ಷೇತ್ರದ ಜನಕ್ಕೆ ಗೊತ್ತಿದೆ ಯಾರ ಅವಧಿಯಲ್ಲಿ ಆಗಿದೆ ಎಂಬುದು. ಕ್ಷೇತ್ರದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುವುದು ಶತಸಿದ್ಧ. ನಮ್ಮ ನೇರ ಪ್ರತಿಸ್ಪರ್ಧಿ ಕಾಂಗ್ರೆಸ್ ಮಣಿಸಲು ಸಕಲ ತಯಾರಿ ಕೂಡ ಮಾಡಿಕೊಳ್ಳಲಾಗಿದೆ ಎಂದರು.
ತಾಲ್ಲೂಕಿನಲ್ಲಿ ಸುಮಾರು 150 ಕೋಟಿ ರೂ. ಸಾಲ ಮನ್ನಾ ಆಗಿರುವುದು ರೈತರಿಗೆ ವರದಾನವಾಗಿದೆ. ಕ್ಷೇತ್ರದ ಜನರ ಹಿತ ದೃಷ್ಟಿಯಿಂದ 5 ಕೋಟಿ ರೂ. ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ. ಕ್ಷೇತ್ರದ ಜನರ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಜೆಡಿಎಸ್ ಮುಖಂಡರು ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದರು.
ಜೆಡಿಎಸ್ ಮುಖಂಡ ಎಂ. ರವೀಶ್ ಕುಮಾರ್ ಮಾತನಾಡಿ, ಕಳೆದ ಬಾರಿ ಜನರು ಬೆಂಬಲಿಸಿದಂತೆ, ಈ ಬಾರಿಯು ಕೂಡ ವಿಶ್ವಾಸ ತೋರಿಸುತ್ತಾರೆ ಎನ್ನುವ ಅಚಲವಾದ ನಂಬಿಕೆಯಿದೆ. ಆದರಂತೆ ಈಗಾಗಲೇ ಪಕ್ಷದ ಸಂಘಟನೆಗೆ ಪೂರ್ವ ಸಿದ್ಧತೆ ನಡೆಸಿದ್ದೇವೆ. ಅದರಂತೆ ಆಡಳಿತ ಪಕ್ಷ ಬಿಜೆಪಿಯ ರೈತ ವಿರೋಧಿ ಕಾಯ್ದೆಗಳಿಂದ ಹಾಗೂ ಕಾಂಗ್ರೆಸ್ ಪಕ್ಷದಿಂದ ಜನರು ರೋಸಿ ಹೊಗಿದ್ದಾರೆ. ನಮ್ಮ ಪಕ್ಷದ ತತ್ವ ಸಿದ್ದಾಂತಗಳ ಮೆಚ್ಚಿ ಕಾಂಗ್ರೆಸ್‌ನಿಂದ ಹಾಗೂ ಬಿಜೆಪಿಯಿಂದ ಕಾರ್ಯಕರ್ತರು ನಿತ್ಯವೂ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಎಂದರು.
ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆ ಮಧ್ಯ ಕರ್ನಾಟಕ ಭಾಗದಲ್ಲಿ ರಾಜ್ಯಸಭಾ (ಎಂಎಲ್‌ಸಿ) ಸದಸ್ಯರನ್ನು ಈ ಭಾಗದಲ್ಲಿ ಮಾಡಬೇಕು ಎನ್ನುವ ಪ್ರಸ್ತಾಪವನ್ನು ವರಿಷ್ಠರೊಂದಿಗೆ ಚರ್ಚಿಸಲಾಗಿದೆ. ಇಂದು ಶ್ರೀ ವೀರಭದ್ರಸ್ವಾಮಿ ರಥೋತ್ಸವಕ್ಕೆ ಆಗಮಿಸಬೇಕಾಗಿದ್ದ ರಾಜ್ಯದ ಜೆಡಿಎಸ್ ಪಕ್ಷದ ಯುವ ರಾಜ್ಯಾದ್ಯಾಕ್ಷ ನಿಖಿಲ್ ಕುಮಾರಸ್ವಾಮಿ, ಅನ್ಯ ಕಾರ್ಯಗಳ ನಿಮಿತ್ತ ಬರಲು ಸಾಧ್ಯವಾಗಿಲ್ಲ, ಮುಂದಿನ ತಿಂಗಳು ನೂತನ ಜೆಡಿಎಸ್ ಕಚೇರಿ ಉದ್ಘಾಟನೆಗೆ ಆಗಮಿಸುವರು ಎಂದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ವಿ.ವೈ. ಪ್ರಮೋದ್, ಶ್ರೀನಿವಾಸ್, ಮಾಜಿ ಅಧ್ಯಕ್ಷ ವಿಜಯ್ ಕುಮಾರ್ ಇನ್ನಿತರ ಪ್ರಮುಖ ಮುಂಖಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.
ವರದಿ: ಸುರೇಶ್ ಬೆಳಗೆರೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post