ಕಲ್ಪ ಮೀಡಿಯಾ ಹೌಸ್ | ಚೆನ್ನೈ |
ಅಪ್ರಾಪ್ತ ಮಗಳನ್ನು ಅತ್ಯಾಚಾರ ಮಾಡಲು ತಾಯಿಯೇ ತನ್ನ ಪ್ರಿಯಕರನಿಗೆ ಅವಕಾಶ ಮಾಡಿಕೊಟ್ಟ ಘಟನೆ ಚೆನ್ನೈನಲ್ಲಿ Chennai ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ದಿನಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಮಹಿಳೆಯೊಬ್ಬಳು ಪಿಯುಸಿ ಓದುತ್ತಿದ್ದ ಮಗಳನ್ನು 50 ವರ್ಷದ ವ್ಯಕ್ತಿ ಮದುವೆ ಆಗುವುದಾಗಿ ಭರವಸೆ ನೀಡಿ, ಹಲವು ಬಾರಿ ಯುವತಿಯನ್ನು ಅತ್ಯಾಚಾರ ಮಾಡಿದ್ದ ಎನ್ನಲಾಗಿದೆ.
ಅಪ್ರಾಪ್ತೆಯು ಗರ್ಭಿಣಿಯಾದ್ದರಿಂದ ಮಹಿಳೆಯು ಶಿಕ್ಷಣವನ್ನು ನಿಲ್ಲಿಸಿದಳು. ನೆರೆ ಹೊರೆಯವರಿಗೆ ಅನುಮಾನ ಬಾರದೆಂದು ಮನೆಯಲ್ಲೇ ಕೂಡಿ ಹಾಕಿದ್ದರು. ಅಪ್ರಾಪ್ತೆ ಹೆರಿಗೆ ನೋವಿನಿಂದ ಬಳಲುತ್ತಿದ್ದಾಗ ಆಸ್ಪತ್ರೆಗೆ ಕರೆದುಕೊಂಡು ಹೋದರೆ ಅನುಮಾನ ಬರುತ್ತದೆ ಎಂದು ಮನೆಯಲ್ಲೇ ಹೆರಿಗೆ ಮಾಡಿಸಿದ್ದಳು.
Also read: ಹಂಗಾಮುವಾರು ಬೆಳೆ ವಿಮೆ ಶೀಘ್ರ ಇತ್ಯರ್ಥ
ಮಗು ಅಸ್ವಸ್ಥಗೊಂಡಿದ್ದರಿಂದ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ದಾಖಲಾತಿಗಾಗಿ ಮಗುವಿನ ಜನ್ಮ ದಾಖಲೆ ಹಾಗೂ ತಾಯಿಯ ಆಧಾರ್ ಕಾರ್ಡ್ ಕೇಳಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಈ ಸಂಬಂಧ ಚೆನ್ನೈ ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post