ಕಲ್ಪ ಮೀಡಿಯಾ ಹೌಸ್ | ಹೊಸಪೇಟೆ |
ವಿಜಯನಗರ ಹೂಸಪೇಟೆ ನಗರದ ಭಟ್ರಹಳ್ಳಿ ಆಂಜನೇಯ ದೇವಸ್ಥಾನದ ಸಮೀಪ ನಿರ್ಮಿಸಿರುವ ಭವ್ಯ ವೇದಿಕೆಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ, ಗೋ ಮಾತೆಗೆ ಪೂಜೆ ಸಲ್ಲಿಸುವ ಮೂಲಕ ಹಾಗೂ ಬಿಜೆಪಿ ಬಾವುಟ ಹಾರಿಸುವುದರೊಂದಿಗೆ ಆರಂಭಗೊಂಡಿದೆ. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ , ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ,ಜಗದೀಶ್ ಶೆಟ್ಟರ್, ಡಿ. ವಿ. ಸದಾನಂದ ಗೌಡ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ. ಎಲ್. ಸಂತೋಷ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ, ರಾಜ್ಯ ಸಹ ಉಸ್ತುವಾರಿ ಡಿ. ಕೆ. ಅರುಣಾ, ಸಚಿವರಾದ ಆನಂದ್ ಸಿಂಗ್, ಶಶಿಕಲಾ ಜೊಲ್ಲೆ, ವಿಜಯನಗರ ಜಿಲ್ಲಾಧ್ಯಕ್ಷ ಚೆನ್ನಬಸವನಗೌಡ ಪಟೇಲ್, ಸಚಿವರು, ಶಾಸಕರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಮುರುಳೀಧರ್ ನಾಡಿಗೇರ್
ಹೊಸಪೇಟೆ
ಮುರುಳೀಧರ್ ನಾಡಿಗೇರ್, ಹೊಸಪೇಟೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















