No Result
View All Result
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು
English Articles

Young Woman Dies of Cardiac Arrest; Parents Give New Life Through Organ Donation

by ಕಲ್ಪ ನ್ಯೂಸ್
June 3, 2026
0

Kalpa Media House  |  Bhadravathi | In a remarkable act of humanity amid grief, the parents of a young woman...

Read moreDetails
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
  • Advertise With Us
  • Grievances
  • About Us
  • Contact Us
Thursday, June 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಾವಣಗೆರೆ

ಕಳೆದ ಎಂಟು ವರ್ಷಗಳಲ್ಲಿ ಹದಿನೆಂಟು ಸಾವಿರಕ್ಕೂ ಅಧಿಕ ಹಳ್ಳಿಗಳಿಗೆ ವಿದ್ಯುತ್ ಸಂಪರ್ಕ: ಶಾಸಕ ರವೀಂದ್ರನಾಥ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 28, 2022
in ದಾವಣಗೆರೆ
0
ಕಳೆದ ಎಂಟು ವರ್ಷಗಳಲ್ಲಿ ಹದಿನೆಂಟು ಸಾವಿರಕ್ಕೂ ಅಧಿಕ ಹಳ್ಳಿಗಳಿಗೆ ವಿದ್ಯುತ್ ಸಂಪರ್ಕ: ಶಾಸಕ ರವೀಂದ್ರನಾಥ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ದಾವಣಗೆರೆ  |      

ದೇಶಕ್ಕೆ ಸ್ವಾತಂತ್ರ್ಯ ದೊರೆತು ಆರು ದಶಕ ಕಳೆದರೂ ವಿದ್ಯುತ್ ಸಂಪರ್ಕ ಕಾಣದ 18000 ಹಳ್ಳಿಗಳಿಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ ಎಂಟು ವರ್ಷಗಳಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಿದೆ ಎಂದು ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎ. ರವೀಂದ್ರನಾಥ್ ಹೇಳಿದರು.

ಬುಧವಾರ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ, ‘ಉಜ್ವಲ ಭಾರತ-ಉಜ್ವಲ ಭವಿಷ್ಯ’ ವಿದ್ಯುತ್ ಮಹೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಭಾರತಕ್ಕೆ ಸ್ವಾತಂತ್ರ್ಯ ದೊರೆತು ಅನೇಕ ವರ್ಷಗಳು ಕಳೆದರೂ ಕೂಡ ದೇಶದ ಎಷ್ಟೋ ಹಳ್ಳಿಗಳಿಗೆ ವಿದ್ಯುತ್ ಸಂಪರ್ಕವಿರಲಿಲ್ಲ. ಇದನ್ನು ಮನಗಂಡ ಕೇಂದ್ರ ಸರ್ಕಾರ ಕಳೆದ ಎಂಟು ವರ್ಷಗಳಲ್ಲಿ ವಿದ್ಯುತ್ ಸಂಪರ್ಕವಿಲ್ಲದ ಸಾವಿರಾರು ಹಳ್ಳಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿದೆ. ನಮ್ಮ ದಿನ ನಿತ್ಯದ ಚಟುವಟಿಕೆಗಳನ್ನು ಕೈಗೊಳ್ಳಲು ಪ್ರಸ್ತುತ ದಿನಮಾನಗಳಲ್ಲಿ ವಿದ್ಯುತ್ ಅತಿ ಮುಖ್ಯವಾಗಿದೆ. 1960ರ ಕಾಲಘಟ್ಟದಲ್ಲಿ ಜನರು ರಾತ್ರಿಯ ಸಮಯದಲ್ಲಿ ಬೆಳಕಿಗಾಗಿ ಬುಡ್ಡಿ ದೀಪ, ಲಾಟೀನ್ ನಂತಹ ಉಪಕರಣಗಳನ್ನು ಬಳಸುತ್ತಿದ್ದರು. ತಾಂತ್ರಿಕವಾಗಿ ಮುಂದುವರಿದ ಪ್ರಸ್ತುತ ಕಾಲಘಟ್ಟದಲ್ಲಿ ವಿದ್ಯುತ್ ಬಳಸಿ ಬೆಳಕನ್ನು ಪಡೆಯುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಭಾರತ ಪ್ರಪಂಚದಲ್ಲಿಯೇ ಅತಿ ಹೆಚ್ಚು ವಿದ್ಯುತ್ ಉತ್ಪಾದಿಸುವ ರಾಷ್ಟ್ರವಾಗಿ ಹೊರಹೊಮ್ಮಲಿ ಎಂದು ಆಶಿಸಿದರು.

ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಮಾತನಾಡಿ, ವಿದ್ಯುತ್ ಬಳಕೆದಾರರು ಅನಗತ್ಯವಾಗಿ ವಿದ್ಯುತ್ ವ್ಯರ್ಥ ಮಾಡದೆ, ಅವಶ್ಯಕತೆಗೆ ತಕ್ಕಷ್ಟು ಮಾತ್ರ ಉಪಯೋಗಿಸಿಕೊಳ್ಳಬೇಕು. ಆಧುನಿಕ ಕಾಲಘಟ್ಟದಲ್ಲಿ ಎಲ್ಲ ಕೆಲಸ ಕಾರ್ಯಗಳಿಗೂ ವಿದ್ಯುತ್ ಅತ್ಯವಶ್ಯಕವಾಗಿ ಬೇಕಾಗಿದೆ. ಹಿಂದೆ 8 ರಿಂದ 10 ಹಳ್ಳಿಗಳನ್ನು ಒಳಗೊಂಡು ಒಂದು ಪವರ್ ಲೈನ್ ಮೂಲಕ ವಿದ್ಯುತ್ ಪೂರೈಕೆ ಮಾಡಲಾಗುತ್ತಿತ್ತು. ಆದರೆ ಪ್ರಸ್ತುತ ಪ್ರತಿ ಹಳ್ಳಿಗೂ ಪ್ರತ್ಯೇಕ ವಿದ್ಯುತ್ ಪೂರೈಕೆ ಲೈನ್‍ಗಳನ್ನು ಅಳವಡಿಸಲಾಗಿದೆ. ಹೊಸ ಹೊಸ ತಂತ್ರಜ್ಞಾನಗಳನ್ನು ಉಪಯೋಗಿಸಿಕೊಂಡು ವಿದ್ಯುತ್ ಇಲಾಖೆಗಳು ಹೊಂದಾಣಿಕೆಯಿಂದ ಕಾರ್ಯನಿರ್ವಹಿಸಬೇಕು. ಮುಂದಿನ ದಿನಗಳಲ್ಲಿ ಗಾಳಿ ಮತ್ತು ಸೌರ ವಿದ್ಯುತ್ ಬಳಕೆಗೆ ಮುಂದಾಗಬೇಕು. ಪವರ್ ಗ್ರಿಡ್ ಎಂಬುದು ದೇಶದ ವಿವಿಧ ಭಾಗಗಳಲ್ಲಿ ಉತ್ಪಾದನೆಯಾಗುವ ವಿದ್ಯುತ್ತನ್ನು ಕೊರತೆ ಇರುವಡೆಗೆ ಪೂರೈಸುವ ಒಂದು ವಿನೂತನ ಯೋಜನೆಯಾಗಿದೆ ಎಂದರು.
ಪವರ್ ಗ್ರೀಡ್ ಕಾರ್ಪೋರೇಷನ್ ಆಫ್ ಇಂಡಿಯಾ ಸಂಸ್ಥೆ ನಾಮ ನಿರ್ದೇಶಿತ ಸದಸ್ಯ ಓಂಕಾರಪ್ಪ ಕೆ.ಎನ್ ಮಾತನಾಡಿ, ಪವರ್ ಗ್ರಿಡ್ ಕಾರ್ಪೋರೇಷನ್ ಆಫ್ ಇಂಡಿಯಾ ಕಂಪನಿಯು ದೇಶದ ವಿವಿಧ ರಾಜ್ಯಗಳಲ್ಲಿ ವಿದ್ಯುತ್ ಸಂಬಂಧಿತ ಅನೇಕ ಕಾರ್ಯಗಳನ್ನು ಕೈಗೊಂಡಿದೆ. ಕಂಪನಿ ವತಿಯಿಂದ ಸಾಕಷ್ಟು ಲೈನ್, ಗ್ರಿಡ್ ಹಾಕಲು ಅವಕಾಶವಿದೆ. ಆದ್ದರಿಂದ ಅಧಿಕಾರಿಗಳು ಅವಶ್ಯಕವಿರುವ ಅನುದಾನದ ಕುರಿತು ಸಮಗ್ರ ವರದಿ ತಯಾರಿಸಿ ಸಲ್ಲಿಸಿದರೆ, ಬೇಡಿಕೆಗೆ ತಕ್ಕಷ್ಟು ಅನುದಾನ ಮಂಜೂರು ಮಾಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದೆಂದರು. ನಿರಂತರವಾಗಿ ವಿದ್ಯುತ್ ಒದಗಿಸುವುದರ ಹಿಂದೆ ಲೈನ್‍ಮ್ಯಾನ್‍ಗಳ ಶ್ರಮ ಸಾಕಷ್ಟಿದೆ, ಹಗಲು ರಾತ್ರಿ ಎನ್ನದೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವವರು ಲೈನ್‍ಮ್ಯಾನ್‍ಗಳು. ಅನೇಕರು ಇದಕ್ಕಾಗಿ ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ, ಆದ್ದರಿಂದ ಇನ್ನಷ್ಟು ರಕ್ಷಣಾ ಸುಧಾರಣೆಗಳನ್ನು ರೂಪಿಸಬೇಕು. ಸಾರ್ವಜನಿಕರು ವಿದ್ಯುತ್ ಸರಬರಾಜಿನಲ್ಲಿ ಅಡೆತಡೆಗಳಾದಾಗ ಲೈನ್‍ಮ್ಯಾನ್‍ಗಳ ಜೊತೆಗೆ ಸಂಯಮದಿಂದ ವರ್ತಿಸಬೇಕು ಎಂದರು.

