ಕಲ್ಪ ಮೀಡಿಯಾ ಹೌಸ್ | ಮಡಿಕೇರಿ |
ಕೊಡಗು ಜಿಲ್ಲೆಯ ಕೆಲವೆಡೆ ಮಂಗಳವಾರ ರಾತ್ರಿ ಇಡೀ ಧಾರಾಕಾರವಾಗಿ ಮಳೆಯಾಗಿದ್ದು,, ದೇವರಕೊಲ್ಲಿ ಹಾಗೂ ಕೊಯನಾಡು ಮಾರ್ಗದ ರಸ್ತೆಯಲ್ಲಿ ದೊಡ್ಡ ಗಾತ್ರದ ಬಿರುಕುಗಳು ಮೂಡಿವೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಹಾಗೂ ಖಾಸಗಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಕೊಡಗು ಜಿಲ್ಲೆಯ ಗಡಿಭಾಗವಾದ ಕಲ್ಲುಗುಂಡಿ, ಸಂಪಾಜೆ, ಗೂನಡ್ಕ ಗ್ರಾಮಗಳ ಹಲವು ಭಾಗಗಳು ಜಲಾವೃತಗೊಂಡಿವೆ. ಪಯಸ್ವಿನಿ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.
Also read: ಬಳ್ಳಾರಿ ಜಿಲ್ಲೆಯ ವಿವಿಧೆಡೆ ಮೊಹರಂ ಹಬ್ಬ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















