ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ರಾಜ್ಯದಲ್ಲಿ ಪರಿಸ್ಥಿತಿ ಶಾಂತವಾಗಿದ್ದು ನಿಯಂತ್ರಣದಲ್ಲಿದೆ. ಆದರೂ ಜಾಗೃತವಾಗಿರಬೇಕೆಂದು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವಾದಿ ಮೊಹಮ್ಮದ್ ಕುರಿತು ನೂಪುರ್ ಶರ್ಮಾ ನೀಡಿದ್ದ ಹೇಳಿಕೆ ವಿರೋಧಿಸಿ ದೇಶದ ಕೆಲವೆಡೆ ಪ್ರತಿಭಟನೆ ಭುಗಿಲೆದಿದ್ದು, ಮುಂಜಾಗ್ರತಾ ಕ್ರಮವಾಗಿ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಎಲ್ಲ ಸಮುದಾಯದವರ ಜತೆ ಸೌಹಾರ್ದಯುತ ವಾತಾವರಣ ನಿರ್ಮಿಸುವಂತೆ ಸೂಚಿಸಲಾಗಿದೆ ಎಂದರು.
Also read: ಭದ್ರಾವತಿ ಟಿಎಂಎಇಎಸ್ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ಪ್ರವೇಶಾತಿಗೆ ಅರ್ಜಿ ಆಹ್ವಾನ
ಪ್ರತಿಯೊಂದು ಠಾಣೆಯ ಸಿಪಿಐ ಅವರನ್ನು ಉಸ್ತುವಾರಿ ಮಾಡಲಾಗಿದೆ. ಹುಧಾ ಪೊಲೀಸ್ ಕಮಿಷನರ್ ಹಾಗೂ ಧಾರವಾಡ ಎಸ್ಪಿ ಜೊತೆಯೂ ಈ ಕುರಿತು ಚರ್ಚಿಸಿದ್ದೇನೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post