ಕಲ್ಪ ಮೀಡಿಯಾ ಹೌಸ್ | ಧಾರವಾಡ |
ಇಲ್ಲಿನ ಉಚ್ಚ ನ್ಯಾಯಾಲಯದ ಕಾನೂನು ಸೇವಾ ಸಮಿತಿಯು ಹತ್ತು ವರ್ಷಗಳಿಂದ ದೂರವಾಗಿದ್ದ ದಂಪತಿಗಳನ್ನು ಪರಸ್ಪರ ಒಂದುಗೂಡಿಸಿದೆ.
ಧಾರವಾಡದ ಸುಜಾತಾ ಹಾಗೂ ಶಿವಮೊಗ್ಗದ ದೀಪಕ ದಿನಕರ ಅವರು ದಂಪತಿಗಳು ಭಿನ್ನಾಭಿಪ್ರಾಯಗಳಿಂದ ಪರಸ್ಪರ ಹತ್ತು ವರ್ಷಗಳಿಂದ ದೂರವಾಗಿದ್ದರು. ಪತಿ ದೀಪಕ್ ಅವರು ವಿಚ್ಛೇದನ ಕೋರಿ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ನಿರಾ ಎಂಬ 11 ವರ್ಷದ ಹೆಣ್ಣು ಮಗಳಿರುವ ಈ ದಂಪತಿಗಳನ್ನು ನ್ಯಾಯಮೂರ್ತಿಗಳ ಸಲಹೆ ಮೇರೆಗೆ ಮಧ್ಯಸ್ಥಿಕೆಗಾರರ ಎದುರು ಹಾಜರು ಪಡಿಸಲಾಯಿತು.

Also read: ಹತ್ತರಲ್ಲಿ ಹನ್ನೊಂದಾಗಬೇಡಿ, ವಿಶಿಷ್ಟವಾಗಿ ಗುರುತಿಸಿಕೊಳ್ಳಿ: ಬೆನ್ಜ್ ಕಂಪೆನಿ ಸಿಇಒ ಮನು ಸಾಲೆ ಕರೆ
ಒಂದಾದ ದಂಪತಿಗಳನ್ನು ನ್ಯಾಯಧೀಶರಾದ ಕೃಷ್ಣ ಎಸ್ ದೀಕ್ಷಿತ್ ಮತ್ತು ಪಿ. ಕೃಷ್ಣ ಭಟ್ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠದ ಮುಂದೆ ಹಾಜರು ಪಡಿಸಲಾಯಿತು. ನ್ಯಾಯಾಧೀಶರುಗಳು ದಂಪತಿಗಳು ಮತ್ತೆ ಒಂದಾಗಿರುವುದರ ಬಗ್ಗೆ ತಿಳಿದು ಹರ್ಷ ವ್ಯಕ್ತಪಡಿಸಿದರು. ದಂಪತಿಗಳು ಇಂದು ಜೊತೆಯಾಗಿ ಶಿವಮೊಗ್ಗದಲ್ಲಿರುವ ಪತಿಯ ಮನೆಗೆ ತೆರಳಿದರು ಎಂದು ಹೈಕೋರ್ಟ್ ಪೀಠದ ಅಧಿಕ ವಿಲೇಖನಾಧಿಕಾರಿ ವೆಂಕಟೇಶ ಆರ್ ಹುಲಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.










Discussion about this post