Also read: ಪ್ರವೀಣ್ ಹತ್ಯೆ ಪ್ರಕರಣ: ಬೆಳ್ಳಾರೆಯ ಶಫೀಕ್, ಸವಣೂರಿನ ಝಾಕಿರ್ ಅಂದರ್

ಮಾಯಕೊಂಡ ವಿಧಾನ ಸಭಾ ಶಾಸಕರು ಹಾಗೂ ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಪ್ರೋ. ಎನ್. ಲಿಂಗಣ್ಣ ಮಾತನಾಡಿ, ನೀರು, ಸೌರ, ಗಾಳಿಯಿಂದ ಮುಂದಿನ ದಿನಗಳಲ್ಲಿ ಹೆಚ್ಚಿನ ವಿದ್ಯುತ್ ಉತ್ಪಾದನೆಯಾಗಲಿ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಇದಕ್ಕಾಗಿ ಸಾಕಷ್ಟು ಉತ್ತೇಜನ ನೀಡುತ್ತಿದೆ. ರೈತರಿಗೆ ವಿದ್ಯುತ್ ತುಂಬಾ ಅವಶ್ಯಕವಾಗಿದೆ, ಆದ್ದರಿಂದ ರೈತರು ಅಥವಾ ಸಾರ್ವಜನಿಕರು ಕರೆ ಮಾಡಿದಾಗ ಅಧಿಕಾರಿಗಳು ಸೂಕ್ತವಾಗಿ ಸ್ಪಂದಿಸಬೇಕು. ಸಾರ್ವಜನಿಕರು ಸಹ ವಿದ್ಯುತ್ ಪೂರೈಕೆಯಲ್ಲಿ ತೊಂದರೆಗಳು ಉಂಟಾದಾಗ ಅಧಿಕಾರಿ ಮತ್ತು ಲೈನ್‍ಮ್ಯಾನ್‍ಗಳೊಂದಿಗೆ ಸಹನೆಯಿಂದ ತಮ್ಮ ದೂರನ್ನು ಹೇಳಿ ಪರಿಹಾರ ಕಂಡುಕೊಳ್ಳಬೇಕು ಎಂದರು.
ದಾವಣಗೆರೆ ವೃತ್ತ ಬೆಸ್ಕಾಂ ಅಧೀಕ್ಷಕ ಅಭಿಯಂತರರಾದ ಬಿ.ಎಸ್ ಜಗದೀಶ್ ಪ್ರಾಸ್ತಾವಿಕವಾಗಿ ಮಾತನಾಡಿ, 75ನೇ ಸ್ವಾತಂತ್ರ್ಯದ ಮಹೋತ್ಸವ ಹಿನ್ನೆಲೆಯಲ್ಲಿ ಉಜ್ವಲ ಭಾರತ ಉಜ್ವಲ ಭವಿಷ್ಯ ಎಂಬ ವಿದ್ಯುತ್ ಮಹೋತ್ಸವವನ್ನು ಆಯೋಜಿಸಲಾಗಿದೆ. ಕೇಂದ್ರ ಸರ್ಕಾರ ಬಿಪಿಎಲ್ ಗ್ರಾಹಕರಿಗೆ ಉಚಿತ ವಿದ್ಯುತ್ ಒದಗಿಸುವ ಉದ್ದೇಶದಿಂದ ‘ಸೌಭಾಗ್ಯ’ ಯೋಜನೆ ಜಾರಿಗೆ ತಂದಿದೆ. ಹಾಗೂ ರಾಜ್ಯ ಸರ್ಕಾರವು ಬೆಳಕು ಯೋಜನೆ ಅಡಿಯಲ್ಲಿ ಬಿಪಿಎಲ್ ಮತ್ತು ಎಪಿಎಲ್ ಕುಟುಂಬಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಯೋಜನೆಯನ್ನು ಜಾರಿ ಮಾಡಿದೆ. ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ ಒಟ್ಟು 9254 ಸಂಖ್ಯೆಗಳ ಗೃಹಪಯೋಗಿ ಸ್ಥಾವರಗಳಿಗೆ ಬೆಳಕು ಯೋಜನೆಯಲ್ಲಿ ಉಚಿತ ವಿದ್ಯುತ್ ಸಂಪರ್ಕವನ್ನು ನೀಡಲಾಗಿದೆ. ಗ್ರಾಹಕರಿಗೆ ಉತ್ತಮ ಮಟ್ಟದ ವಿದ್ಯುತ್ ತಲುಪಬೇಕು. ಯಾವುದೇ ತೊಂದರೆ ಆಗದಂತೆ ಪ್ರತಿ ತಿಂಗಳ ಮೂರನೇ ಶನಿವಾರ ವಿದ್ಯುತ್ ಅದಾಲತ್ ಕಾರ್ಯಕ್ರಮ ಆಯೋಜಿಸಿ ಸ್ಥಳದಲ್ಲಿಯೇ ಸಮಸ್ಯೆಯನ್ನು ಪರಿಹರಿಸಲಾಗುತ್ತಿದೆ. ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು 1912 ನ ಗ್ರಾಹಕ ಸೇವಾ ಕೇಂದ್ರದ ಮೂಲಕವು ಪರಿಹರಿಸಿಕೊಳ್ಳಬಹುದಾಗಿದೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಬೆಸ್ಕಾಂ ಕಾರ್ಯಪಾಲಕ ಅಭಿಯಂತರರಾದ ಎಂ.ಹೆಚ್ ವಿಜಯಲಕ್ಷ್ಮೀ, ಹರಿಹರ ಬೆಸ್ಕಾಂನ ಕಾರ್ಯಪಾಲಕ ಅಭಿಯಂತರರಾದ ವಿನಯ್ ಕುಮಾರ್ ಸೇರಿದಂತೆ ಬೆಸ್ಕಾಂ ಸಿಬ್ಬಂದಿಗಳು, ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DavanagereKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaದಾವಣಗೆರೆ
Share197Tweet123Send
Previous Post

