ಕಲ್ಪ ಮೀಡಿಯಾ ಹೌಸ್ | ಮಂಡ್ಯ |
ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಭರ್ತಿಯಾಗಿರುವ ಕೆಆರ್‌ಎಸ್ ಮತ್ತು ಕಬಿನಿ ಜಲಾಶಯಕ್ಕೆ KRS, Kabini Dam ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಪತ್ನಿಯೊಂದಿಗೆ ಬಾಗಿನ ಅರ್ಪಿಸಿ, ನಂತರ ಜಲಾಶಯದ ತಟದಲ್ಲಿರುವ ಕಾವೇರಿ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಅಬಕಾರಿ ಇಲಾಖೆ ಸಚಿವ ಕೆ.ಗೋಪಾಲಯ್ಯ, ರೇಷ್ಮೆ, ಯುವಜನಸೇವೆ ಮತ್ತು ಕ್ರೀಡಾ ಇಲಾಖೆ ಸಚಿವ ಕೆ.ಸಿ. ನಾರಾಯಣಗೌಡ, ಶಾಸಕರಾದ ಅನಿಲ್ ಚಿಕ್ಕಮಾದು, ಹರ್ಷವರ್ಧನ್, ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಶಿವಣ್ಣ, ಜಿಲ್ಲಾ ಪಂಚಾಯಿತಿ ಸಿಇಒ ಬಿ.ಆರ್. ಪೂರ್ಣಿಮಾ ಪಾಲ್ಗೊಂಡಿದ್ದರು. ತುಂಗಾಭದ್ರಾ ಜಲಾಶಯ ಭರ್ತಿಯಾದ ಹಿನ್ನೆಲೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಪ್ರವಾಸೋದ್ಯಮ ಹಾಗೂ ಪರಿಸರ ಇಲಾಖೆ ಸಚಿವ ಆನಂದ್ ಸಿಂಗ್ ಉಪಸ್ಥಿತರಿದ್ದರು.
Also read: ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ: ಕೆ.ಎಸ್. ಈಶ್ವರಪ್ಪಗೆ ಬಿಗ್ ರಿಲೀಫ್
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post