ಕಲ್ಪ ಮೀಡಿಯಾ ಹೌಸ್ | ಕಲಬುರಗಿ |
ಪುನೀತ್ ರಾಜ್‌ಕುಮಾರ್ Puneeth Rajkumar ಅವರನ್ನು ಮರಳಿ ಕಳುಹಿಸು ಪ್ರಭುವೇ ಎಂದು ಅಪ್ಪು ಅಭಿಮಾನಿ ಯೋರ್ವರು ಬರೆದು ದೇವರ ಹುಂಡಿಯಲ್ಲಿ ಹಾಕಿರುವ ಚೀಟಿ ಸಿಕ್ಕಿದ್ದು, ಅಪ್ಪು ಅವರನ್ನು ಮತ್ತೆ ಕಳುಹಿಸಿ ಎಂದು ದೇವರ ಮೊರೆ ಹೋಗಿರುವ ಈ ವಿಚಾರ ಭಾವನಾತ್ಮಕವಾಗಿದೆ.
ಕಲಬುರಗಿಯ ಅಫಜಲಪುರ ತಾಲೂಕಿನ ಸುಪ್ರಸಿದ್ಧ ಗಾಣಗಾಪುರದ ದತ್ತಾತ್ರೇಯ ದೇವಸ್ಥಾನದ ಹುಂಡಿಯಲ್ಲಿ ಪುನೀತ್ ರಾಜ್‌ಕುಮಾರ್ ಅವರನ್ನು ಮರಳಿ ಕಳುಹಿಸು ಪ್ರಭು ಎಂದು ಬರೆದ ಚೀಟಿ ಸಿಕ್ಕಿದೆ. ದೇವಸ್ಥಾನದ ಹುಂಡಿ ಎಣಿಕೆ ಸಂದರ್ಭದಲ್ಲಿ ಈ ಚೀಟಿ ದೊರೆತಿದೆ.
ಕನ್ನಡ ಚಿತ್ರರಂಗದ ಯುವರತ್ನ ಪುನೀತ್ ರಾಜ್‌ಕುಮಾರ್ ನಮ್ಮನ್ನೆಲ್ಲ ಅಗಲಿ ತಿಂಗಳುಗಳು ಉರುಳಿವೆ. ಆದ್ರೆ, ಅಪ್ಪು ನೆನಪಲ್ಲಿ ಅದೆಷ್ಟೋ ಒಳ್ಳೆ ಕಾರ್ಯಗಳು ನಿತ್ಯವೂ ನಡೆಯುತ್ತಿವೆ. ಅಭಿಮಾನಿಗಳ ಹೃದಯದಲ್ಲಿ ಅಪ್ಪು ಅಜರಾಮರರಾಗಿದ್ದಾರೆ.
Also read: ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಹಿನ್ನೆಲೆ ಮುಸ್ಲಿಂ ವ್ಯಕ್ತಿ ಹತ್ಯೆ: ತನಿಖೆಗೆ ಸಿಎಂ ಯೋಗಿ ಆದೇಶ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post