ಪ್ರವೀಣ್ ಹತ್ಯೆ ಪ್ರಕರಣ: ಬೆಳ್ಳಾರೆಯ ಶಫೀಕ್, ಝಾಕಿರ್ ಸವಣೂರು ಅಂದರ್

Next Post

ಈಶ್ವರಪ್ಪರಿಗೆ ಗೃಹಖಾತೆ…? ಡ್ಯಾಮೇಜ್ ಸರಿ ಮಾಡಲು ಹೈಕಮಾಂಡ್ ತಂತ್ರ?!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಈಶ್ವರಪ್ಪರಿಗೆ ಗೃಹಖಾತೆ...? ಡ್ಯಾಮೇಜ್ ಸರಿ ಮಾಡಲು ಹೈಕಮಾಂಡ್ ತಂತ್ರ?!

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ನೈಋತ್ಯ ರೈಲ್ವೆ | 49 ಮಕ್ಕಳ ರಕ್ಷಣೆ, 33 ಲಕ್ಷದ ಗಾಂಜಾ, 30 ಲಕ್ಷದ ಕೊರಿಯನ್ ಸಿಗರೇಟ್ ವಶ

ನೈಋತ್ಯ ರೈಲ್ವೆ | 49 ಮಕ್ಕಳ ರಕ್ಷಣೆ, 33 ಲಕ್ಷದ ಗಾಂಜಾ, 30 ಲಕ್ಷದ ಕೊರಿಯನ್ ಸಿಗರೇಟ್ ವಶ

June 4, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ಕೃಷ್ಣರಾಜಪುರಂ – ವೈಟ್‌ಫೀಲ್ಡ್ ನಡುವೆ ಕಾಮಗಾರಿ: ಕೆಲವು ರೈಲುಗಳ ರದ್ದತಿ, ಭಾಗಶಃ ರದ್ದತಿ

June 4, 2026
ವಿನೋಬನಗರ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು | ಆರೋಪಿ ಬಂಧನ, ಬಂಗಾರದ ಆಭರಣ ವಶ

ವಿನೋಬನಗರ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು | ಆರೋಪಿ ಬಂಧನ, ಬಂಗಾರದ ಆಭರಣ ವಶ

June 4, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಮಂಗಳೂರು-ಹೈದರಾಬಾದ್ ವಿಶೇಷ ರೈಲು | ಮಂತ್ರಾಲಯಕ್ಕೆ ತೆರಳುವವರಿಗೆ ಅನುಕೂಲ

June 4, 2026
ಮೇ ತಿಂಗಳಲ್ಲಿ ನೈಋತ್ಯ ರೈಲ್ವೆ ದಾಖಲೆ ಸಾಧನೆ | ಸರಕು ಸಾಗಣೆ, ಆದಾಯದಲ್ಲಿ ಗಣನೀಯ ಏರಿಕೆ

ಮೇ ತಿಂಗಳಲ್ಲಿ ನೈಋತ್ಯ ರೈಲ್ವೆ ದಾಖಲೆ ಸಾಧನೆ | ಸರಕು ಸಾಗಣೆ, ಆದಾಯದಲ್ಲಿ ಗಣನೀಯ ಏರಿಕೆ

June 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL