ಬೆಂಗಳೂರು: ಈಗಾಗಲೇ ಕಂಡು ಕೇಳರಿಯದ ಪ್ರವಾಹಕ್ಕೆ ಬದುಕನ್ನೇ ಕಳೆದುಕೊಂಡಿರುವ ಕೊಡಗಿನಲ್ಲಿ ಭೂಕಂಪಕವಾಗಿದೆ ಎಂಬ ಸುದ್ದಿ ಹರಿದಾಡುತ್ತಿದ್ದ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಸರ್ಕಾರ ಈ ರೀತಿಯ ಯಾವುದೇ ಪ್ರಾಕೃತಿಕ ದುರ್ಘಟನೆ ನಡೆದಿಲ್ಲ ಎಂದಿದೆ.
ಈ ಕುರಿತಂತೆ ಸ್ವತಃ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಜಿಲ್ಲಾಧಿಕಾರಿಗಳು ಸ್ಪಷ್ಟನೆ ನೀಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ ಸುದ್ದಿ ಸುಳ್ಳು. ಯಾರೋ ಕಿಡಿಗೇಡಿಗಳು ಇಂತಹ ಸಂದೇಶ ಹರಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಭೂಕಂಪನವಾಗಲಿದೆ ಎಂಬ ಸುದ್ದಿ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಅಥವಾ ಭೂ ವಿಜ್ಞಾನ ಇಲಾಖೆ ಯಾವುದೇ ಮುನ್ಸೂಚನೆ ನೀಡಿಲ್ಲ. ಆದ್ದರಿಂದ ಇಂತಹ ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದಾಗಿ ಕೊಡಗು ಜಿಲ್ಲೆ ಜಿಲ್ಲಾಧಿಕಾರಿ ವಿನಂತಿಸಿದ್ದಾರೆ.#KarnatakaRains pic.twitter.com/an61SUnUYQ
— CM of Karnataka (@CMofKarnataka) August 18, 2018
ಕೊಡಗು ಜಿಲ್ಲೆಯಲ್ಲಿ ಭೂಕಂಪನವಾಗಲಿದೆ ಎಂಬ ಸುದ್ದಿ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಅಥವಾ ಭೂ ವಿಜ್ಞಾನ ಇಲಾಖೆ ಯಾವುದೇ ಮುನ್ಸೂಚನೆ ನೀಡಿಲ್ಲ. ಆದ್ದರಿಂದ ಇಂತಹ ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದಾಗಿ ಕೊಡಗು ಜಿಲ್ಲೆ ಜಿಲ್ಲಾಧಿಕಾರಿ ವಿನಂತಿಸಿದ್ದಾರೆ.
Discussion about this post