ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ಏಪ್ರಿಲ್ 5 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು PM Narendra Modi ಸರ್ಕಾರಿ ವಿಶೇಷ ಕಾರ್ಯಕ್ರಮಗಳ ಉದ್ಘಾಟನೆಗಾಗಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ತಿಳಿಸಿದರು.
ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ದೆಹಲಿಯಲ್ಲಿ ವರಿಷ್ಠರೊಂದಿಗೆ ಚರ್ಚೆಯಾಗಬೇಕು. ವರಿಷ್ಠರು ಕರೆದಾಗ ದೆಹಲಿಗೆ ಹೋಗುತ್ತೇನೆ.
-ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ
Also read: ಕಮಠಾಣಾ, ಮನ್ನಾಎಖೇಳ್ಳಿಯನ್ನು ಪಪಂಗಳನ್ನಾಗಿ ಘೋಷಣೆ ಮಾಡುವಂತೆ ಖಾಶೆಂಪುರ್ ಒತ್ತಾಯ
ಕೇಂದ್ರ ಸಚಿವ ಅಮಿತ್ ಷಾ ಅವರಿಂದ ಕ್ಷೀರ ಅಭಿವೃದ್ಧಿ ಬ್ಯಾಂಕ್ ಉದ್ಘಾಟನೆ:
ಏಪ್ರಿಲ್ 1 ರಂದು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಷಾ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಸಹಕಾರಿ ರಂಗದಲ್ಲಿ ಹಲವಾರು ಸುಧಾರಣೆಗಳನ್ನು ತರಬೇಕೆಂಬ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಕ್ಷೀರ ಅಭಿವೃದ್ಧಿ ಬ್ಯಾಂಕ್ ಪ್ರಾರಂಭ ಮಾಡಲು ಉದ್ದೇಶಿಸಿದೆ. ಅದರ ಲಾಂಛನದ ಉದ್ಘಾಟನೆ ಮಾಡಲು ಬೃಹತ್ ಸಭೆ ಏರ್ಪಾಡು ಮಾಡಲಾಗುತ್ತಿದೆ. ಕ್ಷೀರ ಕ್ಷೇತ್ರದಲ್ಲಿ ಆರ್ಥಿಕ ಅಭಿವೃದ್ಧಿಗೆ ಇಂಬು ನೀಡಿ ಆರ್ಥಿಕ ಕ್ರಾಂತಿಯಾಗಲಿದೆ. ಇದರಿಂದ ರೈತರ ಆದಾಯ ದೊಡ್ಡ ಪ್ರಮಾಣದಲ್ಲಿ ಹೆಚ್ಚಾಗಲಿದೆ. ರೈತರಿಗೆ ಆರ್ಥಿಕ ಸಹಾಯ ದೊರೆಯಲು ನೆರವಾಗಲಿದೆ. ಲಾಂಛನ ಹಾಗೂ ಯಾಶಸ್ವಿನಿ ಯೋಜನೆಯ ಉದ್ಘಾಟನೆಯನ್ನು ಅಮಿತ್ ಷಾ ಅವರು ನೆರವೇರಿಸಲಿದ್ದಾರೆ ಎಂದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post